ರಾಜ್ಯಮಟ್ಟದ ಕರಾಟೆ ಸ್ಪರ್ಧೆ-ಎಕ್ಸಲೆಂಟ್‌ನ ಶ್ರೇಯಸ್ ಸಿ ಲಿಂಗರಾಜು ರಾಷ್ಟçಮಟ್ಟಕ್ಕೆ ಆಯ್ಕೆ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -೪೫ ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ADVRTISEMENT

Leave a Reply

Your email address will not be published. Required fields are marked *