Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ : ಕಳೆದ ಹಲವು ವಷ೯ಗಳಿಂದ ಉಸಿರಾಟದ ತೊಂದರೆ ಸಹಿತ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಾಡುಹಕ್ಕಿ, ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ(88) ಗುರುವಾರ ನಸುಕಿನ ವೇಳೆ ಅಂಕೋಲಾದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿಯ ಸುಕ್ರಜ್ಜಿ ಕಳೆದ ಹಲವು ವರ್ಷದಿಂದ ಉಸಿರಾಟದ ಸಮಸ್ಯೆ ಸೇರಿದಂತೆ ಕೆಲ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅವರು ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಳೆದ ಎರಡು ದಿನದ ಹಿಂದೆಯೂ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. ಆದರೆ ಗುರುವಾರ ಮುಂಜಾನೆ ಸುಮಾರು 3.30 ಗಂಟೆಗೆ ಕೊನೆಯುಸಿರು ನಿಧನ ಹೊಂದಿದ್ದಾರೆ.
ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದ ಸುಕ್ರಜ್ಜಿ 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿ ಉತ್ತರಕನ್ನಡ ಜಿಲ್ಲೆಗೆ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ, ತಮ್ಮೂರನ್ನು ಸರಾಯಿ ಮುಕ್ತ ಗ್ರಾಮವನ್ನಾಗಿಸಲು ಹೋರಾಟಗಳ ಮೂಲಕ ಮುಂಚೂಣಿಯಲ್ಲಿ ಇರುತ್ತಿದ್ದರು.
ದುರ್ದೈವದ ಸಂಗತಿ ಅಂದರೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ಮಾಡಿದ್ದರೂ ಕೂಡ ಜಿಲ್ಲೆಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲದೆ ಹಲವು ಬಾರಿ ಚಿಕಿತ್ಸೆಗಾಗಿ ದೂರದ ಮಂಗಳೂರು, ಮಣಿಪಾಲ್ ಗೆ ತೆರಳಿ ಆಸ್ಪತ್ರೆಗೆ ದಾಖಲಾಗುವಂತಾಗಿತ್ತು.
ಬಡಗೇರಿಯನ್ನು ಸಾರಾಯಿ ಮುಕ್ತ ಗ್ರಾಮ ಮಾಡುವಲ್ಲಿ ಅವಿರತವಾಗಿ ಹೋರಾಡಿದ್ದ ಸುಕ್ರಜ್ಜಿ, ಯಾವುದೇ ಕಾರ್ಯಕ್ರಮಗಳಿಗೆ ಹೋದಾಗಲೂ ಸಾರಾಯಿ ತ್ಯಜಿಸುವಂತೆ ಕರೆ ನೀಡುತ್ತಿದ್ದರು. ಇದಲ್ಲದೇ ಜಿಲ್ಲೆಯ ಅನೇಕ ಹೋರಾಟಗಳಲ್ಲಿ ಸುಕ್ರಜ್ಜಿ ಮುಂಚೂಣಿಯಲ್ಲಿ ಇದ್ದು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು.
ಇತ್ತೀಚೆಗೆ ಅನಾರೋಗ್ಯದ ಹಿನ್ನಲೆ ಅಷ್ಟಾಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲವಾಗಿದ್ದು, ಇಂದು ಕೊನೆಯುಸಿರೆಳೆದಿರುವುದು ಜಿಲ್ಲೆಯ ಜಾನಪದ ಲೋಕದ ಮೇರು ಕೊಂಡಿ ಕಳಚಿದಂತಾಗಿದೆ. ಸುಕ್ರಿ ಬೊಮ್ಮ ಗೌಡ ನಿಧನಕ್ಕೆ ಜಿಲ್ಲೆಯ ಅನೇಕ ಗಣ್ಯರು, ಸಾಹಿತಿಗಳು, ಜಾನಪದ ಕಲಾವಿದರು, ಜನಸಾಮಾನ್ಯರು ಕಂಬನಿ ಮಿಡಿದಿದ್ದಾರೆ.
ಇನ್ನು ಇತ್ತೀಚೆಗೆ ಹಾಲಕ್ಕಿ ಒಕ್ಕಲಿಗ ಸಮುದಾಯದವರೇ ಆಗಿದ್ದ ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಕೂಡ ನಿಧನರಾಗಿದ್ದರು. ಇಬ್ಬರು ಅಕ್ಕತಂಗಿಯರಂತೆ ಇದ್ದ ಇಬ್ಬರು ಹಾಲಕ್ಕಿ ಸಮುದಾಯದಲ್ಲಿ ಪದ್ಮಶ್ರೀ ಪುರಸ್ಕೃತರಾಗಿ ಸಮುದಾಯದಲ್ಲಿ ಕಳಸಪ್ರಾಯದಂತಿದ್ದರು.
ADVRTISEMENT



Leave a Reply