ನಾಳೆ (ಜು.18) ದ.ಕ. ಜಿಲ್ಲೆಯ 5 ತಾಲೂಕಿನ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಜುಲೈ 18, 2024 ರಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಸೂಚನೆ ಪ್ರಕಾರ, ಈ ರಜೆಯನ್ನು ಘೋಷಿಸುವುದಕ್ಕೆ ಹವಾಮಾನ ವೈಪರೀತ್ಯ ಮತ್ತು ಸುರಕ್ಷತಾ ಕಾರಣಗಳು ಕಾರಣವಾಗಿದೆ. ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಯು ಸುರಕ್ಷಿತವಾಗಿರಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

ADVRTISEMENT