ಮೂಡುಬಿದಿರೆ: ನಿನ್ನೆ ಬೀಸಿದ ಗಾಳಿ ಮಳೆಗೆ ಮಾಸ್ತಿಕಟ್ಟೆ ಪ್ರದೇಶದಲ್ಲಿ ರಸ್ತೆಗೆ ಅಡ್ಡವಾಗಿ ಮರವೊಂದು ಬಿದ್ದಿದ್ದು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿತ್ತು.
ನಿನ್ನೆ ಮೂಡುಬಿದಿರೆಯ ಮಾಸ್ತಿಕಟ್ಟೆ ಪ್ರದೇಶದಲ್ಲಿ ತೀವ್ರ ಗಾಳಿ ಮಳೆಯಿಂದಾಗಿ ದೊಡ್ಡ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯುಂಟಾಯಿತು. ಸ್ಥಳೀಯರು ಈ ವಿಷಯವನ್ನು ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಅವರಿಗೆ ತಿಳಿಸಿದ್ದು, ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಬಂದರು.
ಪ್ರಸಾದ್ ಕುಮಾರ್ ಅವರು ಸ್ಥಳೀಯರ ಸಹಕಾರದೊಂದಿಗೆ, ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಇದರಿಂದಾಗಿ ವಾಹನ ಸಂಚಾರ ಸುಗಮವಾಯಿತು.
ಈ ಗಾಳಿ ಮಳೆಯಿಂದಾಗಿ ಇದೇ ಪ್ರದೇಶದಲ್ಲಿರುವ ಕೆಲವು ಮನೆಗಳಿಗೆ ಹಾನಿಯುಂಟಾಗಿದೆ.














