Subscriber Content

Add content here that will only be visible to your subscribers.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಸಂಪ್ರದಾಯ ದಿನ

ಮೂಡುಬಿದಿರೆ: ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯನಾಗಲು ಸಾಧ್ಯ. ನಾವೆಲ್ಲ ಮನುಷ್ಯರಾಗೋಣ. ಮನುಷ್ಯತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರ ಜೊತೆಯಾಗೋಣ’ ಎಂದು ನಟ, ರಂಗಕರ್ಮಿ ಅರುಣ್ ಸಾಗರ್ ಹೇಳಿದರು.


ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಮಂಗಳವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಸಂಪ್ರದಾಯ ದಿನ- 2024 ಉದ್ಘಾಟಿಸಿ ಅವರು ಮಾತನಾಡಿದರು.
ಆಳ್ವರ ಸಮಯ ಪ್ರಜ್ಞೆ ಬಗ್ಗೆ ಗೌರವವಿದೆ. ಅವರದ್ದು ಅನುಭವ ಅನುಭಾವವಾಗಿಸಿದ ವ್ಯಕ್ತಿತ್ವ. ಕಲಿಕೆ, ಕನಸು, ನನಸು ಅವರ ಹಾದಿ. ನಾವೆಲ್ಲ ಒಳ್ಳೆ ಮನುಷ್ಯರಾಗಲು ಕಲಿಯೋಣ. ಮಗುವಿಗೆ ಜ್ಞಾನ ನೀಡಿ ಹೃದಯ ಭಾವನೆ ಅರಳಿಸುವುದು ಶಿಕ್ಷಣ. ಒಳ್ಳೆಯವರಾಗಿ ಬದುಕುವುದೇ ಸಂಸ್ಕೃತಿ. ಜೀವನದಲ್ಲಿ ಪಾಸು ಫೇಲ್ ಇಲ್ಲ, ಪ್ರತಿ ಕ್ಷಣವೂ ಪರೀಕ್ಷೆ ಎಂದರು.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ, ಇಲ್ಲಿ ನಡೆಯುವ ಪ್ರತಿ ಕಾರ್ಯವೂ ಅನನ್ಯ. ನಾನು 8 ವರ್ಷಗಳ ಹಿಂದೆ ಆಳ್ವಾಸ್‌ಗೆ ಬಂದಿದ್ದೇನೆ. ಈಗ ಬೃಹತ್ ಆಗಿ ಬೆಳೆದು ನಿಂತಿದೆ. ದೇಶದ ವಿದ್ಯಾರ್ಥಿಗಳನ್ನು ತನ್ನತ್ತ ಸೆಳೆಯುತ್ತಿದೆ ಎಂದರು.
ರೇಸರ್ ಅರವಿಂದ ಕೆ.ಪಿ., ನಟಿ ಚೈತ್ರಾ ಶೆಟ್ಟಿ, ನಟಿ ವಿಜೇತಾ ಪೂಜಾರಿ, ನಟ ಮೈಮ್ ರಾಮದಾಸ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.
ಮಹಾರಾಷ್ಟ್ರ, ಗುಜರಾತ್, ಈಶಾನ್ಯ ಭಾರತ, ಕೇರಳ, ಕರಾವಳಿ ಕರ್ನಾಟಕ, ಇತರೆ ಭಾರತ ಸೇರಿದಂತೆ ಆರು ತಂಡಗಳು ತಮ್ಮ ತವರೂರಿನ ಕಲಾ ಪ್ರಕಾರವನ್ನು ಪ್ರದರ್ಶಿಸಿದರು. ಪಿಲಿ ನಲಿಕೆ, ನಿಹಾಲ್ ತಾವ್ರೋರಿಂದ ಸಂಗೀತ ಕಾರ್ಯಕ್ರಮ, , ಫೈರ್ ಡ್ಯಾನ್ಸ್, ಕನ್ನಡ ಕಾಮೆಡಿ, ಬೀಟ್ ಗುರು ತಂಡದ ಕಾರ್ಯಕ್ರಮ, ಆಹಾರ ಮೇಳ, ಕಲಾ ಪ್ರದರ್ಶನಗಳಿಂದ ಕಾರ್ಯಕ್ರಮ ಕಂಗೊಳಿಸಿತು.
ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದ ಪರಿಚಯ ಕಾರ್ಯಕ್ರಮ ನಡೆಯಿತು. ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನಿಯಾ ಅಯ್ಯರ್, ನಟಿ ಮಾನಸಿ ಸುಧೀರ್, ಸೃಜನಾ ಇದ್ದರು. ಗಾಯಕ ನಿಹಾಲ್ ತಾವ್ರೋ ಹಾಡಿ ರಂಜಿಸಿದರು.
ಅವಿನಾಶ್ ಕಟೀಲ್ ಕಾರ್ಯಕ್ರಮ ನಿರೂಪಿಸಿದರು.ನಿತೇಶ್ ಮಾರ್ನಾಡ್ ಸಾಂಸ್ಕೃತಿಕ ಕಾರ್ಯಕ್ರಮ

ADVRTISEMENT