ಮೂಡುಬಿದಿರೆ: ವಿರಾಸತ್ ಎರಡು ಜಿಲ್ಲೆಗಳ ಅಭೂತಪೂರ್ವ ಕಾರ್ಯಕ್ರಮ. ಸಾಂಸ್ಕೃತಿಕತೆ ಮತ್ತು ಸಾಹಿತ್ಯ ಎರಡು ಜತೆ ಜತೆಯಾಗಿ ನಡೆಯುತ್ತಿರುವ ಕಾರ್ಯಕ್ರಮವೇ ‘ವಿರಾಸತ್’. ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಆಳ್ವಾಸ್ ವಿರಾಸತ್ ನ ವೈಭವವನ್ನು ವರ್ಣಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಇಂದಿನಿಂದ ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೩೦ನೇ ವರ್ಷದ ‘ಅಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಮಂಗಳವಾರ ಸಂಜೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಳ್ವಾಸ್ ವಿರಾಸತ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ಆಳ್ವರು ಹೃದಯ ವೈಶಾಲ್ಯತೆಯನ್ನು ಹೊಂದಿರುವ ವ್ಯಕ್ತಿ. ಇಂತಹ ಹೃದಯವಂತ ವ್ಯಕ್ತಿ ಇನ್ನೊಬ್ಬರನ್ನು ನಾ ಕಂಡಿಲ್ಲ ಎಂದು ಆಳ್ವರ ವ್ಯಕ್ತಿತ್ವವನ್ನು ಹಾಡಿ ಹೊಗಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಆಳ್ವರ ದೃಷ್ಟಿಯೇ ಕ್ರಿಯೆಯಾಗಿ ಇಲ್ಲಿ ರೂಪುಗೊಂಡಿದೆ ಎಂದರು.
ನಾನು ಅವರನ್ನು ನಾಲ್ಕು ದಶಕಗಳಿಂದ ಕಂಡಿದ್ದೇನೆ. ಅವರ ಪ್ರಯೋಗ ಇಂದು ನಾಡಿಗೆ ಕೊಡುಗೆ ನೀಡಿದೆ ಎಂದರು.
ಆಳ್ವಾಸ್ ಆವರಣವು ಚಂದಮಾಮದ ಅಮರಾವತಿ ಹಾಗೂ ಇಂದ್ರ ನಗರಿಯ ನೆನಪಿಸುತ್ತದೆ. ಹೊಸ ಲೋಕವೇ ಇಲ್ಲಿ ಸೃಷ್ಟಿಯಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಅಂದು ಊರಿಗೆ ಸೀಮಿತವಾಗಿದ್ದ ವಿರಾಸತ್ ಇಂದು ರಾಷ್ಟ್ರೀಯ ಹಬ್ಬವಾಗಿದೆ. ಇಂದು ದೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ೫೨ ಕೋಟಿ ಇದೆ. ಯುವ ಸಂಪತ್ತು ಬಗ್ಗೆ ನಾವು ಯೋಚಿಸಬೇಕು ಎಂದರು.
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಕ್ರೀಡೆ, ಸಾಂಸ್ಕೃತಿಕ ತರಬೇತಿ ನೀಡುತ್ತಿದ್ದೇವೆ. ಎಂದರು
ನಮ್ಮ ಸಂಸ್ಥೆಯಲ್ಲಿ ಪ್ರತಿವರ್ಷ ೪೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ತರಬೇತಿ ಪಡೆದು, ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಆರಂಭದಲ್ಲಿ ಗಿರಿಧರ್ ಅವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಮೂಡಿದ ‘ಬೆಳಕಾಗಿ ಬಾ’ ಹಾಗೂ ಡಾ.ಎನ್.ಕೆ. ಪದ್ಮನಾಭ ವಿರಚಿತ ‘ಪರಹಿತ ಬಯಸೋ’ ಪ್ರಾರ್ಥನೆಯನ್ನು ಹಾಡಲಾಯಿತು.
ಆಳ್ವಾಸ್ ವಿರಾಸತ್ ೩೦ನೇ ವರ್ಷದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಹೊರತಂದಿರುವ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ದಂಪತಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಕಟೀಲು ದುರ್ಗಾಪರಮೇಶ್ವರಿ ದೇವಾಲಯದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ, ಶಾರದಾ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಬಿ.ಪುರಾಣಿಕ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎಲ್.ಎನ್. ಎಂಜಿನಿಯರಿಂಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ,, ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್ ಪೋರ್ಟ್ ನ ಎಂ.ರವೀಂದ್ರನಾಥ ಆಳ್ವ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, , ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶ್ಯೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಕೆನರಾ ಬ್ಯಾಂಕಿನ ಸುಧಾಕರ್ ಕೊಠಾರಿ, ಪ್ರಮುಖವಾದ ಜಯಶ್ರೀ ಅಮರನಾಥ ಶೆಟ್ಟಿ, ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ತಿಮ್ಮಯ್ಯ ಶೆಟ್ಟಿ, ರಾಮಯ್ಯ ಶೆಟ್ಟಿ, ಪತ್ರಕರ್ತ ಶ್ರೀನಿವಾಸ ಇಂದಾಜೆ, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ., ಮಂಗಳೂರು ಭಾರತ್ ಇನ್ಫ್ರಾಟೆಕ್ನ ಮುಸ್ತಾಫ ಎಸ್.ಎಂ, ಮೂಡುಬಿದಿರೆ ಬಿಮಲ್ ಕನ್ಸ್ಟ್ರಕ್ಷನ್ ನಪ್ರವೀಣ್ ಕುಮಾರ್ ವೇದಿಕೆಯಲ್ಲಿದ್ದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
