
ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿ ಓರ್ವ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ದುರ್ಗಟನೆ ರಾಷ್ಟ್ರೀಯ ಹೆದ್ದಾರಿ ಬನ್ನಡ್ಕದಲ್ಲಿ ಸಂಭವಿಸಿದೆ.ಪಡುಮಾರ್ನಾಡು ಪಂಚಾಯತ್ ಬಳಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ದುರ್ದೈವಿ.ವಿದ್ಯಾರ್ಥಿ ಆದಿತ್ಯ ಇಂದು ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ ಹೋಗಲು ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಆದಿತ್ಯ […]