Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಮಂಗಳೂರು ವಿವಿಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ದೇಶೀಯ ಮಟ್ಟದಲ್ಲಿ ಸಾರ್ವಕಾಲಿಕ ಸಾಧನೆ ಮೆರೆದಿದ್ದಾರಲ್ಲದೆ ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಸತತ 22ನೇ ಬಾರಿ ಸಮಗ್ರತಂಡ ಪ್ರಶಸ್ತಿಯನ್ನು ದ್ವಿತೀಯ ಸ್ಥಾನ ಪಡೆದ ತಂಡದಿಂದ 460 ಅಂಕಗಳ ಅಂತರದಲ್ಲಿ ಪಡೆಯುವುದರ ಜೊತೆಗೆ 11 ನೂತನ ಕೂಟದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿಗಳು ನಿರ್ಮಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಕ್ರೀಡಾ ಪ್ರೋತ್ಸಾಹಕ ಡಾ.ಎಂ. ಮೋಹನ ಆಳ್ವ ತಿಳಿಸಿದರು.ಅವರು ಸೋಮವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ […]

ಮೂಡುಬಿದಿರೆ: ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಸರ್ಕಾರ ಹಾಗೂ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ರೀಡಾಳುಗಳಿಗೆ ಸರ್ಕಾರವಾಗಲಿ ವಿಶ್ವವಿದ್ಯಾಲಯವಾಗಲಿ ಯಾವುದೇ ಪ್ರೋತ್ಸಾಹವನ್ನು ನೀಡುತ್ತಿಲ್ಲ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ ಮೋಹನ್ ಆಳ್ವ ಖೇದ ವ್ಯಕ್ತಪಡಿಸಿದ್ದಾರೆ.ಹಿಂದಿನ ವರ್ಷ ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಸುಮಾರು 1.8 ವರ್ಷಗಳೇ ಕಳೆದರೂ ಇದುವರೆಗೂ ಬಿಡುಗಡೆಯಾದ ಹಣವಿ.ವಿ. ಪಾವತಿ ಮಾಡಿರುವುದಿಲ್ಲ. ದೇಶಿಯ ಮಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಐದನೇ ಸ್ಥಾನಕ್ಕೆ ಏರಿಸಿದ ಆಳ್ವಾಸ್ ಕ್ರೀಡಾಳುಗಳಿಗೆ ಯಾವುದೇ ಪ್ರೋತ್ಸಾಹಕರವನ್ನು ಕೂಡ […]

ಮೂಡುಬಿದಿರೆ: ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆಯು (ಎನ್‌ಎಬಿಎಲ್) ಜಾಗತಿಕವಾಗಿ ಪರಿಗಣಿಸಲ್ಪಡುವ ಮಾನದಂಡವಾಗಿದೆ. ಈ ಪ್ರಯೋಗಾಲಯದ ಫಲಿತಾಂಶಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಾಸಾರ್ಹವಾಗಿರುತ್ತದೆ ಎಂದು ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿ ನಿರ್ದೇಶಕ ಶ್ರೀಕಾಂತ್ ಆರ್ ಹೇಳಿದರು.ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಎಂಬಿಎ ಸೆಮಿನಾರ್ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮತ್ತು ಅದರ ಪ್ರಯೋಜನಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎನ್‌ಎಬಿಎಲ್ […]

ಮೂಡುಬಿದಿರೆ: ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು’ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾದ (ಐಸಿಎಸ್‌ಐ) ಕೇಂದ್ರ ಸಮಿತಿ ಸದಸ್ಯ ಸಿ.ಎಸ್. ದ್ವಾರಕಾನಂದ್ ಹೇಳಿದರು.ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ‘ಶಿಕ್ಷಣ ತಜ್ಞರ ಸಶಕ್ತೀಕರಣ- ಶಿಕ್ಷಕರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು.ಇಷ್ಟಪಟ್ಟು ಓದಬೇಕು. ಕಷ್ಟ ಪಟ್ಟು ಓದುವ ಹಾಗೆ ಆಗಬಾರದು. ವಿದ್ಯಾರ್ಥಿಗಳಿಗೆ ಗುರಿ ಅತಿ ಮುಖ್ಯ. ಯಾವುದಕ್ಕಾಗಿ ಓದುತ್ತಿದ್ದೇವೆ ಎನ್ನುವ ಜ್ಞಾನ ನಿಮ್ಮಲ್ಲಿರಬೇಕು. […]

ಮೂಡುಬಿದಿರೆ: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯAತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. […]

ಮೂಡುಬಿದಿರೆ: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ `ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು […]

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರಿನ ಲಕ್ಷಿö್ಮÃ ಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ಸಹಯೋಗದಲ್ಲಿ ನವೆಂಬರ್ 21 ಮತ್ತು 22ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ಹೋಮೀಯೋಪಥಿ ಕಾಲೇಜಿನ ವಿದ್ಯಾರ್ಥಿಗಳು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ.ಶಶಾಂಕ್ ನಾಗರಾಜ್ ದೊಡ್ಡಮನಿ (55 ಕೆಜಿ ವಿಭಾಗ), ಈರಯ್ಯ ಬಸಯ್ಯ ಹಿರೇಮಠ್ (61 ಕೆಜಿ ವಿಭಾಗ), ಪವನ್ ಎಸ್ ದೊಡ್ರಲ್ […]

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ತಂಡವು ಕುಂದಾಪುರದ ಭಂಡಾಕರ‍್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಬಾಡಿ ಬಿಲ್ಡಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ದ್ವಿತೀಯ ತಂಡ ಪ್ರಶಸ್ತಿ ಎಸ್.ಡಿ.ಎಮ್ ಬಿ ಬಿ ಎಮ್ ಮಂಗಳೂರು, ತೃತೀಯ ತಂಡ ಪ್ರಶಸ್ತಿ ಸೆಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು ಪಡೆಯಿತು. 15ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ […]

ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು.ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟಿçÃಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ ಮತ್ತು […]

ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮಹತ್ವದ ಪ್ರಯೋಗ, ನಾಡೋಜ ಹಂಪನಾ ವಿರಚಿತ ದೇಸೀ ಮಹಾಕಾವ್ಯದ ರಂಗರೂಪ “ಚಾರುವಸಂತ ” ನಾಟಕವು ಮತ್ತೆ ರಂಗಕ್ಕೆ ಬರಲು ಸಿದ್ಧತೆ ನಡೆಸಿದೆ. ನ.21 ,22 ರಂದು ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡಭವನದಲ್ಲಿ ಮೊದಲೆರಡು ಪ್ರದರ್ಶನ ಏರ್ಪಡಿಸಲಾಗಿದೆ.ಡಾ.ನಾ.ದಾಮೋದರ ಶೆಟ್ಟಿ ರಚಿಸಿದ, ಡಾ.ಜೀವನ್ ರಾಂ ಸುಳ್ಯ ನಿರ್ದೇಶನದ ಚಾರುವಸಂತವು ಕಳೆದ ವರ್ಷ ರಾಜ್ಯಾದ್ಯಂತ ಪ್ರದರ್ಶನ ನಡೆಸಿ ಸಂಚಲನ ಮೂಡಿಸಿತ್ತು. ಬಹುಬೇಡಿಕೆಯ ನಾಟಕವಾಗಿರುವ ಚಾರುವಸಂತ ಮತ್ತೆ ತನ್ನ ಚೈತ್ರಯಾತ್ರೆ ಕೈಗೊಳ್ಳಲಿದೆ.ನ.21 ರಂದು ಗುರುವಾರ ಸಂಜೆ 6.15 […]