



ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾಗಿರಿಯ ಜಗಜ್ಯೋತಿ ಬಸವೇಶ್ವರ ವೃತ್ತದ, ಜ್ಞಾನಯೋಗಿ ಸರ್ವಜ್ಞ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಾಲೇಜು ಸಂಕೀರ್ಣ ಹಾಗೂ ವಿದ್ಯಾರ್ಥಿನಿ ವಸತಿ ನಿಲಯದ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ನೂತನ ಕಾಲೇಜು ಸಂಕೀರ್ಣ-‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ಉದ್ಯಮಿ ಕೆ ಶ್ರೀಪತಿ ಭಟ್ ನೆರವೇರಿಸಿದರು. ಡಾ ಎಂ ಮೋಹನ ಆಳ್ವರ ಧರ್ಮಪತ್ನಿ ದಿ.ಶೋಭಾ ಆಳ್ವರ ನೆನಪಿಗಾಗಿ ನೂತನ ವಸತಿ ನಿಲಯಕ್ಕೆ ‘ಶೋಭಾಯಮಾನ’ ಎಂದು […]

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಆಯೋಜನೆಗೊಂಡ ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ ಭಾನುವಾರ ಸಂಪನ್ನಗೊಂಡಿತು. ಮಹಾಮೇಳದ ಮೂರನೇ ಹಾಗೂ ಕೊನೆಯ ದಿನದಂದು ಸುತ್ತಮುತ್ತಲಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಳ್ಳುವ ಪ್ರತಿ ಕಾರ‍್ಯಕ್ರಮದಲ್ಲಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಲಾಯಿತು. ಆಳ್ವಾಸ್ ನುಡಿಸಿರಿ, ಜಂಬೂರಿ […]

ಮೂಡುಬಿದಿರೆ: ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್’ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಕೃಷಿಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ’ -ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. ಆಳ್ವಾಸ್ […]

ಮೂಡುಬಿದಿರೆ: ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯನಾಗಲು ಸಾಧ್ಯ. ನಾವೆಲ್ಲ ಮನುಷ್ಯರಾಗೋಣ. ಮನುಷ್ಯತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರ ಜೊತೆಯಾಗೋಣ’ ಎಂದು ನಟ, ರಂಗಕರ್ಮಿ ಅರುಣ್ ಸಾಗರ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಮಂಗಳವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಸಂಪ್ರದಾಯ ದಿನ- 2024 ಉದ್ಘಾಟಿಸಿ ಅವರು ಮಾತನಾಡಿದರು.ಆಳ್ವರ ಸಮಯ ಪ್ರಜ್ಞೆ ಬಗ್ಗೆ ಗೌರವವಿದೆ. ಅವರದ್ದು ಅನುಭವ ಅನುಭಾವವಾಗಿಸಿದ ವ್ಯಕ್ತಿತ್ವ. ಕಲಿಕೆ, ಕನಸು, ನನಸು ಅವರ ಹಾದಿ. ನಾವೆಲ್ಲ […]