Category: Alvas virasath

  • ವಿರಾಸತ್ ವೇದಿಕೆಯಲ್ಲಿ ಚೆನ್ನೈನ ಸ್ಟೆಕೇಟೋ ಕಲಾವಿದರ ದ್ರಾವಿಡ ಸಂಗೀತ ಸ್ವರಗಳ ತಲ್ಲಣ

    ವಿರಾಸತ್ ವೇದಿಕೆಯಲ್ಲಿ ಚೆನ್ನೈನ ಸ್ಟೆಕೇಟೋ ಕಲಾವಿದರ ದ್ರಾವಿಡ ಸಂಗೀತ ಸ್ವರಗಳ ತಲ್ಲಣ

    ಮೂಡುಬಿದಿರೆ: ‘೩೦ ನೇ ಆಳ್ವಾಸ್ ವಿರಾಸತ್’ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳ, ಸ್ವಲ್ಪ ಹಿಂದಿ ಮಿಶ್ರಣ ‘ವುಡ್’ಗಳ ಸಿನಿಮಾ ಹಾಡುಗಳ ಸಿಂಚನವು ಆಳ್ವಾಸ್ ವಿರಾಸತ್‌ನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಚೆನ್ನೈಯ ಸ್ಟೆಕೇಟೋ ಬ್ಯಾಂಡ್ ತಂಡವು ನಿರಂತರ ಅಬ್ಬರದಲ್ಲಿ ನಡೆಸಿಕೊಟ್ಟ ಸಂಗೀತ ರಸಸಂಜೆಯ ಆರಂಭದಲ್ಲಿ ವಯೋಲಿನ್ ನಲ್ಲಿ ಸಾಯಿ ರಕ್ಷಿತ್ ಅವರು […]

    Continue Reading

  • ವಿರಾಸತ್ ಸಾಂಸ್ಕೃತಿಕ ರಥ ಮರಳಿ ಸ್ವಸ್ಥಾನಕ್ಕೆ

    ವಿರಾಸತ್ ಸಾಂಸ್ಕೃತಿಕ ರಥ ಮರಳಿ ಸ್ವಸ್ಥಾನಕ್ಕೆ

    ಮೂಡುಬಿದಿರೆ: ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೩೦ನೇ ವಿರಾಸತ್’ನ ಸಾಂಸ್ಕೃತಿಕ ಕಾರ‍್ಯಕ್ರಮಗಳಿಗೆ ಶನಿವಾರ ರಾತ್ರಿ ತೆರೆ ಬಿತ್ತು.ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು.ಇದಕ್ಕೂ ಮೊದಲು ಸಣ್ಣ ರಥದಲ್ಲಿ ಗಣಪತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ […]

    Continue Reading