
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ವ್ಯಾಪ್ತಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಉಪ ವಲಯ ಅರಣ್ಯಾಧಿಕಾರಿ ಬಸಪ್ಪ ಹಲಗೇರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಹೆರಾಲ್ಡ್ ಡಿಸಿಲ್ವ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿನ್ ಡಿಸೋಜಾ, ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ತದನಂತರ ಶಾಲೆಯಿಂದ ಶಿರ್ತಾಡಿ ಪಟ್ಟಣದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳಿಂದ ನಡೆದ ಅಣಕು ಆಡುಗಬ್ಬ […]
ಮೂಡುಬಿದಿರೆ : ಭಕ್ತರು ತಮಗೆ ಸೇರಿದ ದೇವಾಲಯಗಳನ್ನು ಸುಸಜ್ಜಿತವಾಗಿಸಿಕೊಳ್ಳಬೇಕು. ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ದೇವರು ಎಲ್ಲೆಡೆಯೂ ಇದ್ದಾನೆ. ಆದರೆ ದೇವರ ಸಾನಿಧ್ಯವಿದ್ದರೆ ಅಲ್ಲಿ ಎಲ್ಲರೂ ಒಗ್ಗೂಡಲು ಸಾಧ್ಯ. ದೇವರ ಸಾನಿಧ್ಯವನ್ನು […]
ಮೂಡುಬಿದಿರೆ : ಮಹತೋಭಾರ ಸೋಮನಾಥೇಶ್ವರ ದೇವಸ್ಥಾನ ಇಟಲ ದರೆಗುಡ್ಡೆ, ಸೋಮನಾಥೇಶ್ವರ ದೇವರ ಕ್ಷೇತ್ರವು ಸಂಪೂರ್ಣ ಶಿಲಾಮಯವಾಗಿ ಪುನರ್ ನಿರ್ಮಿಸಿ ಇದೀಗ ಬ್ರಹ್ಮಕಲಶೋತ್ಸವವು ಮೆ.೨ರಂದು ನಡೆಯಲಿದ್ದು ಆ ಪ್ರಯುಕ್ತ ವೈಭವದ ಹೊರೆಕಾಣಿಕೆ ಮೆರವಣಿಗೆಯು ಭಾನುವಾರ ಸಂಜೆ ನಡೆಯಿತು.ಅಳಿಯೂರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೈದಾನದಿಂದ ಹೊರಟ ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.ಬಳಿಕ ಸುಮಾರು ೨.ಕಿ.ಮೀ ದೂರದ ದರೆಗುಡ್ಡೆ ಇಟಲ ದೇವಸ್ಥಾನದವರೆಗೆ ನಡೆದ ಮೆರವಣಿಗೆಯಲ್ಲಿ […]
ಮೂಡುಬಿದಿರೆ: ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಇಟಲ ದರೆಗುಡ್ಡೆ ಇದರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂತ೯ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾಯ೯ಕ್ರಮವು ಸೋಮವಾರ ನಡೆಯಿತು.ಉದ್ಯಮಿ ರಮಾನಂದ ಸಾಲ್ಯಾನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕೆ. ನರಸಿಂಹ ತಂತ್ರಿ ಹಾಗೂ ರಾಘವೇಂದ್ರ ತಂತ್ರಿ ಮತ್ತು ಅಸ್ರಣ್ಣರಾದ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿತು. ಕಾತಿ೯ಕ್ ಶಿತಾ೯ಡಿ ಅವರು ಕ್ಷೇತ್ರದ ಬಗ್ಗೆ ರಚಿಸಿರುವ ಹಾಡಿನ ಪೋಸ್ಟರ್ ನ್ನು ಇದೇ ಸಂದಭ೯ದಲ್ಲಿ […]
ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಶೇ 25 ಅನುದಾನದಲ್ಲಿ ಸುಮಾರು 25 ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ನ್ನು ವಿತರಿಸಲಾಯಿತು.ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ರಾಜು ಸಿಬ್ಬಂದಿಗಳು ಉಪಸ್ಥಿತರಿದ್ದರು.