
ಮೂಡುಬಿದಿರೆ : ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು. ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾನ್ಸ್ ಮಾಡುತ್ತಿದ್ದ ಸಂದರ್ಭರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆಗಾಗಲೇ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ತಿಳಿದುಬಂದಿದೆ.ಮೃತರು ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ […]
ಸದ್ಯಕ್ಕೆ ತುಳುನಾಡಿನಾದ್ಯಂತ ಬರೀ ಸದ್ದು ಮಾಡುತ್ತಿರುವ ದಸ್ಕತ್ ಸಿನಿಮಾ ಎಲ್ಲಾರ ಮನೆಮನದಲ್ಲಿ ಗುನುಗುಟ್ಟುತ್ತಿದೆ. ವಿಭಿನ್ನ ಕಥೆ, ಛಾಯಾಗ್ರಹಣ, ಸಂಗೀತ ನಟನೆಯನ್ನು ಹೊಂದಿರುವ ನೈಜ್ಯ ಶೈಲಿಯಲ್ಲಿ ಸಿನಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಅತ್ಯದ್ಭುತವಾಗಿ ಕಂಡು ಬರುವ ಪಾತ್ರ ಶೇಖರ ಎಂಬ ಕಟ್ಟುಮಸ್ತು ದೇಹ ಹೊಂದಿರುವ ಯುವಕನ ಪಾತ್ರ. ಈ ಪಾತ್ರ ಸಿನಿಪ್ರಿಯರ ಗಮನ ಸೆಳೆದಿರುವುದು ಸುಳ್ಳಾಲ್ಲ. ಆ ಪಾತ್ರಕ್ಕೆ ಜೀವ ತುಂಬಿದವರು ಒಂದು ಹಳ್ಳಿ ಪ್ರತಿಭೆ ದೀಕ್ಷಿತ್ ಅಂಡಿಂಜೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ದಿ|ಸಂಜೀವ […]
ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ […]
ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು.ಮುಖ್ಯ ಅತಿಥಿ ಕಟೀಲು ಯಕ್ಷಗಾನ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭಹಾರೈಸಿದರು.ಸಮಾರಂಭದಲ್ಲಿ ಶಿವಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ಆಳ್ವ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ರವಿ […]
ಮಂಗಳೂರು: “ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.“ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ ಟೀಸರ್, […]