
ಮೂಡುಬಿದಿರೆ: ತಾಲೂಕಿನಾದ್ಯಾಂತ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಬಡಜನರಿಗೆ ಇನ್ಮುಂದೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟವುಳ್ಳ ಊಟ, ತಿಂಡಿ ದೊರೆಯಲಿದೆ. ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ದಿನಂಪ್ರತಿ ವಿವಿಧ ಬಗೆಯ ತಿಂಡಿಗಳಿಗೆ ಕೇವಲ ೫ ರೂ ಮೊತ್ತದಲ್ಲಿ ಹಾಗೂ ಊಟವೂ ೧೦ ರೂ ದರದಲ್ಲಿ ಸಿಗಲಿದೆ. ಯಾವ್ಯಾವ ದಿನ ಯಾವೆಲ್ಲಾ ಬಗೆಯ ಊಟ ತಿಂಡಿಗಳು ಸಿಗುತ್ತದೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಮೂಡುಬಿದಿರೆ: ಅಸಂಘಟಿತ ಕಾರ್ಮಿಕರು, ಬಡವರು ಹಸಿವಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನನ್ನು ಆರಂಭಿಸಿದ್ದಾರೆ. ಇದು ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಇಲ್ಲಿನ ಆಡಳಿತ ಸೌಧದ ಎದುರು ಅವರು ಬುಧವಾರ ಇಂದಿರಾ ಕ್ಯಾಂಟೀನನ್ನು ಉದ್ಘಾಟಿಸಿ ಮಾತನಾಡಿದರು. ಅಗ್ಗದ ದರದಲ್ಲಿ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟ ಸಿಗುತ್ತದೆ. ಬಡವರ ಹಸಿವು ನೀಗಿಸುವ ಇಂತಹ ಉತ್ತಮ ಸೌಲಭ್ಯ ದೇಶದ ಬೇರೆ ಯಾವ ರಾಜ್ಯಗಳಲ್ಲು ಇಲ್ಲ. […]
ಮೂಡುಬಿದಿರೆ : ದ.ಕ.ಜಿ. ಪಂಚಾಯತ್ ಮಂಗಳೂರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆರ್. ಐ. ಡಿ. ಎಫ್ -೨೮ರಲ್ಲಿ ಮಂಜೂರಾದ ತಾಲೂಕಿನ ಮೂಡುಬಿದಿರೆ ಮತ್ತು ಶಿತಾ೯ಡಿಯಲ್ಲಿ ತಲಾ ಐವತ್ತಮೂರುವರೆ ಲಕ್ಷ ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶುಕ್ರವಾರ ಶಿಲಾನ್ಯಾಸಗೈದರು.ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಪಶು ಚಿಕಿತ್ಸಾ ಆಸ್ಪತ್ರೆಗೆ ೫೩.೧೬ ಲಕ್ಷ ವೆಚ್ಚದಲ್ಲಿ ಅನುದಾನ ಬಿಡುಗಡೆಗೊಂಡಿದ್ದು, ಇದೀಗ ಹಳೆಯ ಕಟ್ಟಡವನ್ನು ದುರಸ್ತಿಗೊಳಿಸಿ […]
ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂದು ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿದೆ. ಜ. 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಹಾಗೂ ಸರಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರಕಾರದಿಂದ ಅನುದಾನ […]