
ಮೂಡುಬಿದಿರೆ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧುರ್ಯ.ಶ್ರೀ ರಾಗದ ಮೂಲಕ ಕಛೇರಿ ಆರಂಭಿಸಿದ ಅವರು ಮುರಲೀ ಸ್ತುತಿಸುತ್ತಾ ‘ಆನಂದ ದೇ ಮುಖ ಚಂದ್ರ ಐ ಸೇ ಚಾಂದನಿ ಸಾಂದ್ರ…’ಬಾದಲ್ ಆಯೇ ನಭಾ ಮೇ…ಯಾದ’ ಸಂಗಶ್ರೋತ್ರವಿನ ಯೋಚನಾ ಲಹರಿಗೆ ತೆರೆದುಕೊಳ್ಳುವ ಪುರಾತನ ಶ್ರೀ ರಾಗ ಹಾಡಿದ ಅವರು, ‘ ಗಾಯನ ಕೇಳುಗರಿಗೆ ಸುಲಲಿತ ಹಾಗೂ ಇಂಪಾಗಿರಬೇಕು’ ಎಂದು ಕೇಳುವುದನ್ನೂ […]
ಮಂಗಳೂರು:ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮದ ತಮ್ಮ ಅನುಭವಗಳನ್ನು ಬಿಚ್ಚಿಟ್ಟ ಅವರು ಕಂಪೆನಿ ಕಲ್ಚರ್‌ಗೆ ಒಗ್ಗಿಕೊಳ್ಳಲು […]
ಮೂಡುಬಿದಿರೆ: ಯಾವುದೇ ಸ್ಪರ್ಧೆಗಳಲ್ಲಿ ಸೋಲು- ಗೆಲುವು ಇರುತ್ತದೆ. ಇದನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿಯಿಂದ ಆಟವಾಡಿ ಯಶಸ್ವಿಯಾಗಿ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹೇಳಿದರು.ಅವರು ದ.ಕ.ಜಿ.ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು.ರೋಟರಿ […]
ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ. ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ಅದರಲ್ಲಿ ಸಂದೇಶ್ ಪಿ.ಜಿ.ಅವರೂ ಇದ್ದಾರೆ. ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಸಂದೇಶ್ ಅವರು ತಮ್ಮ ಡೇರಿಂಗ್ ಮೂಲಕ ನಿಷ್ಠಾವಂತ ಅಧಿಕಾರಿಯಾಗಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದ್ದಾರೆ. ಪ್ರಸ್ತುತ ಅವರು […]
ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಮತ್ತೆ ಮೂಡುಬಿದಿರೆಗೆ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಬಂದಿದ್ದರು.
ಮೂಡುಬಿದಿರೆ: ಕೇರಳದ ವಯನಾಡಿನಲ್ಲಿ ನಡೆದ ದುರಂತದಲ್ಲಿ ತುರ್ತು ಕಾರ್ಯಾಚರಣೆ ಪೂರೈಸಿ ಹಿಂದಿರುಗಿದ ಭಾರತೀಯ ಮಿಲಿಟರಿ ಕಮಾಂಡರ್‌ಗಳಿಗೆ, ಮೂಡುಬಿದಿರೆಯ ಮೆಸ್ಕಾಂ ಅಧಿಕಾರಿಗಳು ಮತ್ತು ವಿದ್ಯುತ್ ಗುತ್ತಿಗೆದಾರರು ಶುಕ್ರವಾರ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್, ತಾಂತ್ರಿಕ ವಿಭಾಗದ ಸಹಾಯಕ ಇಂಜಿನಿಯರ್ ನಿತೇಶ್, ಕಿರಿಯ ಇಂಜಿನಿಯರ್ ಮಮತಾ, ಕಿರಿಯ ಇಂಜಿನಿಯರ್ ಕೃಷ್ಣರಾಜ, ಪವರ್ ಮ್ಯಾನ್ ಪಪ್ಪುಕುಮಾರ, ಮಾಪಕ ಓದುಗ ವಿಜಯ, ಗುತ್ತಿಗೆದಾರರಾದ ಸತ್ಯಪ್ರಕಾಶ್ ಹೆಗ್ಡೆ, ಅನಿಶ್ ಡಿಸೋಜ, ವಿಶ್ವಾಲ್ ತೋಡಾರ್, ಶಶಿಧರ್ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಕಟಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ (ಪಿಯು) ನಾಳೆ ಆಗಸ್ಟ್ 1ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ […]
ದಕ್ಷಿಣ ಕನ್ನಡ: ಭಾರಿ ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ (12 ನೇ ತರಗತಿವರೆಗೆ) ಜುಲೈ 31ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಾಕೃತಿಕ ಆಪತ್ತನ್ನು ತಡೆಯಲು ಸರ್ಕಾರದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ, ಈ ಅವಧಿಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಎಚ್ಚರಿಕೆ ವಹಿಸುವಂತೆ ಕೇಳಿಕೊಳ್ಳಲಾಗಿದೆ. ಸರ್ಕಾರದ […]
ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ೨೦೨೪-೨೫ ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳಾ ಉದ್ಘಾಟನಾ ಸಮಾರಂಭದಲ್ಲಿ ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ.ಸ್ವಸ್ತಿಶ್ರೀ ಲಕ್ಷ್ಮೀ ಸೀನ ಭಟ್ಟಾರಕ ಪಟ್ಟಾಚರ‍್ಯರ‍್ಯ ಮಹಾಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನವನ್ನಿತ್ತರು. ಬಳಿಕ ಇದೇ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಕಂಬಳ, ಕ್ರೀಡೆ ಹಾಗೂ ಇನ್ನಿತರ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ‘ಬೆದ್ರ ಫ್ರೆಂಡ್ಸ್’ ಇದರ ರುವಾರಿಯಾಗಿ ಅನೇಕ ಸೇವಾಕಾರ್ಯಕ್ರಮಗಳನ್ನು ಕೈಗೊಂಡ ಸ್ನೇಹ ಜೀವಿ, ಸರಳಜೀವಿ ಹಾಗೂ ಮೂಡಬಿದ್ರೆಗೆ […]