
ನವದೆಹಲಿ, ಜು. 23: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು, ಈ ಬಾರಿಯ ಬಜೆಟ್‌ನಲ್ಲಿ 3 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಘೋಷಿಸಲಾಗಿದೆ. ಮಹಿಳೆಯರು ಉದ್ಯೋಗದಲ್ಲಿ ಹೆಚ್ಚು ಭಾಗವಹಿಸಲೆಂದು, ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಬಜೆಟ್‌ನಲ್ಲಿ ಹೆಣ್ಣುಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ತಂದು, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ಮಹಿಳೆಯರು […]
ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ದೇಗುಲದ ಪ್ರಾಂಗಣದಲ್ಲಿ ನಡೆಯಲಿದೆ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಈ ಸಂದೇಶವನ್ನು ನಿಮ್ಮ ಇಷ್ಟ ಪಾತ್ರರಿಗೆ ಕಳುಹಿಸಿ, ಫ್ಯಾಮಿಲಿ ಗ್ರೂಪ್ ಗಳಲ್ಲಿ ಶೇರ್ ಮಾಡಿ
ಮಂಗಳೂರು: ಜುಲೈ 28ರಂದು ಭಾನುವಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಬಳಿಕ “ಮುದುಕನ ಮದುವೆ” ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕದ ಉಚಿತ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ರಾಜ್ಯದಾದ್ಯಂತ ಹೆಸರುವಾಸಿಯಾಗಿರುವ ಶ್ರೀ ನಂದಿಕೇಶ್ವರ ನಾಟಕ ಸಂಘವು ದಿ. ಪಿ.ಬಿ. ರೈ […]
ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದಲ್ಲಿದ್ದು ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್ ವಿಎಸ್ ದೇವಳ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ್ ಆಳ್ವ ಬಿಡುಗಡೆಗೊಳಿಸಿದರು. ಬಳಿಕ ಮಾತಾಡಿದ ಅವರು, “ನಮ್ಮ ಸಂಸ್ಥೆಯ ವಿದ್ಯಾರ್ಥಿ ಆಗಿದ್ದಾಗಲೇ ಸಾಹಿತ್ಯ ಅಭಿರುಚಿ ಬೆಳೆಸಿಕೊಂಡಿದ್ದ ಮಾಲತಿ ಶೆಟ್ಟಿ ಅವರು ಜಾಗತೀಕರಣದ ಈ ವೇಳೆಯಲ್ಲೂ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯ. ಶಾಲೆ ಕಾಲೇಜುಗಳಲ್ಲಿ ಕನ್ನಡ […]
ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಶನಿವಾರ ಸಂಜೆ ಉರ್ವ ಸ್ಟೋರ್ ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು. ಅಭಿನಂದನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಆರ್.ಪದ್ಮರಾಜ್ ಪೂಜಾರಿಯವರು, “ನಾವು […]
ಕೃಷ್ಣೋತ್ಸವಕ್ಕೆ ಶುಭ ಹಾರೈಸಿದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜವನೆರ್ ಬೆದ್ರ ಫೌಂಡೇಶನ್ ವತಿಯಿಂದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ನೇ ವರ್ಷದ ಮೊಸರು ಕುಡಿಕೆ ಪ್ರಯುಕ್ತ ನಡೆಯುವ ಕೃಷ್ಣೋತ್ಸವ 2024 ಗೆ ಬಿಜೆಪಿಯ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಭ ಹಾರೈಸಿದರೆ ನಳಿನ್ ಕುಮಾರ್ ಕಟೀಲ್ ಅವರಿಗೆ ಸಂಘಟನೆಯ ಪ್ರಮುಖರು ಕ್ಷಷ್ಣೋತ್ಸವ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದು ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆಪಿ ಜಗದೀಶ ಅಧಿಕಾರಿ ,ಜವನೆರ್ […]
ಉಡುಪಿ ಹಾಗೂ ದಕ್ಷಿಣ ಜಿಲ್ಲೆಯಾದ್ಯಂತ ತೀವ್ರ ಮಳೆ ಹಿನ್ನಲೆ ಜುಲೈ 20 ರಂದು ಜಿಲ್ಲೆಯ ಶಾಲೆ, ಪಿಯುಸಿ ತರಗತಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಹಾಗೂ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ) ಕಾರ್ಕಳ ಇವುಗಳ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಮತ್ತು ಪ್ರಧಾನ ಮಂತ್ರಿ ಜನಸೇವಾ ಸೌಲಭ್ಯಗಳ ಅಭಿಯಾನವು ಸಮಾಜ ಮಂದಿರದಲ್ಲಿ ಶುಕ್ರವಾರ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡುಬಿದಿರೆ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಭಾರತೀಯ ಅಂಚೆ ಇಲಾಖೆಗೆ ಸುಮಾರು […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಜುಲೈ 18, 2024 ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಪ್ರಕಾರ, ಈ ರಜೆಯನ್ನು ಘೋಷಿಸುವುದಕ್ಕೆ ಹವಾಮಾನ ವೈಪರೀತ್ಯ ಮತ್ತು ಸುರಕ್ಷತಾ ಕಾರಣಗಳು ಕಾರಣವಾಗಿದೆ. ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಯು ಸುರಕ್ಷಿತವಾಗಿರಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜುನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.