
ಮಂಗಳೂರು: ಹಳೆಯ ಸಿದ್ದರಾಮಯ್ಯ ಅವರ ಪಾತ ಕಳೆದುಹೋಗಿದೆ. ನಾನು ಅವರೊಂದಿಗೆ ಮಂತ್ರಿಯಾಗಿ ಮತ್ತು ಸಂಸದರಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿಜವಾದ ಸತ್ಯವನ್ನು ಯಾರು ಮುಚ್ಚಿಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ತಮ್ಮ ತಿದ್ದಿಕೊಳ್ಳುವ ಮೂಲಕ ಹಳೆಯ ಸಿದ್ದರಾಮಯ್ಯ ಆಗುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ, ಪ್ಲಾಟ್‌ಫಾರ್ಮ್, ಆಹಾರ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ಎನ್‌ಡಿಆರ್‌ಎಫ್, […]
ದಕ್ಷಿಣ ಕನ್ನಡ (ಜು. 16): ದಕ್ಷಿಣ ಕನ್ನಡ ಉಪ ಆಯುಕ್ತ (DC) ಮುಲ್ಲಲ್ ಮುಹಿಲನ್ ಅವರು ಮಂಗಳವಾರ, ಜುಲೈ 16 ರಂದು ನಂತೂರ್ ಮತ್ತು KPT ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಅಲ್ಲಿನ ರಸ್ತೆಗಳ ಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಗಳು ದುಸ್ಥಿತಿಯಲ್ಲಿದ್ದು, ಅನೇಕ ಗುಂಡಿಗಳು ಇದ್ದುದರಿಂದ ವಾಹನಚಾಲನೆ ಅಪಾಯಕಾರಿಯಾಗಿ, ವಾಹನ ದಟ್ಟಣೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳನ್ನು ಸೂಚಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಕೂಡ ಜಾರಿಗೆ ಇರುತ್ತದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, […]
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.
ಅಬೂಬಕ್ಕರ್ ಮುಸ್ಲಿಯಾರ್ ಅವರ ಅನುಸ್ಮರಣೆ, ಕುರ್ ಆನ್, ತಹೀಲ್ ಸಮರ್ಪಣೆ ಕಾರ್ಯಕ್ರಮವು ಮೂಡುಬಿದಿರೆ ಬದ್ರಿಯಾ ಟೌನ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರ ಜುಮ್ಮಾ ನಮಾಝ್ ಬಳಿಕ ನಡೆಯಿತು. ಮಸೀದಿಯ ಖತೀಬರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬೂಬಕ್ಕರ್ ಹಾಜಿ ಅವರು ಈ ಮಸೀದಿಯಲ್ಲಿ ಸುಮಾರು ಎರಡು ದಶಕಗಳ ಕಾಲ ಖತೀಬರಾಗಿ,ಬಳಿಕ ಸುತ್ತಮುತ್ತಲ ಮಸೀದಿಗಳ ಖಾಝಿಯಾಗಿ ಸಲ್ಲಿಸಿದ ದೀನೀ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಮಸೀದಿ ಕಮಿಟಿಯ ಅಧ್ಯಕ್ಷರಾದ ಅಬ್ದುರ್ರಹ್ಮಾನ್ (ಅಬ್ಬಾಕ), ಉಪಾಧ್ಯಕ್ಷ ಖಾದರ್ ಜ್ಯೋತಿನಗರ, […]
ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ನಡೆದ ಹಸಿರೇ ಉಸಿರು ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಗ್ರಾಮವಾಸ್ತವ್ಯ, ಬ್ರಾೃಂಡ್ ಮಂಗಳೂರಿನಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದ.ಕ.ಜಿಲ್ಲಾ ಕಾರ್ಯನಿರತ […]
ಬೆಂಗಳೂರು: ಕರ್ನಾಟಕದ ಪ್ರಸಿದ್ಧ ನಿರೂಪಕಿ ಅಪರ್ಣ ಅವರು ನಿಧನ ಹೊಂದಿದ್ದಾರೆ. ಇಂದು ಸಂಜೆ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ಪಷ್ಟ ಕನ್ನಡದಲ್ಲಿ ಕಾರ್ಯಕ್ರಮಗಳನ್ನು ನಿರೂಪಿಸಲು ಖ್ಯಾತರಾಗಿದ್ದ ಅಪರ್ಣ, ಹಿಂದೊಮ್ಮೆ ನಟಿಯೂ ಆಗಿದ್ದರು. ಅಪರ್ಣ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ಮನೆಯಲ್ಲಿ ಅವರು ನಿಧನರಾಗಿದ್ದಾರೆ. 1984ರಲ್ಲಿ ಬಿಡುಗಡೆಯಾದ ‘ಮಸಣದ ಹೂ’ ಸಿನಿಮಾದಲ್ಲಿ ಅಪರ್ಣ ನಟಿಸಿದ್ದರು. ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿನಿಮಾಗಿಂತಲೂ ನಿರೂಪಣೆಯಲ್ಲಿ ಹೆಚ್ಚು ಜನಪ್ರಿಯರಾಗಿದ್ದರು. ಅವರ […]
ಮೂಡುಬಿದಿರೆ: ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊAದಿಗೆ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಆಳ್ವಾಸ್ ಈ ಬಾರಿಯೂ ಉನ್ನತ ಸಾಧನೆ ಮಾಡಿದೆ.ನಿಸರ್ಗ ಎಸ್. 21ನೇ ರ‍್ಯಾಂಕ್, ಮೃಣಾಲಿನಿ ಎಸ್. ಪೂಜಾರಿ 29ನೇ ರ‍್ಯಾಂಕ್, ಪಾಹಿಮಾ ಹೇಮಚಂದ್ರ 38ನೇ ರ‍್ಯಾಂಕ್, ಎಮ್. ರಾಮ್‌ಪ್ರಸಾದ್ ಮಲ್ಯ 266ನೇ ರ‍್ಯಾಂಕ್, ಎಮ್.ವಿ. ಚಿರಾಂತ್ 290ನೇ ರ‍್ಯಾಂಕ್, ಆಕಾಶ್ ಬಸವರಾಜ್ ಬಚಲಾಪುರ 298ನೇ ರ‍್ಯಾಂಕ್, ಜೈ ಅಶೋಕ್ ರಾಚನ್ನವರ್ 402ನೇ ರ‍್ಯಾಂಕ್‌ನೊAದಿಗೆ ತೇರ್ಗಡೆ […]
ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, ೨೦೩೪-೩೫ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ವೈಶಿಷ್ಟö್ಯಗಳು:‘ಆಳ್ವಾಸ್ ಇಂಜಿನಿಯರಿAಗ್ ಕಾಲೇಜು ನ್ಯಾಕ್‌ನ ಮೊದಲ ಸೈಕಲ್‌ನಲ್ಲೇ (ಓಂAಅ) ಂ+ ಶ್ರೇಣಿಯನ್ನು […]