
ಮೂಡುಬಿದಿರೆ: ಎಂಜಿನಿಯರ್ ಕಾಲೇಜುಗಳು ಪ್ರಾಮುಖ್ಯತೆಯನ್ನು ಪಡೆದುಕೊಂಡಷ್ಟೇ ಪ್ರಾಮುಖ್ಯತೆಯನ್ನು ಐಟಿಐ ಕಾಲೇಜುಗಳೂ ಪಡೆದುಕೊಂಡಿವೆ. ಇದೀಗ ತಂತ್ರಜ್ಞಾನಗಳು ಮುಂದುವರಿದಿದ್ದು, ಯಾವುದೇ ಭಾಷೆಯನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಸಾಧ್ಯವಿದೆ ಆದ್ದರಿಂದ ಕೀಳರಿಮೆಯನ್ನು ಬಿಡಿ. ತಾವು ಯಾವುದೇ ನಿಧಾ೯ರಗಳನ್ನು ತೆಗೆದುಕೊಳ್ಳುವಾಗ ಸೂಕ್ತ ಸಮಯ, ಸಂದಭ೯ದಲ್ಲಿ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದ ಅವರು ಬೇರೆ ಬೇರೆ ರೀತಿಯ ವಿಷಯಗಳನ್ನು ಅರಿತುಕೊಂಡು ಮಾನವ ಸಂಪನ್ಮೂಲದ ಬಳಕೆ ಮತ್ತು ಪ್ರಾಯೋಗಿಕ ಮಾಹಿತಿಯನ್ನು ಅರಿತುಕೊಂಡರೆ ದೇಶ ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ ಎಂದು ಕೆಮಿಕಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಕಾರ್ಡೋಲೈಟ್ ಸ್ಪೆಷಾಲಿಟಿ ಜನರಲ್ […]
ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ […]
ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ, ಮೂಡಬಿದ್ರೆಯ ಶ್ರೀ ಮಹಾವೀರ ಕಾಲೇಜಿನ NCC ಘಟಕವು ಮಾನವೀಯತೆಗೆ ಪೂರಕವಾದ ಜಾತಾವನ್ನು ಹಮ್ಮಿಕೊಂಡಿತ್ತು. ಈ ಜಾತೆಗೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಚಾಲನೆ ನೀಡಿದರು. ಅವರು ತಮ್ಮ ಉದ್ಬೋಧನೆಯಲ್ಲಿ, ಸ್ವಸ್ಥ ಸಮಾಜವನ್ನು ನಿರ್ಮಿಸುವಲ್ಲಿ NCC ಕೆಡೆಟ್‌ಗಳ ಪಾತ್ರ ಮಹತ್ವದ್ದಾಗಿದ್ದು, ದೇಶವನ್ನು ಕಾಯುವ ಕರ್ತವ್ಯವನ್ನು ನಿಭಾಯಿಸುವಂತಾಗಬೇಕು ಮತ್ತು ಮಾದಕ ವಸ್ತುಗಳ ಸೇವನೆಯ ಪರಿಣಾಮವನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿಯು ನಮ್ಮದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ […]