



ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿಯ ನಿರ್ಮಲಾ ಪಂಡಿತ್ ಮತ್ತು ಮೂಡುಮಾರ್ನಾಡು ಗ್ರಾಮದ ಪ್ರೇಮಾ ಅವರ ಕುತ್ತಿಗೆಯಿಂದ ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಬಂಧಿತರನ್ನು ಮಂಗಳೂರು ಚೆಂಬುಗುಡ್ಡೆಯ ಹಬೀಬ್ ಹಸನ್ (ಹಬ್ಬಿ) ಮತ್ತು ಬಂಟ್ವಾಳ ತಾಲೂಕು ಪರ್ಲಿಯಾ ಕ್ರಾಸ್‌ರೋಡ್‌ನ ಉಮ್ಮರ್ ಸಿಯಾಫ್ (ಚಿಯಾ) ಎಂದು ಗುರುತಿಸಲಾಗಿದೆ. ಹಬ್ಬಿ ವಿರುದ್ಧ ಉಭಯ ಜಿಲ್ಲೆಗಳ ವಿವಿಧ […]

ಕಾರ್ಕಳ: ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ—ಒಗ್ಗಟ್ಟಿನಿಂದ ಆರ್ಥಿಕ ಸದೃಢತೆ ಸಾಧ್ಯ ಕಾರ್ಕಳ: ಲೈವ್ ಚಾನೆಲ್ ನಿರ್ವಹಿಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯವಿದೆ. ಇದು ಲೈವ್ ಚಾನೆಲ್ ಮಾಲಕರಿಗೆ ಅನುಕೂಲಕರ ಬೆಳವಣಿಗೆ ಎಂದೇ ದಾಯ್ಜಿವರ್ಲ್ಡ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯ ವ್ಯಕ್ತಪಡಿಸಿದರು. ವಾಲ್ಟರ್ ನಂದಳಿಕೆ ಅವರು ಸೆಪ್ಟೆಂಬರ್ 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಸ್ಥಾಪನೆಯಾದ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿಸಿ, ಮುಂದಿನ ಮಾತನಾಡಿದರು. ಅವರು, ಲೈವ್ ಚಾನೆಲ್ ಮಾಲಕರು ಅನೇಕ […]

ಮಂಗಳೂರು: “ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ 2022-23ನೇ ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನುಹೊಂದಿದ ಅಂಕಪಟ್ಟಿ ದೊರೆಯುತ್ತಿರಲಿಲ್ಲ. ಪ್ರಸ್ತುತ ಅಂಕಪಟ್ಟಿ ಗಳನ್ನು ಸರಕಾರದ ಹಲವಾರು ದಾಖಲೆಗಳನ್ನುಹೊಂದಿರುವ, ಪಡೆದುಕೊಳ್ಳಲುಬಳಸುವ ಡಿಜಿಲಾಕರ್ ತಂತ್ರಜ್ಞಾನದ ಮೂಲಕ ಪಡೆದುಕೊಳ್ಳಲು ವಿಶ್ವವಿದ್ಯಾನಿಲಯಸೂಚಿಸುತ್ತಿತ್ತು. ಆದರೆ ಈ ತಂತ್ರಜ್ಞಾನವು ಹಲವಾರು ಸಮಸ್ಯೆಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಸಂಕ್ಷಿಪ್ತ ಅಂಕಗಳು, ಭಾವಚಿತ್ರ ಸಂಬಂದಪಟ್ಟ ಅಧಿಕಾರಿಗಳ ಹಸ್ತಾಕ್ಷರ, ಪಠ್ಯ ವಿಷಯಗಳು ಮತ್ತು ಪ್ರೊಜೆಕ್ಟ್ ವಿಷಯಗಳು, ಮತ್ತು ಉತ್ತೀರ್ಣ-ಅನುತ್ತೀರ್ಣತೆಯ ಮಾನದಂಡಗಳನ್ನು […]

ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು.ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕರ‍್ಯಗಾರದಲ್ಲಿ ಮಾತನಾಡಿದರು.ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ […]

ಮಂಗಳೂರು: ನಗರದ ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡ ಕಡಿತ ಮಾಡಿರುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಅಪಾಯದ ಸ್ಥಿತಿಯಲ್ಲಿ ಇರುವ ಕೆತ್ತಿಕಲ್ ಗುಡ್ಡವನ್ನು ವೀಕ್ಷಿಸಿ, ಸ್ಥಳೀಯರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಚಿವರು ತಿಳಿಸಿದಂತೆ, ನಿರಂತರ ಮಳೆಯ ಕಾರಣದಿಂದಾಗಿ ಈ ಪ್ರದೇಶದಲ್ಲಿ ಭೂ ಕುಸಿತದ ಅಪಾಯ ತಲೆದೋರಿದೆ. ಸ್ಥಳೀಯರು ಗುಡ್ಡವನ್ನು ಬೇಕಾಬಿಟ್ಟಿ ಅಗೆದು ಮಣ್ಣು ಅಗೆಯುತ್ತಿರುವ ಬಗ್ಗೆ […]

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಕಟಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ […]

ಮಂಗಳೂರು : ಬಸ್ ಸಿಬ್ಬಂದಿ ಮಾನವೀಯ ಸೇವೆಗಳಿಗೆ ಇತಿಹಾಸವಿದೆ. ಗ್ರಾಮಾಂತರ ಭಾಗದಲ್ಲಿ ವಿಷದ ಹಾವು ಕಚ್ಚಿದ ರೋಗಿಯನ್ನು ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಚರಿತ್ರೆಯಿದೆ. ಸಿಬ್ಬಂದಿಯ ಮಾನವೀಯ ಸೇವೆಗೆ ಸಾರ್ವಜನಿಕವಾಗಿ ಸಿಕ್ಕಿರುವ ಪ್ರೋತ್ಸಾಹ ಪ್ರಶಂಸನೀಯ. ಸಿಬ್ಬಂದಿ ಮೆರೆದ ಮಾನವೀಯ ಸೇವೆ ಎಲ್ಲರಿಗೂ ಮಾದರಿಎಂದು ದ.ಕ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಹೇಳಿದರು. ಅವರು ದ.ಕ ಬಸ್ಸು ಮಾಲಕರ ಸಂಘ ಮಂಗಳೂರು ಇವರ ಹಂಪನಕಟ್ಟೆ ಕಚೇರಿಯ ಪಿ.ಭಾಸ್ಕರ್ ಸಾಲಿಯಾನ್ ವೇದಿಕೆಯಲ್ಲಿ ಬಸ್ಸಿನಲ್ಲಿ ಎದೆ ನೋವಿಗೆ […]

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ (ಪಿಯು) ನಾಳೆ ಆಗಸ್ಟ್ 1ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ […]

ದಕ್ಷಿಣ ಕನ್ನಡ: ಭಾರಿ ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ (12 ನೇ ತರಗತಿವರೆಗೆ) ಜುಲೈ 31ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಾಕೃತಿಕ ಆಪತ್ತನ್ನು ತಡೆಯಲು ಸರ್ಕಾರದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ, ಈ ಅವಧಿಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಎಚ್ಚರಿಕೆ ವಹಿಸುವಂತೆ ಕೇಳಿಕೊಳ್ಳಲಾಗಿದೆ. ಸರ್ಕಾರದ […]

ವಿದ್ಯಾಗಿರಿ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇಕಡಾ ೧೪.೯೬% ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಶೇಕಡ ೬೮.೦೩ ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ ೧೪೭ ವಿದ್ಯಾರ್ಥಿಗಳಲ್ಲಿ ೧೦೦ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ ೪೨ ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, ೩೦ ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ […]