Category: Mangaluru

  • ನಾಳೆ (ಜು.18) ದ.ಕ. ಜಿಲ್ಲೆಯ 5 ತಾಲೂಕಿನ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

    ನಾಳೆ (ಜು.18) ದ.ಕ. ಜಿಲ್ಲೆಯ 5 ತಾಲೂಕಿನ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಜುಲೈ 18, 2024 ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಪ್ರಕಾರ, ಈ ರಜೆಯನ್ನು ಘೋಷಿಸುವುದಕ್ಕೆ ಹವಾಮಾನ ವೈಪರೀತ್ಯ ಮತ್ತು ಸುರಕ್ಷತಾ ಕಾರಣಗಳು ಕಾರಣವಾಗಿದೆ. ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಯು ಸುರಕ್ಷಿತವಾಗಿರಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

    Continue Reading

  • ನಕಲಿ ರಜೆ ಆದೇಶ: FIR ದಾಖಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

    ನಕಲಿ ರಜೆ ಆದೇಶ: FIR ದಾಖಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

    ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜುನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    Continue Reading

  • ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ: ಸಿಎಂ ಕುರಿತು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ

    ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ: ಸಿಎಂ ಕುರಿತು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ

    ಮಂಗಳೂರು: ಹಳೆಯ ಸಿದ್ದರಾಮಯ್ಯ ಅವರ ಪಾತ ಕಳೆದುಹೋಗಿದೆ. ನಾನು ಅವರೊಂದಿಗೆ ಮಂತ್ರಿಯಾಗಿ ಮತ್ತು ಸಂಸದರಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿಜವಾದ ಸತ್ಯವನ್ನು ಯಾರು ಮುಚ್ಚಿಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ತಮ್ಮ ತಿದ್ದಿಕೊಳ್ಳುವ ಮೂಲಕ ಹಳೆಯ ಸಿದ್ದರಾಮಯ್ಯ ಆಗುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ, ಪ್ಲಾಟ್‌ಫಾರ್ಮ್, ಆಹಾರ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ಎನ್‌ಡಿಆರ್‌ಎಫ್, […]

    Continue Reading

  • ದಕ್ಷಿಣ ಕನ್ನಡ ಉಪ ಆಯುಕ್ತ (DC) ಮುಲ್ಲೈ ಮುಗಿಲನ್ ಅವರು ನಂತೂರ್ ಮತ್ತು KPT ಜಂಕ್ಷನ್ ಅನ್ನು ಭೇಟಿ ಮಾಡಿದರು

    ದಕ್ಷಿಣ ಕನ್ನಡ ಉಪ ಆಯುಕ್ತ (DC) ಮುಲ್ಲೈ ಮುಗಿಲನ್ ಅವರು ನಂತೂರ್ ಮತ್ತು KPT ಜಂಕ್ಷನ್ ಅನ್ನು ಭೇಟಿ ಮಾಡಿದರು

    ದಕ್ಷಿಣ ಕನ್ನಡ (ಜು. 16): ದಕ್ಷಿಣ ಕನ್ನಡ ಉಪ ಆಯುಕ್ತ (DC) ಮುಲ್ಲಲ್ ಮುಹಿಲನ್ ಅವರು ಮಂಗಳವಾರ, ಜುಲೈ 16 ರಂದು ನಂತೂರ್ ಮತ್ತು KPT ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಅಲ್ಲಿನ ರಸ್ತೆಗಳ ಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಗಳು ದುಸ್ಥಿತಿಯಲ್ಲಿದ್ದು, ಅನೇಕ ಗುಂಡಿಗಳು ಇದ್ದುದರಿಂದ ವಾಹನಚಾಲನೆ ಅಪಾಯಕಾರಿಯಾಗಿ, ವಾಹನ ದಟ್ಟಣೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳನ್ನು ಸೂಚಿಸಿದ್ದಾರೆ.

    Continue Reading

  • ಮುಂದಿನ 7 ದಿನಗಳಿಗೆ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯ ಎಚ್ಚರಿಕೆ

    ಮುಂದಿನ 7 ದಿನಗಳಿಗೆ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯ ಎಚ್ಚರಿಕೆ

    ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್‌ ಕೂಡ ಜಾರಿಗೆ ಇರುತ್ತದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, […]

    Continue Reading

  • ರೆಡ್ ಅಲರ್ಟ್ : ದ.ಕ. ಜಿಲ್ಲೆಯಲ್ಲಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ದ.ಕ. ಜಿಲ್ಲೆಯಲ್ಲಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ

    ಮಂಗಳೂರು: ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

    Continue Reading

  • ಮೂಡುಬಿದಿರೆ ಟೌನ್‌ ಜುಮ್ಮಾ ಮಸೀದಿಯಲ್ಲಿ ಅಬೂಬಕ್ಕರ್ ಹಾಜಿ ಅನುಸ್ಮರಣೆ

    ಮೂಡುಬಿದಿರೆ ಟೌನ್‌ ಜುಮ್ಮಾ ಮಸೀದಿಯಲ್ಲಿ ಅಬೂಬಕ್ಕರ್ ಹಾಜಿ ಅನುಸ್ಮರಣೆ

    ಅಬೂಬಕ್ಕ‌ರ್ ಮುಸ್ಲಿಯಾರ್ ಅವರ ಅನುಸ್ಮರಣೆ, ಕುರ್ ಆನ್, ತಹೀಲ್ ಸಮರ್ಪಣೆ ಕಾರ್ಯಕ್ರಮವು ಮೂಡುಬಿದಿರೆ ಬದ್ರಿಯಾ ಟೌನ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರ ಜುಮ್ಮಾ ನಮಾಝ್ ಬಳಿಕ ನಡೆಯಿತು. ಮಸೀದಿಯ ಖತೀಬರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬೂಬಕ್ಕರ್ ಹಾಜಿ ಅವರು ಈ ಮಸೀದಿಯಲ್ಲಿ ಸುಮಾರು ಎರಡು ದಶಕಗಳ ಕಾಲ ಖತೀಬರಾಗಿ,ಬಳಿಕ ಸುತ್ತಮುತ್ತಲ ಮಸೀದಿಗಳ ಖಾಝಿಯಾಗಿ ಸಲ್ಲಿಸಿದ ದೀನೀ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಮಸೀದಿ ಕಮಿಟಿಯ ಅಧ್ಯಕ್ಷರಾದ ಅಬ್ದುರ್ರಹ್ಮಾನ್ (ಅಬ್ಬಾಕ), ಉಪಾಧ್ಯಕ್ಷ ಖಾದರ್ ಜ್ಯೋತಿನಗರ, […]

    Continue Reading

  • ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ , ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

    ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ , ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

    ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ನಡೆದ ಹಸಿರೇ ಉಸಿರು ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಗ್ರಾಮವಾಸ್ತವ್ಯ, ಬ್ರಾೃಂಡ್ ಮಂಗಳೂರಿನಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದ.ಕ.ಜಿಲ್ಲಾ ಕಾರ್ಯನಿರತ […]

    Continue Reading

  • ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಿಗೆ ದ.ಕ.ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ್ ರಾವ್ ಅವರ ನೇತೃತ್ವದಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು

    ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಿಗೆ ದ.ಕ.ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ್ ರಾವ್ ಅವರ ನೇತೃತ್ವದಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಿಗೆ ದ.ಕ.ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ್ ರಾವ್ ಅವರ ನೇತೃತ್ವದಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು.ಮನವಿಯಲ್ಲಿ ಸರ್ಕಾರವು 07 ನೇ ವೇತನ ಆಯೋಗ ನೀಡಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು,ಈಗಾಗಲೇ ಸರಕಾರ ನೀಡಿರುವ ಶೇ 17% ಮಧ್ಯಂತರ ಪರಿಹಾರದೊಂದಿಗೆ ಆಯೋಗ ನೀಡಿದ ವರದಿಯನ್ನು ಜಾರಿಗೊಳಿಸುವುದು ಹಾಗೂ ನೌಕರರಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಹಾಗೂ ಸರಕಾರಿ ನೌಕರರಿಗೆ […]

    Continue Reading

  • ಮನಸ್ಸಿನ ಸಾಮಾರ್ಥ್ಯಕ್ಕೆ ಮಿತಿಯಿಲ್ಲ: ಡಾ ಸರ್ಫ್ರಾಜ್ ಜೆ ಹಾಶಿಮ್ ಎಕ್ಸಲೆ೦ಟ್ ಮೂಡುಬಿದಿರೆಯಲ್ಲಿ ಮೈಂಡ್ ಮ್ಯಾಪಿಂಗ್ ಕಾರ್ಯಾಗಾರ

    ಮನಸ್ಸಿನ ಸಾಮಾರ್ಥ್ಯಕ್ಕೆ ಮಿತಿಯಿಲ್ಲ: ಡಾ ಸರ್ಫ್ರಾಜ್ ಜೆ ಹಾಶಿಮ್ ಎಕ್ಸಲೆ೦ಟ್ ಮೂಡುಬಿದಿರೆಯಲ್ಲಿ ಮೈಂಡ್ ಮ್ಯಾಪಿಂಗ್ ಕಾರ್ಯಾಗಾರ

    ಮೂಡುಬಿದಿರೆ: ಇಲಿನ ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೈ೦ಡ್ ಮ್ಯಾಪಿ೦ಗ್ ವಿಷಯದ ಬಗ್ಗೆ ಒ೦ದು ದಿನದ ಕಾರ್ಯಾಗಾರ ನಡೆಯಿತು.ಕಾರ್ಯಾಗಾರಕ್ಕೆ ಸ೦ಪನ್ಮೂಲ ವ್ಯಕ್ರಿಯಾಗಿ ಮನಶಾಸ್ತ್ರಜ್ಞ, ಮೈ೦ಡ್ ಟ್ರೆöÊನರ್ ಆಗಿರುವ ಮ೦ಗಳೂರಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಪ್ರಾ೦ಶುಪಾಲ ಡಾ ಸರ್ಫ್ರಾಜ್ ಜೆ ಹಾಶಿಮ್ ಆಗಮಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸುಪ್ತ ಮನಸ್ಸಿಗೆ ಅದ್ಭುತವಾದ ಸಾಮಾರ್ಥ್ಯವಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊ೦ಡರೆ ಜೀವನದಲ್ಲಿ ನಾವು ಇಟ್ಟ ಗುರಿಯನ್ನು ತಲುಪಬಹುದು. ಋಣಾತ್ಮಕ ಆಲೋಚನೆಗಳು ಬ೦ದ ಸ೦ದರ್ಭಲ್ಲಿ […]

    Continue Reading