



ಮೂಡುಬಿದಿರೆ: ಕ್ಷೇತ್ರದಲ್ಲಿ ಟೆಂಟ್ ಹಾಕಿ, ಸಣ್ಣ-ಪುಟ್ಟ ಮನೆ ಕಟ್ಟಿ ಕುಳಿತಿರುವವರಿಗೆ ಡೀಮ್ಡ್ ಫಾರೆಸ್ಟ್ನ್ನು ತೆಗೆದುಹಾಕಿ, ತಹಶೀಲ್ದಾರ, ವಿ.ಎ ಹಾಗೂ ಆರ್.ಐ ಸಭೆ ಮಾಡಿ ಮೂಡುಬಿದಿರೆ ತಾಲೂಕಿನಲ್ಲಿ ಪ್ರತಿಯೊಬ್ಬರಿಗೂ ಹಕ್ಕುಪತ್ರ ಸಿಗಬೇಕೆಂಬುದು ಅವರಿಗೆ ಸ್ಪಷ್ಟ ಸೂಚನೆಯನ್ನು ಕೊಟ್ಟ ಪ್ರಕಾರ , ತಹಶೀಲ್ದಾರ, ವಿ.ಎ ಹಾಗೂ ಆರ್.ಐ ಗಳು ಮನೆ ಮನೆಗೆ ಹೋಗಿ ಸರ್ವೇ ಮಾಡಿ ೩೧೦ ಜನರಿಗೆ ಹಕ್ಕುಪತ್ರವನ್ನು ವಿತರಿಸುವುದೆಂದು ದಾಖಲೆಗಳನ್ನು ತಯಾರಿಸಿದ್ದು, ಆದರೆ ಇದೀಗ ನಾಳೆ ಮಂಗಳವಾರದಂದು ೩೧೦ ಮಂದಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ದಿನ […]

ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ ಹರಿಪ್ರಸಾದ್ ಅವರು ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹರಿಯಣ್ಣ ಎಂದೇ ಜನಪ್ರಿಯರಾಗಿದ್ದ ಹೊಸಂಗಡಿ ನಿವಾಸಿಯಾಗಿರುವ ಹರಿಪ್ರಸಾದ್ ಅವರು ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಸದಸ್ಯರಾಗಿ, ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೂಡುಬಿದಿರೆ : ಇಲ್ಲಿನ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜ. 10ರಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪುತ್ತಿಗೆ ದೇವಸ್ಥಾನದ ಮೊಕ್ತೇಸರ ಚೌಟರ ಅರಮನೆ ಕುಲದೀಪ್ ಎಂ. ಅವರಿಗೆ ದೇಣಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳಾದ ಶ್ರೀಪತಿ ಭಟ್, ವಾದಿರಾಜ ಮಡುಮಣ್ಣಯಾ, ಪ್ರಧಾನ ಅರ್ಚಕ ಅಡಿಗಲ್ಲು ಅನಂತಕೃಷ್ಣ ಭಟ್, ಶಿವಪ್ರಸಾದ್ ಆಚಾರ್, ವಿದ್ಯಾರಮೇಶ್ ಭಟ್, ನಿಲೇಶ್ ಶೆಟ್ಟಿ, ವೆಂಕಟ್ರಮಣ ಕಾರಂತ್ , ರವಿಶಂಕರ ಪಳಕಳ,ರಮೇಶ್ […]

ಮೂಡುಬಿದಿರೆ: ವಿದ್ಯಾರ್ಥಿಗಳು ಪಠ್ಯದಷ್ಟೇ ಆಸಕ್ತಿ ಪಠ್ಯೇತರ ಚಟುವಟಿಕೆಯಲ್ಲಿ ವಹಿಸಬೇಕು. ಅದರಲ್ಲೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾತ್ರವಲ್ಲದೆ ಅವರ ಮಾನಸಿಕ ವಿಕಸನಕ್ಕೂ ಪೂರಕವಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸ್ಕೌಟ್ಸ್ ಮತ್ತು ಗೈಡ್‌ನ ದ.ಕ.ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ ಹೇಳಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗಾಗಿ ಸ್ವರಾಜ್ ಮೈದಾನದಲ್ಲಿ ಆಯೋಜಿಸಿದ್ದ […]

ಮೂಡುಬಿದಿರೆ: ತಾಲೂಕಿನ ಕೆಲ್ಲಪುತ್ತಿಗೆಯ ವೀರಮಾರುತಿ ಕ್ರೀಡಾಂಗಣದಲ್ಲಿ ಶ್ರೀಮತಿ ಮತ್ತು ಶ್ರೀ ಸುರೇಂದ್ರ ಕೋಟ್ಯಾನ್ ಮತ್ತು ಮಕ್ಕಳು ಸೊಸೆಯಂದಿರು , ಮೊಮ್ಮಕ್ಕಳು, ಹಾಗೂ ದುರ್ಗಾ ಪ್ರಸಾದ್ ಕುಟುಂಬಸ್ಥರ ಹರಕೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಬಯಲಾಟವು ನಾಳೆ ಶುಕ್ರವಾರ ಸಂಜೆ 6.00 ಗಂಟೆಗೆ ನಡೆಯಲಿದೆ

ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಜ. 25ರಂದು ಕಡಲಕೆರೆ ನಿಸರ್ಗ ಧಾಮದಲ್ಲಿ ನಡೆಯುವ ಬೆದ್ರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಡುಗಡೆ ಗೊಳಿಸಿದರು.ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ಗುಣಪಾಲ ಕಡಂಬ, ದ ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ ಸುಚರಿತ ಶೆಟ್ಟಿ, ಪುರಸಭೆ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಂಜಿತ್ […]

ಮಂಗಳೂರು: ಬಿಹಾರ ಮೂಲದ ಪ್ರೇಮ್‌ಜಿತ್ ಅಲಿಯಾಸ್ ಪಂಕಜ್ ಕುಮಾರ್ ಎಂಬ 14 ವರ್ಷದ ಬಾಲಕನು ಸೋಮವಾರ ಮಧ್ಯಾಹ್ನ 2.30 ರ ವೇಳೆಗೆ ಮನೆಯಲ್ಲಿ ಯಾರಿಗೂ ಹೇಳದೇ ಮನೆಬಿಟ್ಟು ಹೋದವನು ಮರಳಿ ಬಾರದೇ ಕಾಣೆಯಾಗಿದ್ದಾನೆ.ಬಾಲಕನ ಗುರುತು ಚಹರೆಯು ಸುಮಾರು 5 ಅಡಿ 7 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ, ಕುತ್ತಿಗೆಯಲ್ಲಿ ಕೆಂಪು ಬಣ್ಣದ ದಾರ ಮತ್ತು ತಾಯತವಿದ್ದು, ಎಡಕೈನಲ್ಲಿ ಲೋಹದ ಖಡಗ ಧರಿಸಿರುತ್ತಾನೆ. ಬಲ ತೊಡೆಯಲ್ಲಿ ಹಳೆಯ ಶಸ್ತç ಚಿಕೆತ್ಸೆಯ ಗುರುತಿದೆ. ಕಪ್ಪು ಚೌಕುಳಿಗಳಿರುವ ಹಳದಿ ಬಣ್ಣದ ಶರ್ಟ್, […]

ಮೂಡುಬಿದಿರೆ: ಮಹಿಳೆಯರು ಟೈಲರಿಂಗ್ ತರಬೇತಿಯನ್ನು ಪಡೆದು, ಸ್ವಂತ ಉದ್ಯಮವನ್ನು ಆರಂಭಿಸಿ. ಇದೀಗ ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು, ನಿಮಗೆ ನೀಡುವ ಹೊಲಿಗೆ ಯಂತ್ರದಿಂದ ನೀವುಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಒಳ್ಳೆಯ ಉದ್ಯಮ. ಹಾಗಾಗಿ ಟೈಲರಿಂಗ್‌ನಲ್ಲಿ ತರಬೇತಿಯನ್ನು ಪಡೆದು ಸ್ವ ಉದ್ಯಮ ಆರಂಭಿಸಿ ಎಂದು ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರುಅವರು ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ನಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ […]

ಮೂಡುಬಿದಿರೆ: ಇಲ್ಲಿನ ಎ.ಫ್ರೆಂಡ್ಸ್ ಹಮ್ಮಿಕೊಂಡಿದ್ದ ‘ಶಿವದೂತೆ ಗುಳಿಗೆ’ ನಾಟಕದ ಸಂದರ್ಭದಲ್ಲಿ ಕಂಬಳ ಕ್ಷೇತ್ರದ ಸಾಧಕ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸತೀಶ್ಚಂದ್ರ ಸಾಲ್ಯಾನ್ ಪಾಣಿಲ, ಪೆರಾಡಿ ಸೊಸೈಟಿ ಬ್ಯಾಂಕ್ ಗೆ ಅವಿರೋಧವಾಗಿ ಆಯ್ಕೆಯಾದ ಜಯಶ್ರೀ ಹೊಟೇಲ್ ಮಾಲಕ ಸುರೇಶ್ ಅಂಚನ್ ಹಾಗೂ ಕಲಾಸಂಗಮ ತಂಡದ ಮುಖ್ಯಸ್ಥರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಕ್ಸಲೆಂಟ್ ಕಾಲೇಜಿನ ಮುಖ್ಯಸ್ಥರಾದ ಯುವರಾಜ ಜೈನ್,ಬಿಜೆಪಿ ಮುಖಂಡ ಸುದರ್ಶನ ಎಂ, ಕೆ.ಪಿ.ಜಗದೀಶ್ ಅಧಿಕಾರಿ, ಉದ್ಯಮಿಗಳಾದ ಕೆ.ಶ್ರೀಪತಿ ಭಟ್,ನಾರಾಯಣ ಪಿ.ಎಂ,ಅರುಣ್ ಪ್ರಕಾಶ್ ಶೆಟ್ಟಿ,ತೋಡಾರು ದಿವಾಕರ […]

ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕಳೆದ ವರ್ಷ ಏ.24ರಂದು ಮೂಡುಬಿದಿರೆಯ ಮಚ್ಚಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಿಲ್ಲಿಸಿದ್ದು ಮರುದಿನ ಬೆಳಿಗ್ಗೆ 7 ಗಂಟೆಗೆ ಹಿಟಾಚಿಯ ಬಳಿ ಬಂದು ನೋಡಿದಾಗ ಎರಡೂ ಹಿಟಾಚಿಗಳ 4 ಬ್ಯಾಟರಿಗಳನ್ನು ಯಾರೋ ಕಳ್ಳರು ಕಳವು […]