Subscriber Content
Add content here that will only be visible to your subscribers.

Add content here that will only be visible to your subscribers.


ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -೪೫ ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಮೂಡುಬಿದಿರೆ: ಮಂಗಳೂರು ವಿವಿಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ದೇಶೀಯ ಮಟ್ಟದಲ್ಲಿ ಸಾರ್ವಕಾಲಿಕ ಸಾಧನೆ ಮೆರೆದಿದ್ದಾರಲ್ಲದೆ ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಸತತ 22ನೇ ಬಾರಿ ಸಮಗ್ರತಂಡ ಪ್ರಶಸ್ತಿಯನ್ನು ದ್ವಿತೀಯ ಸ್ಥಾನ ಪಡೆದ ತಂಡದಿಂದ 460 ಅಂಕಗಳ ಅಂತರದಲ್ಲಿ ಪಡೆಯುವುದರ ಜೊತೆಗೆ 11 ನೂತನ ಕೂಟದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿಗಳು ನಿರ್ಮಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಕ್ರೀಡಾ ಪ್ರೋತ್ಸಾಹಕ ಡಾ.ಎಂ. ಮೋಹನ ಆಳ್ವ ತಿಳಿಸಿದರು.ಅವರು ಸೋಮವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ […]

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ತಾಲೂಕಿನ 15 ಶಾಲೆ ಗಳಿಗೆ 125 ಜೊತೆ 10,00,000 ರೂಪಾಯಿ ಮೊತ್ತದ ಬೆಂಚು ಡೆಸ್ಕ್ ವಿತರಣೆ ,ಅಲಂಗಾರು ವಲಯದ ತಂಡ್ರಾಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ 10 ಸೆಟ್ ಬೆಂಚುಡೆಸ್ಕ್ ವಿತರಣೆಯನ್ನು ತಾಲೂಕು ಯೋಜನಾಧಿಕಾರಿ ಸುನಿತಾ ನೆರೆವೇರಿಸಿದರು.ಈ ಸಂದರ್ಭ ಅಲಂಗಾರು ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರು ದಯಾನಂದ ಪೈ, ಶಾಲಾ ಮುಕ್ಯೋ ಪಾಧ್ಯಾಯರು ಅರುಣಾ ಕುಮಾರಿ, ಸಹಶಿಕ್ಷಕರು.ವಿಗ್ನೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳು, ವಲಯ […]

ಮೂಡುಬಿದಿರೆ: ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಸರ್ಕಾರ ಹಾಗೂ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ರೀಡಾಳುಗಳಿಗೆ ಸರ್ಕಾರವಾಗಲಿ ವಿಶ್ವವಿದ್ಯಾಲಯವಾಗಲಿ ಯಾವುದೇ ಪ್ರೋತ್ಸಾಹವನ್ನು ನೀಡುತ್ತಿಲ್ಲ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ ಮೋಹನ್ ಆಳ್ವ ಖೇದ ವ್ಯಕ್ತಪಡಿಸಿದ್ದಾರೆ.ಹಿಂದಿನ ವರ್ಷ ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಸುಮಾರು 1.8 ವರ್ಷಗಳೇ ಕಳೆದರೂ ಇದುವರೆಗೂ ಬಿಡುಗಡೆಯಾದ ಹಣವಿ.ವಿ. ಪಾವತಿ ಮಾಡಿರುವುದಿಲ್ಲ. ದೇಶಿಯ ಮಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಐದನೇ ಸ್ಥಾನಕ್ಕೆ ಏರಿಸಿದ ಆಳ್ವಾಸ್ ಕ್ರೀಡಾಳುಗಳಿಗೆ ಯಾವುದೇ ಪ್ರೋತ್ಸಾಹಕರವನ್ನು ಕೂಡ […]

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ವ್ಯಾಪಕ ಮಳೆಯಾಗುತ್ತಿದ್ದು ಅರೆಂಜ್ ಅಲರ್ಟ್ ಘೋಷಣೆಯಾದ ಹಿನ್ನಲೆ ಮುಂಜ್ರಾಗತ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಾಮಿಕ,ಫ್ರೌಡ, ಶಾಲೆ, ಹಾಗೂ ಪದವಿ ಪೂರ್ವ(12ನೇ ತರಗತಿ)ಯವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಘೋಷಿಸಿದ್ದಾರೆ.ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂದತೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ […]

ಮೂಡುಬಿದಿರೆ: ಶ್ರೀ ರಾಮ್ ಫ್ರೆಂಡ್ಸ್, ಅಂಗರಗುಡ್ಡೆ ರಾಮನಗರ ಮುಲ್ಕಿ ಇದರ ವತಿಯಿಂದ ಧೀರ ಬಲಿದಾನಿ ದಿ||ಸುಖಾನಂದ ಶೆಟ್ಟಿಯವರ ಸ್ಮರಣಾರ್ಥವಾಗಿ ನಡೆದ ಸುಮಾರು 100 ಜನರಿಗೆ ಅಂಚೆ ಇಲಾಖೆಯ 10 ಲಕ್ಷ ರೂಪಾಯಿ ವೆಚ್ಚದ ಉಚಿತ ಅಪಘಾತ ವಿಮೆ ನೋಂದಣಿ ಬೃಹತ್ ಅರೋಗ್ಯ ತಪಾಸಣೆ ಹಗ್ಗ ಜಗ್ಗಾಟ ಹಾಗೂ ವಾಲಿಬಾಲ್ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಮೂಡುಬಿದಿರೆ: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯAತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. […]

ಮೂಡುಬಿದಿರೆ: ಇಲ್ಲಿನ ವಕೀಲರ ಸಂಘದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಮಧುಕರ ಪಿ. ಭಾಗವತ್ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಭಾರತದ ಸಂವಿಧಾನದಲ್ಲಿ ನಮೂದಿಸಿದ ಜನರ ಮೂಲಭೂತ ಹಕ್ಕು ಮತ್ತು ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಚಲಾವಣೆಯಲ್ಲಿ ಇರುವ ಇತಿ ಮಿತಿಗಳ ಬಗ್ಗೆ ತಿಳಿಸಿದರು.ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಕೀಲರಾದ ನಾವೆಲ್ಲರೂ ಕರ್ತವ್ಯ ನಿರ್ವಹಿಸೋಣ ಎಂದರು. ಕಾರ್ಕಳದ ಹಿರಿಯ ನ್ಯಾಯವಾದಿ ಶ್ರೀ ಪಿ.ಸುಗಂಧ […]

ಮೂಡುಬಿದಿರೆ: ಶಿರ್ತಾಡಿಯಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ಕಟ್ಟಡದ ಶಿಲಾನ್ಯಾಸ ಸಮಾರಂಭ ಹಾಗೂ ಸಂಜೀವಿನಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬುಧವಾರ ಶಿರ್ತಾಡಿಯ ಪೇಟೆಯಲ್ಲಿ ಜರುಗಿತು.ಶಿರ್ತಾಡಿ ಪಂಚಾಯತ್ ಅಧ್ಯಕ್ಷರಾದ ಆಗ್ನೇಸ್ ಡಿಸೋಜ ಅಧ್ಯಕ್ಷತೆ ವಹಿಸಿ ನೂತನ ಸಂಜೀವಿನಿ ಕಟ್ಟಡವನ್ನು ಉದ್ಘಾಟಿಸಿ ಗ್ರಾಮದ ಅಭಿವೃದ್ಧಿಯಲ್ಲಿ ಸರ್ವರ ಪಾತ್ರವನ್ನು ಸ್ಮರಿಸಿದರು.ಪಂಚಾಯತ್‌ದ ಹಿರಿಯ ಸದಸ್ಯ ಎಸ್. ಪ್ರವೀಣ್ ಕುಮಾರ್ ಬಸ್ಸು ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿದರು.ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಮಾತನಾಡಿ […]

ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ.ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಬಗ್ಗೆ ಮಾತನಾಡಿದ ದೇವಿ ಪ್ರಸಾದ್ ಶೆಟ್ಟಿ ಅವರು ತೀರ್ಪುಗಾರರು ನೀಡುವ ತೀರ್ಪಿನ ಬಗ್ಗೆ ಕಂಬಳ ಆಯೋಜಕರು, ಕೋಣಗಳ […]