



ಮೂಡುಬಿದಿರೆ: ಕಳೆದ ಒಂದು ವಾರದಿಂದ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವಲ್ಲಿ ಮಣ್ಣು ಕರಗಿ ತಗ್ಗು ಪ್ರದೇಶದತ್ತ ಹರಿದು ದಿನ ನಿತ್ಯ ಓಡಾಡುವ ರಸ್ತೆಗಳೆಲ್ಲಾ ಕೆಸರುಗದ್ದೆಗಳಾಗಿ ಬಿಟ್ಟಿವೆ. ಜನ, ವಾಹನಗಳ ಓಡಾಟಕ್ಕೆ ತೊಂದರೆಯುಂಟಾಗಿದೆ.ಅಲಂಗಾರು ಪರಿಸರದಲ್ಲಿ ವಿಶೇಷವಾಗಿ ಕಾನ, ಪೊಯ್ಯದದಲ್ಯ ಅಂಬೂರಿ ಮೊದಲಾದ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿ ಮಳೆಗಾಲದ ಆರಂಭಕ್ಕೂ ಮುನ್ನ ಮಳೆಗಾಲದ ಸಂಭಾವ್ಯ ಆಪಾಯ, ತೊಂದರೆಗಳ ಬಗ್ಗೆ ಗುತ್ತಿಗೆದಾರರು ಮುನ್ನೆಚ್ಚರಿಕೆ ತೆಗೆದುಕೊಳ್ಳದ ಕಾರಣ ಸಮಸ್ಯೆ ಬಿಗಡಾಯಿಸಿದೆ.ಹೆದ್ದಾರಿ ನಿರ್ಮಾಣವಾಗುವ ಹಂತದಲ್ಲಿ ಈ ಭಾಗದ […]

ಮೂಡುಬಿದಿರೆ: ಮೂಡುಬಿದಿರೆ ಜನರ ಪ್ರಮುಖ ಬೇಡಿಕೆಯಾಗಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ಅಧಿಕೃತಗೊಳಿಸಲು ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು.ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಪುರಸಭೆ, ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಜಂಟಿಯಾಗಿ ಮೂಡುಬಿದಿರೆ ರಾಜೀವ್ ಗಾಂಧಿ ವಾಣಿಜ್ಯ ಸಂರ್ಕೀಣದ ಮುಂಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.ಧರ್ಮಸ್ಥಳ-ಉಡುಪಿ, ಕಾರ್ಕಳ- ಮಂಗಳೂರು ರಾಜ್ಯ ಸಾರಿಗೆ ಬಸ್‌ಗಳು ಮೂಡುಬಿದಿರೆ ಮೂಲಕ ಸಂಚರಿಸುವಾಗ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸಲು ಮತ್ತು ಇಳಿಸಲು ಈ ಬಸ್ ನಿಲ್ದಾಣವನ್ನು ಬಳಸಿಕೊಳ್ಳಲು ಈ ಸಂದರ್ಭದಲ್ಲಿ ನಿರ್ಧರಿಸಲಾಯಿತು.ರಸ್ತೆ ಬದಿಯ […]

ಮೂಡುಬಿದಿರೆ:ಮಾಂಟ್ರಾಡಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಎಕ್ರೆಗಟ್ಟಲೆ ಸರಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದು ಈ ಬಗ್ಗೆ ದೂರು ಕೊಟ್ಟರೂ ಕಂದಾಯ ಇಲಾಖೆ ಕ್ರಮ ವಹಿಸಿಲ್ಲ ಎನ್ನಲಾಗಿದೆ.ಮಾಂಟ್ರಾಡಿ ಗ್ರಾಮದ ಸ.ನಂ 88-1ರಲ್ಲಿ ಎಲಿಯಾಸ್ ಸಲ್ದಾನ ಎಂಬವರು ತನ್ನ ಸ್ವಾಧೀನದಲ್ಲಿದ್ದ ಸರಕಾರಿ ಜಾಗವನ್ನು ಸಕ್ರಮಗೊಳಿಸುವಂತೆ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದು ಅವರ ಅರ್ಜಿ ವಿಚಾರಣೆ ಹಂತದಲ್ಲಿದೆ ಎನ್ನಲಾಗಿದೆ. ಈ ಮಧ್ಯೆ ಆಂತೋನಿ ಡಿಸೋಜಾ ಎಂಬವರು ನನ್ನ ಸ್ವಾಧೀನದಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮವಾಗಿ ೧೫ ಕ್ಕೂ ಹೆಚ್ಚು ಪಿಲ್ಲರ್‌ಗಳನ್ನು ಹಾಕಿ ಜಾಗವನ್ನು ತನ್ನ ವಶಕ್ಕೆ […]

ಮೂಡುಬಿದಿರೆ : ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು. ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾನ್ಸ್ ಮಾಡುತ್ತಿದ್ದ ಸಂದರ್ಭರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆಗಾಗಲೇ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ತಿಳಿದುಬಂದಿದೆ.ಮೃತರು ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ […]

ಮೂಡುಬಿದಿರೆ : ಭಕ್ತರು ತಮಗೆ ಸೇರಿದ ದೇವಾಲಯಗಳನ್ನು ಸುಸಜ್ಜಿತವಾಗಿಸಿಕೊಳ್ಳಬೇಕು. ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ದೇವರು ಎಲ್ಲೆಡೆಯೂ ಇದ್ದಾನೆ. ಆದರೆ ದೇವರ ಸಾನಿಧ್ಯವಿದ್ದರೆ ಅಲ್ಲಿ ಎಲ್ಲರೂ ಒಗ್ಗೂಡಲು ಸಾಧ್ಯ. ದೇವರ ಸಾನಿಧ್ಯವನ್ನು […]

ಮೂಡುಬಿದಿರೆ: ಹಿಂದೂ ಕಾರ್ಯಕರ್ತ ಮಂಗಳೂರ್ ಬಜ್ಪೆ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ನಡೆದ ಜಿಲ್ಲಾ ಬಂದ್ ಕರೆಗೆ ಸ್ಪಂದಿಸಿ ಗ್ರಾಮಾಂತರ ಪ್ರದೇಶಗಳಲ್ಲೂ ಅಂಗಡಿ ಬಂದ್ ನಡೆಸಿರುವುದಲ್ಲದೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಕೊಲೆ ಹಿನ್ನೆಲೆಯಲ್ಲಿ ಮಾರ್ಗ ಮಧ್ಯ ಟೈರ್ ಸುಟ್ಟು ಆಕ್ರೋಶ ವ್ಯಕ್ತ ಪಡಿಸಲಾಗಿದೆ. ಮಾತ್ರವಲ್ಲದೇ ಹಿಂದೂ ಕಾರ್ಯಕರ್ತ ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಂದ್ ಬಗ್ಗೆ ಹಿಂದೂ ಸಂಘಟನೆಗಳು ನೀಡಿದ ಕರೆಗೆ ಸ್ಪಂದಿಸಿ ಮೂಡುಬಿದಿರೆಯಲ್ಲೂ ವ್ಯಾಪಾರ ಮಳಿಗೆ, ಪೆಟ್ರೋಲ್ ಬಂಕ್, […]

ಮೂಡುಬಿದಿರೆ: ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ನ ಬಗ್ಗೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ಸುಹಾನ್ ಶೆಟ್ಟಿ ಎಂಬಾತನ ಮೇಲೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅದುದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆ ಬರುವಂತಹ […]

ಮೂಡುಬಿದಿರೆ:ಭಯೋತ್ಪಾದಕರು ಹಿಂದೂ ಪ್ರವಾಸಿಗರ ಜಾತಿ ಕೇಳಿ, ಪ್ಯಾಂಟ್ ಬಿಚ್ಚಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸಂತ್ರಸ್ಥರಿಗೆ ಪ್ರಧಾನಿಯವರಿಂದ ಕೇವಲ ಸಾಂತ್ವನ ಸಾಲದು. ಪ್ರಧಾನಿಯಷ್ಟೆ ಸಾಮಾನ್ಯ ಜನರ ಜೀವಕ್ಕೂ ಬೆಲೆ ಇದೆ. ಆದ್ದರಿಂದ ಪಹಲ್ಲಾಮ್ ಘಟನೆಗೆ ಪಾಕಿಸ್ತಾನದ ವಿರುದ್ಧ ಪ್ರತಿಕಾರ ತೀರಿಸುವುದೆ ಸೂಕ್ತ ಪರಿಹಾರ ಎಂದು ಯುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಅವರು ದರೆಗುಡ್ಡೆ ಇಟಲ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರಭಾವಿಯಾಗಿರುವ ಈಶ್ವರ ಶಾಂತ ರೀತಿಯ ವ್ಯಕ್ತಿತ್ವವನ್ನು ಹೊಂದಿರುವವ […]

ಮೂಡುಬಿದಿರೆ:ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ನ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ನಿಶ್ಮಿತಾ ಸಂಸ್ಥೆಗಳ ಮುಖ್ಯಸ್ಥ ನಾರಾಯಣ ಪಿ.ಎಂ.ಅವರು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರಾಜಾರಾಮ್,ಕೊರಗ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ ಎಂ, ಕಾರ್ಯದರ್ಶಿಯಾಗಿ ಗಂಗಾಧರ ಎಂ ಹಾಗೂ ಕೋಶಾಧಿಕಾರಿಯಾಗಿ ಚೇತನ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಮೂಡುಬಿದಿರೆ : ಮಹತೋಭಾರ ಸೋಮನಾಥೇಶ್ವರ ದೇವಸ್ಥಾನ ಇಟಲ ದರೆಗುಡ್ಡೆ, ಸೋಮನಾಥೇಶ್ವರ ದೇವರ ಕ್ಷೇತ್ರವು ಸಂಪೂರ್ಣ ಶಿಲಾಮಯವಾಗಿ ಪುನರ್ ನಿರ್ಮಿಸಿ ಇದೀಗ ಬ್ರಹ್ಮಕಲಶೋತ್ಸವವು ಮೆ.೨ರಂದು ನಡೆಯಲಿದ್ದು ಆ ಪ್ರಯುಕ್ತ ವೈಭವದ ಹೊರೆಕಾಣಿಕೆ ಮೆರವಣಿಗೆಯು ಭಾನುವಾರ ಸಂಜೆ ನಡೆಯಿತು.ಅಳಿಯೂರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೈದಾನದಿಂದ ಹೊರಟ ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.ಬಳಿಕ ಸುಮಾರು ೨.ಕಿ.ಮೀ ದೂರದ ದರೆಗುಡ್ಡೆ ಇಟಲ ದೇವಸ್ಥಾನದವರೆಗೆ ನಡೆದ ಮೆರವಣಿಗೆಯಲ್ಲಿ […]