



ಮೂಡುಬಿದಿರೆ : ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಭಾನುವಾರ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ಹಲವಾರು ಮನೆಗಳಿಗೆ ಹಾನಿಯಾಗಿದೆ. ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಪುತ್ತಿಗೆಮನೆಯ ಧನಂಜಯ ಮೂಡುಬಿದಿರೆಯವರ ಮನೆಗೆ ಮರ ಉರುಳಿ ಬಿದ್ದಿದ್ದು ಅಪಾರ ಹಾನಿಯಾಗಿದೆ. ಇದೇ ಪರಿಸರದಲ್ಲಿರುವ ಪ್ರಶಾಂತ್, ತೇಜಸ್, ಮಹೇಶ್ ಎಂಬವರ ಮನೆಗೂ ತೀವ್ರ ಹಾನಿಯಾಗಿದೆ. ಈ ಪರಿಸರದಲ್ಲಿ ಹಲವು ವಿದ್ಯುತ್ ಕಂಬಗಳು ಉರುಳಿ […]

ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಶನಿವಾರ ಸಂಜೆ ಉರ್ವ ಸ್ಟೋರ್ ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು. ಅಭಿನಂದನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಆರ್.ಪದ್ಮರಾಜ್ ಪೂಜಾರಿಯವರು, “ನಾವು […]

ಕೃಷ್ಣೋತ್ಸವಕ್ಕೆ ಶುಭ ಹಾರೈಸಿದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜವನೆರ್ ಬೆದ್ರ ಫೌಂಡೇಶನ್ ವತಿಯಿಂದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ನೇ ವರ್ಷದ ಮೊಸರು ಕುಡಿಕೆ ಪ್ರಯುಕ್ತ ನಡೆಯುವ ಕೃಷ್ಣೋತ್ಸವ 2024 ಗೆ ಬಿಜೆಪಿಯ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಭ ಹಾರೈಸಿದರೆ ನಳಿನ್ ಕುಮಾರ್ ಕಟೀಲ್ ಅವರಿಗೆ ಸಂಘಟನೆಯ ಪ್ರಮುಖರು ಕ್ಷಷ್ಣೋತ್ಸವ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದು ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆಪಿ ಜಗದೀಶ ಅಧಿಕಾರಿ ,ಜವನೆರ್ […]

ಉಡುಪಿ ಹಾಗೂ ದಕ್ಷಿಣ ಜಿಲ್ಲೆಯಾದ್ಯಂತ ತೀವ್ರ ಮಳೆ ಹಿನ್ನಲೆ ಜುಲೈ 20 ರಂದು ಜಿಲ್ಲೆಯ ಶಾಲೆ, ಪಿಯುಸಿ ತರಗತಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಮೂಡುಬಿದಿರೆ : ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮತ್ತು ಪೌಷ್ಟಿಕ ಆಹಾರ ಕಿಟ್ ವಿತರಣಾ ಸಮಾರಂಭವು ನೆಲ್ಲಿಕಾರು ಗ್ರಾಮ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.ಶಿಬಿರವನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ ಉದ್ಘಾಟಿಸಿ ಮಾತನಾಡಿ ವರ್ಷವಿಡೀ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರಿಗೆ ಆರೋಗ್ಯ ಭದ್ರತೆಯ ಜತೆಗೆ ಪೌಷ್ಟಿಕಾಂಶ ಉಳ್ಳ ಆಹಾರ ಧಾನ್ಯ ನೀಡುತ್ತಿರುವ ಸರಕಾರದ ಈ ಯೋಜನೆ ಉತ್ತಮವಾಗಿದೆ ಎಂದರು.ಉಪಾಧ್ಯಕ್ಷೆ ಸುಶೀಲಾ ಸದಸ್ಯರಾದ ಜಯಂತ ಹೆಗ್ಡೆ , ಆಶಾಲತ […]

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಹಾಗೂ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ) ಕಾರ್ಕಳ ಇವುಗಳ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಮತ್ತು ಪ್ರಧಾನ ಮಂತ್ರಿ ಜನಸೇವಾ ಸೌಲಭ್ಯಗಳ ಅಭಿಯಾನವು ಸಮಾಜ ಮಂದಿರದಲ್ಲಿ ಶುಕ್ರವಾರ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡುಬಿದಿರೆ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಭಾರತೀಯ ಅಂಚೆ ಇಲಾಖೆಗೆ ಸುಮಾರು […]

ಮೂಡುಬಿದಿರೆ: ಗೌಡ ಸಾರಸ್ವತ ಬ್ರಾಹ್ಮಣ ( ಜಿ.ಎಸ್.ಬಿ) ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪರ್ತಗಾಳಿ ಗೋವಾ ಇದರ ಸಾರ್ಧ ಪಂಚಶತಮಾನೋತ್ಸವ (550ವರ್ಷ) ಅಂಗವಾಗಿ 550 ದಿನಗಳ ( 2024ರ ಎಪ್ರಿಲ್ 17ರಿಂದ 2025ರ ಅಕ್ಟೋಬರ್ 18) 550 ಕೋಟಿ ಶ್ರೀ ರಾಮ ನಾಮ ಜಪ ಅಭಿಯಾನ ಸಂಸ್ಥಾನದ ಶಾಖಾ ಮಠ ಸಹಿತ ಹಲವೆಡೆ ದೇವಸ್ಥಾನಗಳಲ್ಲಿ ಈಗಾಗಲೇ ನಡೆಯುತ್ತಿದೆ.ಕಳೆದ ಜೂನ್ 15ರಿಂದ ಮೂಡುಬಿದಿರೆಯ ಮೂಡುವೇಣುಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಪುನಃ […]

ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ವೆಬ್ ಸೈಟ್ ದಿನಾಂಕ 17.07.2024, ಬುಧವಾರದಂದು ಮಂಗಳೂರಿನ ಪೊಲೀಸ್ ಕಮೀಷನರ್ ಆಫೀಸಿನಲ್ಲಿ ಅನಾವರಣಗೊಂಡಿತು . ಈ ವೆಬ್ ಸೈಟ್’ನ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್ ಅವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತಾಡಿದ ಅವರು ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಾಫ್ಟ್ ವೇರ್ ಕಂಪನಿ’ಗೆ ಶುಭ ಹಾರೈಕೆ ನೀಡಿ, ಸೈಬರ್ ಸೆಕ್ಯೂರಿಟಿ’ನಲ್ಲಿ ಡೀಪ್ ಫೇಕ್ ವೀಡಿಯೋಸ್’ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಶ್ಲಾಘಿಸಿದರು.ಎಕೊಲೇಡ್ ಟೆಕ್ […]

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಜುಲೈ 18, 2024 ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಪ್ರಕಾರ, ಈ ರಜೆಯನ್ನು ಘೋಷಿಸುವುದಕ್ಕೆ ಹವಾಮಾನ ವೈಪರೀತ್ಯ ಮತ್ತು ಸುರಕ್ಷತಾ ಕಾರಣಗಳು ಕಾರಣವಾಗಿದೆ. ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಯು ಸುರಕ್ಷಿತವಾಗಿರಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜುನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.