



ಮೂಡುಬಿದಿರೆ: ಮರುಳು ಮಾತುಗಳನ್ನಾಡಿ ಜನರನ್ನು ತಮ್ಮತ್ತ ಸೆಳೆದು ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿದ ಪಂಚವಟಿ ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ವಿರುದ್ಧ ಸಿಐಡಿ ಘಟಕದಲ್ಲಿ ತನಿಖೆ ನಡೆಯುತ್ತಿದ್ದು, ವಂಚನೆಗೆ ಒಳಗಾದವರು ತನಿಖಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಿಐಡಿ ಘಟಕವು ಪ್ರಕಟಣೆ ನೀಡಿದೆ. ಹೆಚ್ಚಿನ ಲಾಭಾಂಶ ನೀಡುವುದಾಗಿ ಸಾರ್ವಜನಿಕರಿಂದ ಠೇವಣಿ ರೂಪದಲ್ಲಿ ಹಣ ಸಂಗ್ರಹಿಸಿ ಮೆಚ್ಯೂರಿಟಿ ಆದ ನಂತರವೂ ಸಹ ಹಲವಾರು ಬಾರಿ ಸೊಸೈಟಿಗೆ ಹೋಗಿ ಕೇಳಿದರೂ ದುಡ್ಡು ವಾಪಾಸ್ ಕೊಡದ ಬಗ್ಗೆ […]

ಮಂಗಳೂರು: ಭಾರೀ ಮಳೆ ಹಿನ್ನೆಲೆ ನಾಳೆ ( ಜೂ. 28)ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆಧುನಿಕ ಸಮಾಜದ ಬಹುದೊಡ್ಡ ಸವಾಲು ಮಾದಕ ದ್ರವ್ಯ ಸೇವನೆಯಾಗಿದೆ. ವಿಶೇಷವಾಗಿ ಯುವಜನತೆ ದುರ್ವ್ಯಸನಗಳಿಗೆ ದಾಸರಾಗಿ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಶಾಪವಾಗಿ ಪರಿಣಮಿಸುತ್ತಿದ್ದಾರೆ. ತಾತ್ಕಾಲಿಕ ಮೋಜಿಗಾಗಿ ಆರಂಭವಾಗುವ ಮಾದಕ ವಸ್ತುಗಳ ಸೇವನೆಯಿಂದ ಅವರ ಭವಿಷ್ಯವನ್ನು ನಾಶಮಾಡುವ ಜೊತೆಗೆ ಸಮಾಜದ ನೆಮ್ಮದಿಯನ್ನು ಕೆಡಿಸುವರು. ಮನುಷ್ಯನ ನರಮಂಡಲದ ಮೇಲೆ ಪರಿಣಾಮ ಬೀರುವ ಇಂತಹ ದುಶ್ಚಟಗಳಿಂದ ದೂರವಿದ್ದು ವೈಯಕ್ತಿಕ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೇಶ ಪಿ ಜಿ ಅವರು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಸೇವನೆಯ […]

ದಕ್ಷಿಣ ಕನ್ನಡದಲ್ಲಿ ಕುಂಭದ್ರೋಣ ಮಳೆಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆತುಂಬಿ ಹರಿದ ನದಿಗಳು…ತಗ್ಗು ಪ್ರದೇಶದಲ್ಲಿ ಜಲಾವೃತಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮೂಡಬಿದಿರೆ : ಇನ್ಮುಂದೆ ಕಂಡ ಕಂಡಲ್ಲಿ ತಮ್ಮ ವಾಹನಗಳನ್ನು ಸವಾರರು ನಿಲ್ಲಿಸುವಂತಿಲ್ಲ. ಒಂದೊಮ್ಮೆ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿದ್ರೆ ಪೊಲೀಸರು ವಾಹನಗಳನ್ನು ಲಾಕ್ ಮಾಡುವ ಮೂಲ ಬಿಸಿ ಮುಟ್ಟಿಸಲು ಮೂಡಬಿದಿರೆ ಪೊಲೀಸರು ಮುಂದಾಗಿದ್ದಾರೆ. ಇಂದು ಹಲವು ವಾಹನಗಳಿಗೆ ಪೊಲೀಸರ ಲಾಕ್ ಬಿದ್ದಿದೆ. ಮೂಡಬಿದಿರೆ ನಗರದಲ್ಲಿ ವಾಹನ ಸವಾರರು ತಮ್ಮ ವಾಹನಗಳನ್ನು ಸಿಕ್ಕ ಸಿಕ್ಕ ಸ್ಥಳದಲ್ಲಿ ನಿಲ್ಲಿಸುತ್ತಿದ್ದರು. ಇದರಿಂದಾಗಿ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೊಡಕಾಗುತ್ತಿತ್ತು. ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ಖಡಕ್ ಪೊಲೀಸ್ ಅಧಿಕಾರಿ ಎಂದೇ ಖ್ಯಾತಿ ಪಡೆದಿರುವ […]

ಬೆಂಗಳೂರು, 21 ಜೂನ್ 2024: ರಾಜ್ಯದ ಜನತೆ ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದಾಗ, ಕರ್ನಾಟಕ ಸರ್ಕಾರದಿಂದ ಮತ್ತೊಂದು ಹೊಡೆತ ಬಿದ್ದಿದೆ. ಮೊನ್ನೆ ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ದರವನ್ನು ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಕೂಡ ಹೆಚ್ಚಿಸಿ ಆದೇಶ ಹೊರಡಿಸಿದೆ. ಕರ್ನಾಟಕ ದೂಧ ಉತ್ಪಾದಕರ ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್ ಹಾಲಿನ ದರವನ್ನು 2.10 ರೂಗೆ ಹೆಚ್ಚಿಸುವ ಆದೇಶ ಹೊರಡಿಸಿದೆ

ಬೆಂಗಳೂರು : ‘ವೆಜ್, ಚಿಕನ್, ಫಿಶ್ ಸೇರಿ ಇತರೆ ಕಬಾಬ್‍ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸಬಾರದು’ ಎಂದು ಆರೋಗ್ಯ ಇಲಾಖೆಯು ಸೋಮವಾರ ಆದೇಶ ಹೊರಡಿಸಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಕಬಾಬ್ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯ ವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷ ರೂ.ಗಳ ವರೆಗೆ ದಂಡವನ್ನು ವಿಧಿಸಲಾಗುತ್ತದೆ. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‍ನ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ […]

ಮೂಡುಬಿದಿರೆ, ಜೂ.೨೩: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಮೂಡುಬಿದಿರೆ ಘಟಕದ ವತಿಯಿಂದ ಶ್ರೀ ನಾರಾಯಣ ಗುರುಗಳ ಜೀವನ-ಸಂದೇಶ ಗೋಷ್ಠಿ: ಅರಿವು ೨೦೨೪, ಸಮ್ಮಾನ, ಯುವಸಿರಿ ಪುರಸ್ಕಾರ ಪ್ರದಾನ ಕಾರ್ಯಕ್ರಮ ಯುವವಾಹಿನಿ ಅಧ್ಯಕ್ಷ ಶಂಕರ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ರವಿವಾರ ಜರಗಿತು. ಭಾನುಮತಿ ಶೀನಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಮುಖ್ಯ ಆತಿಥಿ, ರಾಜ್ಯ ಹೈಕೋರ್ಟ್ ನಿರ್ದೇಶಿತ ಹಿರಿಯ ನ್ಯಾಯವಾದಿ ಇರುವೈಲು ತಾರಾನಾಥ ಪೂಜಾರಿ ಅವರು ಜೀವನ ಮೌಲ್ಯ, […]

ಭಾರತೀಯ ಜನತಾ ಪಾರ್ಟಿ ಯುವ ಮೊರ್ಚ ಮುಲ್ಕಿ–ಮೂಡಬಿದಿರೆ ಮಂಡಲದ ಸಭೆಯು ಮಂಡಲ ಯುವ ಮೊರ್ಚ ಕುಮಾರ್ ಪ್ರಸಾದ್ ಇವರ ಅಧ್ಯಕ್ಷ ಯಲ್ಲಿ ನಡೆಯಿತು ರಾಷ್ಟ್ರ ನಾಯಕರಾದ ಜನಸಂಘದ ಸಂಸ್ಥಾಪಕರಾದ ದಿವಂಗತ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಪುಣ್ಯ ಸ್ಮರಣೆಯ ದಿನದಂದು ಅವರಿಗೆ ಪುಪ್ಪರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು, ಈ ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್ ,ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ,ಹಾಗೂ ಹರಿಪ್ರಸಾದ್ ಶೆಟ್ಟಿ ಯುವ ಮೊರ್ಚ ಪ್ರಭಾರಿಗಳಾದ ಪ್ರಮೋದ್ ದಿಡುಪೆ ಹಾಗೂ ಸಹಾ ಪ್ರಭಾರಿ ನಿತಿನ್ […]

ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ನಡೆದ ದಕ್ಷಿಣ ಭಾರತ ವಲಯ ಮಟ್ಟದ ಚಾಂಪಿಯನ್ಶಿಪ್ -2024 ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಮ್ಮ ಮೂಲ್ಕಿ – ಮೂಡುಬಿದಿರೆ ಕ್ಷೇತ್ರದ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರುವಿನ ಖೋ-ಖೋ ತಂಡ ದ್ವಿತೀಯ ಸ್ಥಾನ ಪಡೆದು ಮಹತ್ವದ ಸಾಧನೆ ಮಾಡಿದಾರೆ ಅವರ ಈ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳು. ಕರ್ನಾಟಕವನ್ನು ಗೌರವದಿಂದ ಪ್ರತಿನಿಧಿಸಿದ ಈ ಯುವ ಕ್ರೀಡಾಪಟುಗಳು ತಮ್ಮ ಶ್ರಮ, ಸಮರ್ಪಣೆ ಮತ್ತು ಕ್ರೀಡಾ ಮನೋಭಾವದಿಂದ ಮಾತ್ರವಲ್ಲದೆ, ರಾಜ್ಯದ ಕ್ರೀಡಾ ಸಾಮರ್ಥ್ಯವನ್ನು ಮೆರೆಯುವಲ್ಲಿ ಸಫಲರಾಗಿದ್ದಾರೆ.