



ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಜ. 25ರಂದು ಕಡಲಕೆರೆ ನಿಸರ್ಗ ಧಾಮದಲ್ಲಿ ನಡೆಯುವ ಬೆದ್ರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಡುಗಡೆ ಗೊಳಿಸಿದರು.ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ಗುಣಪಾಲ ಕಡಂಬ, ದ ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ ಸುಚರಿತ ಶೆಟ್ಟಿ, ಪುರಸಭೆ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಂಜಿತ್ […]

ಮೂಡುಬಿದಿರೆ: ಮಹಿಳೆಯರು ಟೈಲರಿಂಗ್ ತರಬೇತಿಯನ್ನು ಪಡೆದು, ಸ್ವಂತ ಉದ್ಯಮವನ್ನು ಆರಂಭಿಸಿ. ಇದೀಗ ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು, ನಿಮಗೆ ನೀಡುವ ಹೊಲಿಗೆ ಯಂತ್ರದಿಂದ ನೀವುಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಒಳ್ಳೆಯ ಉದ್ಯಮ. ಹಾಗಾಗಿ ಟೈಲರಿಂಗ್‌ನಲ್ಲಿ ತರಬೇತಿಯನ್ನು ಪಡೆದು ಸ್ವ ಉದ್ಯಮ ಆರಂಭಿಸಿ ಎಂದು ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರುಅವರು ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ನಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ […]

ಮೂಡುಬಿದಿರೆ: ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ಐಕಳ ಪಂಚಾಯತ್ ವ್ಯಾಪ್ತಿಯ ದಾಮಸ್ಕಟ್ಟೆಯಿಂದ ಪಟ್ಟೆಕ್ರಾಸ್ ವರೆಗೆ ರಸ್ತೆ ಅಗಲೀಕರಣಕ್ಕೆ ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಬುಧವಾರ ಶಿಲಾನ್ಯಾಸ ನೆರವೇರಿಸಿದರು .ನಂತರ ಮಾತನಾಡಿದ ಕೋಟ್ಯಾನ್ ಅವರು ಮೂರುಕಾವೇರಿಯಿಂದ ದಾಮಸ್ಕಟ್ಟೆವರೆಗೆ ರಸ್ತೆ ಅಗಲೀಕರಣಗೊಂಡಿದ್ದು, ದಾಮಸ್ಕಟ್ಟೆಯಿಂದ ಪಟ್ಟೆ ಕ್ರಾಸ್ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿತ್ತು ಈ ಕಾರಣದಿಂದ ಈ ಹಿಂದಿನ ಸರಕಾರವಿದ್ದ ಸಂದರ್ಭ ಈ ರಸ್ತೆಗೆ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.ಗ್ರಾಮೀಣ ಭಾಗವಾದ ಈ ಪ್ರದೇಶದಲ್ಲಿ ಕಳೆದ ಸರಕಾರವಿದ್ದ […]

ಮೂಡುಬಿದಿರೆ: ತಾಲೂಕಿನ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದಲ್ಲಿ ಜನವರಿ ೨೫ರಂದು ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳ ನಡೆಯಲಿದೆ. ಈ ಬಾರಿಯ ಕಂಬಳದಲ್ಲಿ ತುಳುನಾಡಿನ ವಿವಿಧ ಕ್ಷೇತ್ರದ ಸಾಧಕರನ್ನು ರಾಜ್ಯಮಟ್ಟದ ವೀರರಾಣಿ ಅಬ್ಬಕ್ಕ ಪ್ರಶಸ್ತಿಯನ್ನು ನೀಡಿ ಗೌರವಿಸುವುದೆಂದು ತೀರ್ಮಾನಿಸಲಾಗಿದ್ದು, ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲ್ಕಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಶಾಸಕ, ಮೂಡುಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ತಿಳಿಸಿದರು.ಅವರು ಒಂಟಿಕಟ್ಟೆಯ ಸೃಷ್ಟಿ ಗಾರ್ಡನ್ ಸಭಾಭವನದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ […]

ಮೂಡುಬಿದಿರೆ : ಮೂಡುಬಿದಿರೆ ತಾಲೂಕು ಕೇಂದ್ರವಾದರೂ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲ. ದಂತ ವೈದ್ಯರೇ ಸದ್ಯಕ್ಕೆ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ.ಆದರೆ ಅವರಿಂದ ಎಲ್ಲವೂ ಸಾಧ್ಯವಿಲ್ಲ.ಬಡ ಜನರಿಗೆ ಸೇವೆ ಒದಗಿಸಬೇಕಾದ ಈ ಸರಕಾರಿ ಆಸ್ಪತ್ರೆಯಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದು ನಮಗೆ ನಾಚಿಕೆಗೇಡು, ಈ ಬಗ್ಗೆ ತಕ್ಷಣ ನಿರ್ಣಯ ಕೈಗೊಂಡು ಆರೋಗ್ಯ ಸಚಿವರು,ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ಪೂರ್ಣಕಾಲಿಕ ವೈದ್ಯರ ನೇಮಕಾತಿಗೆ ಆಗ್ರಹಿಸಬೇಕೆಂದು ಪುರಸಭಾ ಸದಸ್ಯ ಕೊರಗಪ್ಪ ಅವರು ಮಂಗಳವಾರ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಆಗ್ರಹಿಸಿದ್ದಾರೆ.ಪುರಸಭಾ […]

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭ ಗ್ದಾಮಸ್ಥರು ಓಡಾಡುವ ಸಂಪರ್ಕ ರಸ್ತೆಯನ್ನು ಮುಚ್ಚದೆ ಗ್ರಾಮೀಣ ರಸ್ತೆಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಅಲ೦ಗಾರು ಪೋಯ್ಯೆದಪಲ್ಕೆ, ಕಾನ, ಅ೦ಬೂರಿ, ಮ೦ಜನಕಟ್ಟೆ,ಬೆಳುವಾಯಿ, ಗ್ರಾಮದ ಗ್ರಾಮಸ್ಥರು ಬುಧವಾರ ಪೋಯ್ಯದಪಲ್ಕೆ ಎಂಬಲ್ಲಿ ಪ್ರತಿಭಟನೆ ನಡೆಸಿದರು.ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಇಂತಹ ಫೈ ಓವರ್‌ಗಳ ಕಾಮಗಾರಿಗಳು ಜನರಿಗೆ ತೊಂದರೆಯಾಗುತ್ತಿವೆ. ಈ ಮಾರ್ಗಕ್ಕೆ ಅಂಡರ್‌ಪಾಸ್ ಮಾರ್ಗವನ್ನಾದರೂ ನಿರ್ಮಿಸಿ ಕೊಡಬೇಕು. ಸಂಪೂರ್ಣವಾಗಿ ಈ ರಸ್ತೆ ಮುಚ್ಚಬಾರದು. ಇಂತಹ ಅನ್ಯಾಯದ ವಿರುದ್ಧ ಹೋರಾಡಲು ಮೂಡುಬಿದಿರೆಯ ಜನತೆ […]

ಮೂಡುಬಿದಿರೆ: ಕೆಲವರಿಗೆ ಏನೋ ಒಂದು ಖುಷಿ ಯಾರೋ ಮಾಡಿದ ಮಗುವಿಗೆ ನಾನೇ ಅಪ್ಪ ಎಂದು ಹೇಳಿಕೊಂಡು ತಿರುಗಾಡುವ ಚಾಳಿ. ಆದ್ದರಿಂದ ಅಂತಹ ಮನಸ್ಥಿತಿಯುಳ್ಳವರನ್ನು ನಾವೇನು ಮಾಡಲು ಸಾಧ್ಯವಿಲ್ಲ. ಇದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ಈ ಕೆಲಸ ಯಾರಿಂದ ಸಾಧ್ಯವಾಗಿದೆಯೇಂಬುದು, ಯಾರೋ ಒಬ್ಬ ತಾಲೂಕಿನಲ್ಲಿ ಕುಳಿತುಕೊಂಡು ನಾನೇ ಮಾಡಿದ್ದೇನೆಂದು ಹೇಳಿಕೊಂಡು ತಿರುಗಾಡಿದರೆ ಜನ ಅದನ್ನು ನಂಬಲು ತಯಾರಿಲ್ಲ. ಒಳ್ಳೆಯ ಕೆಲಸ ಮಾಡಿದ್ದು ನಾನು, ಕೆಟ್ಟ ಕೆಲಸ ಮಾಡಿದ್ದು ಇನ್ನೊಬ್ಬ ಎಂದು ಹೇಳುವ ಜನರು ಮೂರ್ಖರು ಎಂದು ಮೂಲ್ಕಿ ಮೂಡುಬಿದಿರೆ […]

ಮೂಡುಬಿದಿರೆ: ತಾಲೂಕಿಗೆ ಸರಕಾರಿ ಬಸ್ಸು ಬೇಕೆಂದು ಇಲ್ಲಿನ ಜನರ ಬಹುಕಾಲದ ಬೇಡಿಕೆ. ಆದರೆ ಹಲವಾರು ವರುಷಗಳಿಂದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಭಾರತೀಯ ರೈತ ಸೇನೆಯು ಹಲವಾರು ಬಾರಿ ಮನವಿಯನ್ನು ಸಂಬAಧಪಟ್ಟ ಇಲಾಖೆಗೆ ನೀಡಿದರೂ ಸ್ಪಂದಿಸದೇ ಇದ್ದಾಗ ಕಾನೂನಾತ್ಮಕ ಹೋರಾಟವನ್ನು 04/03/2023 ರಂದು ಕರ್ನಾಟಕ ಲೋಕಾಯುಕ್ತ ನ್ಯಾಯಲಕ್ಕೆ ದೂರು ಅರ್ಜಿ ಸಲ್ಲಿಸಲಾಯಿತು. ಸದ್ರಿ ದೂರು ಅರ್ಜಿಯು ನ್ಯಾಯಾಲಯದ ಪ್ರಕರಣ ಸಂಖ್ಯೆ: LOK/MYS/10393/2023 ರಂತೆ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿರುವಾಗಲೇ […]

ಮೂಡುಬಿದಿರೆ : ೨೦೨೩-೨೪ ಹಾಗೂ ೨೪-೨೫ ನೇ ಸಾಲಿನ ೧೫ನೇ ಹಣಕಾಸು ಯೋಜನೆಯ ಅನುದಾನ, ನಗರೋತ್ಥಾನ ಹಂತ-೪ ಎಸ್.ಎಫ್ .ಸಿ ಮುಕ್ತ ನಿಧಿ ಅನುದಾನ ಹಾಗೂ ಪುರಸಭಾ ನಿಧಿಯ ಅನುದಾನದಡಿ ಸಹಿತ ಒಟ್ಟು ರೂ ೫.೧೨ ಕೋ.ವೆಚ್ಚದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಶನಿವಾರ ಪುರಸಭೆಯಲ್ಲಿ ಶಿಲಾನ್ಯಾಸಗೈದರು.ಶಿಲಾನ್ಯಾಸಗೈದು ಮಾತನಾಡಿದ ಕೋಟ್ಯಾನ್ ಅವರು ಪುರಸಭೆಯ ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಒಂದು ಕೋ.ವೆಚ್ಚದಲ್ಲಿ ಮೂಡುಬಿದಿರೆಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ. ಜ್ಯೋತಿನಗರದ ಬಳಿ ಎಂ.ಆರ್.ಘಟಕವನ್ನು […]

ಮೂಲ್ಕಿ: ಇಲ್ಲಿನ ಪೂಂಜಾ ಚಾರಿಟೇಬಲ್ ಟ್ರಸ್ಟ್ ಅವರ ವತಿಯಿಂದ ಅಶಕ್ತರಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ನೀಡಲಾಗುವ 7 ಲಕ್ಷ ರೂಪಾಯಿ ವೆಚ್ಚದ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರುಪಾಲ್ಗೊಂಡರು.ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷರಾದ ಸತೀಶ್ ಅಂಚನ್, ಟ್ರಸ್ಟ್ ನ ಮುಖ್ಯಸ್ಥರಾದ ಅರವಿಂದ ಪೂಂಜಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುನೀಲ್ ಆಳ್ವ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.