
ಮೂಡುಬಿದಿರೆ: ತಾಲೂಕಿನ ದ.ಕ.ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈನ್ ಮೂಡುಬಿದಿರೆ ಇಲ್ಲಿ ವಿವೇಕ ಶಾಲಾ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವ ಎರಡು ವಿವೇಕ ಕೊಠಡಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ ಕೀಳರಿಮೆ ಬೇಡ. ಕನ್ನಡ ಮಾಧ್ಯಮದಲ್ಲಿ ಕಲಿತ ಹೆಚ್ಚಿನವರು ಉತ್ತಮ ಹುದ್ದೆಗಳನ್ನು ಅಲಂಕರಿಸಿ ಯಶಸ್ಸನ್ನು ಕಂಡವರಿದ್ದಾರೆ ಎಂದು ಹೇಳಿದರು.ವಿವೇಕ ಶಾಲಾ ಯೋಜನೆಯಡಿ ತಾಲೂಕಿನ ಕೆಲವು ಶಾಲೆಗಳಿಗೆ ಈಗಾಗಲೇ ಹೆಚ್ಚುವರಿ ಕೊಠಡಿಗಳನ್ನು ನೀಡಲಾಗಿದೆ. ಇನ್ನೂ ಹೆಚ್ಚಿನ ಕೊಠಡಿಗಳ ಅಗತ್ಯವಿದ್ದು […]
ಮೂಡುಬಿದಿರೆ: ಹಿರಿಯ ಛಾಯಾಗ್ರಾಹಕ, ಹವ್ಯಾಸಿ ಗಾಯಕ ಅಶ್ರಫ್ ಆಲಿ (62) ರವಿವಾರ ನಿಧನ ಹೊಂದಿದರು.ಪತ್ನಿ, 2 ಪುತ್ರರು, 2 ಪುತ್ರಿಯರನ್ನು ಅಗಲಿದ್ದಾರೆ.ಮೂಡುಬಿದಿರೆಯಲ್ಲಿ ಗೆಳೆಯರ ಬಳಗ, ಚದುರಂಗ ಸಾಂಸ್ಕೃತಿಕ ಸಂಘಟನೆಗಳಲ್ಲಿ ನಟ, ಗಾಯಕರಾಗಿ ಸಕ್ರಿಯರಾಗಿದ್ದ ಅಶ್ರಫ್ ಆಲಿ ಛಾಯಾಗ್ರಾಹಕರಾಗಿ, Adla network ಕೇಬಲ್ TV ಯಲ್ಲಿ ವೀಡಿಯೋ ಗ್ರಾಫರ್ ಆಗಿ ವೃತ್ತಿ ಜೀವನ ಆರಂಭಿಸಿ, ಕೆಲಕಾಲ ವಿದೇಶದಲ್ಲೂ ಕೆಲಸ ಮಾಡಿ ಮರಳಿ ಊರಲ್ಲೇ ಛಾಯಾಗ್ರಾಹಕ, ವೀಡಿಯೊ ಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯ 169 ರಲ್ಲಿ ಹಾದು ಹೋಗುವ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜ್ ಪಕ್ಕದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯ ಪರಿಣಾಮವಾಗಿ ಬೈಕ್ ಸವಾರನೊಬ್ಬ ನಿನ್ನೆ ರಾತ್ರಿ ಬಲಿಯಾದ ಘಟನೆ ನಡೆದಿದೆ.ಗಂಜಿಮಠದ ನಿವಾಸಿ ಅಬ್ದುಲ್ ಖಾದರ್ (69) ಮೃತಪಟ್ಟ ವ್ಯಕ್ತಿ.ಮಿಜಾರಿನಲ್ಲಿ ರಾ. ಹೆ. ಕಾಮಗಾರಿಯು ಅಪೂಣ೯ ಸ್ಥಿತಿಯಲ್ಲಿದ್ದು ಅಲ್ಲಿ ಮೋರಿಯ ದೊಡ್ಡ ಚರಂಡಿಗೆ ಅಡ್ಡವಾಗಿ ಹೊಂಡ ತೋಡಿ ಅದಕ್ಕೆ ಕಾಂಕ್ರೀಟ್ ಬೆಡ್ಡಿಂಗ್ ಹಾಕಲಾಗಿದ್ದು ಅಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸಲಿಲ್ಲ. ಅಲ್ಲಿ ಹೊಂಡ ಇರುವುದು ರಾತ್ರಿ ಯಾರ […]
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ವ್ಯಾಪ್ತಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಉಪ ವಲಯ ಅರಣ್ಯಾಧಿಕಾರಿ ಬಸಪ್ಪ ಹಲಗೇರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಹೆರಾಲ್ಡ್ ಡಿಸಿಲ್ವ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿನ್ ಡಿಸೋಜಾ, ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ತದನಂತರ ಶಾಲೆಯಿಂದ ಶಿರ್ತಾಡಿ ಪಟ್ಟಣದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳಿಂದ ನಡೆದ ಅಣಕು ಆಡುಗಬ್ಬ […]
ಮೂಡುಬಿದಿರೆ:ತಾಲೂಕಿನ ನ್ಯಾಯಾಲಯ ಆವರಣದಲ್ಲಿ ಮೂಡುಬಿದಿರೆ ಅರಣ್ಯ ಇಲಾಖೆ ಹಾಗು ಮೂಡುಬಿದಿರೆ ವಕೀಲರ ಸಂಘ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ & ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಮಧುಕರ್ ಭಾಗವತ್,ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಧೀಶರು, ಕಾವೇರಮ್ಮ ನ್ಯಾಯಾಧೀಶರು, ಸಸಿಗಳನ್ನು ನೆಟ್ಟರು.ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು ಹರೀಶ್ ಪಿ, ಹಿರಿಯ ವಕೀಲರಾದ ಕೆ. ಆರ್ ಪಂಡಿತ್, ದಿವಿಜೇಂದ್ರ ಕುಮಾರ್, ಪ್ರವೀಣ್ ಲೋಬೊ, ಜಯಪ್ರಕಾಶ್, ಪದ್ಮಪ್ರಸಾದ್ ಜೈನ್, ಮರ್ವಿನ್ ಲೋಬೊ, ಆನಂದ್, ಶ್ವೇತಾ, ಸಂದೇಶ್, ಜಗನ್ನಾತ್, ವಕೀಲರು ಹಾಗು ಅರಣ್ಯ […]
ಮೂಡುಬಿದಿರೆ: ತಾಲೂಕಿನಾದ್ಯಾಂತ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಬಡಜನರಿಗೆ ಇನ್ಮುಂದೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟವುಳ್ಳ ಊಟ, ತಿಂಡಿ ದೊರೆಯಲಿದೆ. ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ದಿನಂಪ್ರತಿ ವಿವಿಧ ಬಗೆಯ ತಿಂಡಿಗಳಿಗೆ ಕೇವಲ ೫ ರೂ ಮೊತ್ತದಲ್ಲಿ ಹಾಗೂ ಊಟವೂ ೧೦ ರೂ ದರದಲ್ಲಿ ಸಿಗಲಿದೆ. ಯಾವ್ಯಾವ ದಿನ ಯಾವೆಲ್ಲಾ ಬಗೆಯ ಊಟ ತಿಂಡಿಗಳು ಸಿಗುತ್ತದೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಮೂಡುಬಿದಿರೆ: ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ. 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ವಿದ್ಯುತ್ ಶಾರ್ಟ್ ಸರ್ಕೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.
ಮೂಡುಬಿದಿರೆ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೊಹಮ್ಮದ್ ವಸೀರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತೇನೆಂದು ಘೋಷಿಸಿದ್ದಾರೆ.
ಮೂಡುಬಿದಿರೆ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೊಹಮ್ಮದ್ ವಸೀರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತೇನೆಂದು ಘೋಷಿಸಿದ್ದಾರೆ.
ಮೂಡುಬಿದಿರೆ: ಕಳೆದ ಒಂದು ವಾರದಿಂದ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವಲ್ಲಿ ಮಣ್ಣು ಕರಗಿ ತಗ್ಗು ಪ್ರದೇಶದತ್ತ ಹರಿದು ದಿನ ನಿತ್ಯ ಓಡಾಡುವ ರಸ್ತೆಗಳೆಲ್ಲಾ ಕೆಸರುಗದ್ದೆಗಳಾಗಿ ಬಿಟ್ಟಿವೆ. ಜನ, ವಾಹನಗಳ ಓಡಾಟಕ್ಕೆ ತೊಂದರೆಯುಂಟಾಗಿದೆ.ಅಲಂಗಾರು ಪರಿಸರದಲ್ಲಿ ವಿಶೇಷವಾಗಿ ಕಾನ, ಪೊಯ್ಯದದಲ್ಯ ಅಂಬೂರಿ ಮೊದಲಾದ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿ ಮಳೆಗಾಲದ ಆರಂಭಕ್ಕೂ ಮುನ್ನ ಮಳೆಗಾಲದ ಸಂಭಾವ್ಯ ಆಪಾಯ, ತೊಂದರೆಗಳ ಬಗ್ಗೆ ಗುತ್ತಿಗೆದಾರರು ಮುನ್ನೆಚ್ಚರಿಕೆ ತೆಗೆದುಕೊಳ್ಳದ ಕಾರಣ ಸಮಸ್ಯೆ ಬಿಗಡಾಯಿಸಿದೆ.ಹೆದ್ದಾರಿ ನಿರ್ಮಾಣವಾಗುವ ಹಂತದಲ್ಲಿ ಈ ಭಾಗದ […]