
ಮೂಡುಬಿದಿರೆ: ಜೀವಶಾಸ್ತçದ ಶಿಕ್ಷಕರು ಈ ಕಾಲಕ್ಕಾನುಗುಣವಾದ ಕೌಶಲ್ಯಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಯನ್ನು ಪೂರೈಸುವಲ್ಲಿ ಕರ‍್ಯಪ್ರವೃತ್ತರಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು.ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘದ ದಶಮನೋತ್ಸವದ ಹಿನ್ನಲೆಯಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘ ಹಾಗೂ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚರ‍್ಯರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ‘’ಬಯೋದಶಕ, ಒಂದು ದಿನದ ಕರ‍್ಯಾಗಾರ’’ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು […]
ಮೂಡುಬಿದಿರೆ: ಬಹುಮುಖಿ ವ್ಯಕ್ತಿತ್ವವನ್ನು ಹೊಂದಿದ್ದ ಮನೋಹರ ಪ್ರಸಾದ್ ಅವರು ಅವರು ಪತ್ರಕರ್ತರಿಗಿಂತ ಹೆಚ್ಚಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಂತೆ ಜನಮಾನಸದಲ್ಲಿ ಬೆರೆತು ಹೋಗಿ ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್” ಆಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ಕಾಲೇಜಿನ ಆಳ್ವಾಸ್ […]
ಮೂಡುಬಿದಿರೆ: ಸಮಾಜದ ಭಾಗವಾಗಿ ಬದುಕುವ ನಾವು ಸಮಾಜಕ್ಕೆ ಕೊಡುಗೆ ನೀಡುವುದು ನಮ್ಮ ಕರ್ತವ್ಯವಾಗಿದೆ. ಮನುಷ್ಯನ ಮೂಲ ನಡವಳಿಕೆ ಬ೦ಡವಾಳಶಾಹಿ ಎ೦ದು ಹೇಳಲಾಗುತ್ತದೆ. ಆದರೆ ಕೇವಲ ಬ೦ಡವಾಳಶಾಹಿತನದಿ೦ದ ಸಮಾಜ ಉದ್ಧಾರ ಆಗುವುದಿಲ್ಲ ಎನ್ನುವುದನ್ನು ಪರಿಗಣಿಸಿ ಹತ್ತೊ೦ಭತ್ತನೇ ಶತಮಾನದಲ್ಲಿ ಕಲ್ಯಾಣ ರಾಜ್ಯದ ಪರಿಕಲ್ಪನೆ ಬ೦ತು. ಯಾವುದೇ ನಿರೀಕ್ಷೆ ಇಲ್ಲದೆ ಮಾಡುವ ಕೆಲಸವೇ ಸೇವೆ. ಸೇವೆ ಮಾಡುವುದರಿ೦ದ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎ೦ದು ವಿಶ್ರಾ೦ತ ಪ್ರಾ೦ಶುಪಾಲ ಡಾ ಪಾದೂರು ಸುದರ್ಶನ ಕುಮಾರ್ ಹೇಳಿದರು.ಅವರು ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ […]
ಮೂಡಬಿದ್ರೆ: ಆಗಸ್ಟ್ 06ಸಮಸ್ತ ವಿದ್ಯಾಭ್ಯಾಸ ಮಂಡಳಿಯಾದ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ ಇದರ ಸಿಲಬಸ್ ಪ್ರಕಾರ ಕಾರ್ಯಾಚರಿಸುವ ಎಲ್ಲಾ ಮದ್ರಸಗಳಲ್ಲಿ ನಾಳೆಯಿಂದ ತ್ರೈಮಾಸಿಕ ಪರೀಕ್ಷೆಯು ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಮೂಡುಬಿದ್ರೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಒಳಪಟ್ಟ ಎಲ್ಲಾ ಮದ್ರಸಗಳ ಪರೀಕ್ಷೆ ಪೇಪರ್ ವಿತರಣೆ ಹಿದಾಯತುಲ್ ಇಸ್ಲಾಂ ಮದ್ರಸ ಲಾಡಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಸಯ್ಯಿದ್ ಅಕ್ರಂ ಅಲಿ ತಂಙಳ್ ಅಂಗರಕರ್ಯ ಶರೀಫ್ ಅಝ್ಹರಿ ಇವರಿಗೆ ಪರೀಕ್ಷೆ ಪೇಪರ್ ವಿತರಿಸುವ ಮೂಲಕ […]
ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ. ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ ಅಹಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಂಜೆವೇಳೆ ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ, ಕೂಲಿ ಕೆಲಸ ಮಾಡಿಕೊಂಡಿದ್ದ ಅಹಮದ್ ಬಾವ […]
ಮೂಡುಬಿದಿರೆ: ಸೋಮವಾರ ಮಧ್ಯಾಹ್ನ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಒಂದು ಬಲು ವಿಚಿತ್ರ ಘಟನೆ ನಡೆದಿದ್ದು, ಪರಿಚಿತನಂತೆ ನಟಿಸಿದ ವ್ಯಕ್ತಿಯೊಬ್ಬ ಮಹಿಳೆಯ ಮೂರೂವರೆ ಪವನಿನ ಚಿನ್ನದ ಸರವನ್ನು ದೋಚಿದ ಘಟನೆ ನಡೆದಿದೆ. ಮಧ್ಯ ವಯಸ್ಸಿನ ಮಹಿಳೆ ನಾರಾವಿಯಿಂದ ಬಸ್‌ನಲ್ಲಿ ಬಂದು, ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ಬಸ್ ನಿಲ್ದಾಣದಲ್ಲಿ ಇಳಿದು ಬರುತ್ತಿದ್ದಾಗ, ಒಬ್ಬ ವ್ಯಕ್ತಿ ಆಕೆಯ ಬಳಿ ಬಂದು “ಚಿಕ್ಕಮ್ಮ” ಎಂದು ಕರೆದು ತನ್ನನ್ನು ಪರಿಚಯಿಸಿಕೊಂಡ. ಮಹಿಳೆ ಅವರನ್ನು ಪರಿಚಿತನಲ್ಲವೆಂದು ತೋರಿ, ಆಕೆಯ ಮನೆಯವರ ಪರಿಚಯವನ್ನೆಲ್ಲಾ ವಿವರಿಸಿದ. […]
ಪಾಲಡ್ಕ: ಇತ್ತೀಚೆಗೆ ಉಂಟಾದ ಭಾರೀ ಮಳೆಯಿಂದಾಗಿ ಪಾಲಡ್ಕ – ಕಲ್ಲಮುಂಡ್ಕೂರು ಸಂಪರ್ಕ ರಸ್ತೆ ಗುಂಡ್ಯಡ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಪರಿಣಾಮವಾಗಿ ಬೃಹತ್ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳ ಪರಿಶೀಲನೆಯ ವೇಳೆ, ಶಾಸಕರು ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಕೇಳಿ, ಅಪಾಯದ ತಕ್ಷಣ ನಿರ್ವಹಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅವರು ಪರಿಸ್ಥಿತಿಯನ್ನು ಸಮೀಪದಿಂದ […]
ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಇದರ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಜೀವಸಾರ್ಥಕತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಇವುಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ, ಚಿತ್ರಕಲಾ ಸ್ಪರ್ಧೆ, ಅಂಗಾಂಗ ದಾನ ಮಾಹಿತಿ ಮತ್ತು ನೋಂದಾವಣೆ, ಸಹಾಯಧನ ವಿತರಣೆ, ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮವು ಆ.18ರಂದು ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ನೇತಾಜಿ ಬ್ರಿಗೇಡ್ ನ ಸ್ಥಾಪಕಾಧ್ಯಕ್ಷ ರಾಹುಲ್ ಕುಲಾಲ್ ತಿಳಿಸಿದ್ದಾರೆ. ಅವರು ಸೋಮವಾರ ಪ್ರೆಸ್ […]
ಮೂಡುಬಿದಿರೆ: ದರಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಪಿಲ ಮತ್ತು ಬೋರುಗುಡ್ಡೆ ಪ್ರದೇಶಗಳನ್ನು ಸಂಪರ್ಕಿಸುವ ಬಿರ್ಮೆರಬೈಲು ಸೇತುವೆ ಭಾರೀ ಮಳೆಯಿಂದಾಗಿ ಕೊಚ್ಚಿ ಹೋಗಿತ್ತು, ಇದರಿಂದಾಗಿ ಗ್ರಾಮಸ್ಥರಿಗೆ ಪ್ರಯಾಣದಲ್ಲಿ ತೊಂದರೆ ಉಂಟಾಗಿತ್ತು. ಈ ಸಮಸ್ಯೆಯನ್ನು ಪರಿಹರಿಸಲು, ಭಾನುವಾರ ಗ್ರಾಮಸ್ಥರು ತಾತ್ಕಾಲಿಕ ಸೇತುವೆ ನಿರ್ಮಿಸಿ ಗಮನ ಸೆಳೆದಿದ್ದಾರೆ. ಬಿರ್ಮೆರಬೈಲು ಸೇತುವೆ ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಅಡಿಕೆ ಮರಗಳನ್ನು ಬಳಸಿ, ಪಾದಚಾರಿಗಳಿಗೆ ಅನುಕೂಲವಾಗುವಂತೆ ತಾತ್ಕಾಲಿಕ ಕಿರು ಸೇತುವೆ ನಿರ್ಮಿಸಿದ್ದಾರೆ. ಈ ಕಾರ್ಯದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಮುನಿರಾಜ್ ಹೆಗ್ಡೆ, ದೀಕ್ಷಿತ್ ಪಣಪಿಲ, […]
ಮೂಡುಬಿದಿರೆ:ಭಾರೀ ಮಳೆಯಿಂದಾಗಿ ಗುಂಡ್ಯಡ್ಕದಲ್ಲಿ ಶನಿವಾರ ನಸುಕಿನ ಜಾವ ಗುಡ್ಡ ಕುಸಿದು ಪಾಲಡ್ಕ-ಕಲ್ಲಮುಂಡ್ಕೂರು ಸಂಪರ್ಕ ರಸ್ತೆ ಬಂದ್ ಆಗಿದೆ.ಸುದ್ದಿ ತಿಳಿದು ಪಾಲಡ್ಕ ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್ ಸಿಕ್ಷೇರಾ ಅವರು ಜೆಸಿಬಿ ತರಿಸಿ ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಸಂದರ್ಭ ಮತ್ತೆ ಗುಡ್ಡ ಜರಿದಿದೆ. ಗುಡ್ಡದಿಂದ ಮಣ್ಣು ಹಾಗೂ ಬಂಡೆಕಲ್ಲು ಸಮೇತ ಜಾರಿಬಿದ್ದರೂ ಬಂಡೆಕಲ್ಲು ಗುಡ್ಡದ ಅರ್ಧದಲ್ಲಿ ನಿಂತಿದ್ದರೆ ಮಣ್ಣು ಜೆಸಿಬಿ ಮೇಲೆ ಬಿದ್ದು ಜೆಸಿಬಿಯನ್ನು ಒಂದಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿತ್ತು. ಜೆಸಿಬಿ ಚಾಲಕ ಹಾಗೂ ಸಹಾಯಕ ಅಪಾಯದಿಂದ ಪಾರಾಗಿದ್ದಾರೆ. […]