
ನಿಧನ: ಗಿರಿಯ ಬೋವಿ ಮೂಡುಬಿದಿರೆ: ಇಲ್ಲಿನ ಬೋವಿ ಸಮಾಜದ ಹಿರಿಯರಾಗಿದ್ದ ಗಿರಿಯ ಬೋವಿ( 88ವ) ಅಲ್ಪ ಕಾಲದ ಅಸೌಖ್ಯದಿಂದ ಜು 21 ರಂದು ಬೋವಿ ಕೇರಿಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಹಲವು ದಶಕಗಳಿಂದ ಪುರಾತನ ಆದಿಶಕ್ತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಅವರು ಪುರಾತನ ದೇವಾಲಯದ ಜೀರ್ಣೋದ್ದಾರ ಸಹಿತ ಬೋವಿಕೇರಿಯಲ್ಲಿನ ಸಮಾಜದ ನಾಗಾಲಯದ ಅಭಿವೃದ್ಧಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಧಾರ್ಮಿಕ, ಪರೋಪಕಾರ ಮನೋಭಾವದ ಅವರು ಬೋವಿ ಸಮಾಜದ ಪರಂಪರೆಯ ಹಿರಿಯ ಕೊಂಡಿಯಂತಿದ್ದರು. ಅಲ್ಪಕಾಲ ಮುಂಬೈನಲ್ಲೂ […]
ಕೇಂದ್ರ ಬಜೆಟ್ 2024 ಮುಖ್ಯಾಂಶಗಳು ಈ ಬಜೆಟ್ ಘೋಷಣೆಗಳು ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಸಮೃದ್ಧಿಗೆ ಪ್ರಮುಖ ಹಂತವಾಗಿವೆ.
ಮೂಡುಬಿದಿರೆ: ಮುಂದುವರಿದ ಬಿರುಗಾಳಿ ಅಬ್ಬರ೬ ಮನೆಗಳಿಗೆ ಹಾನಿ, ಧರಾಶಾಯಿಯಾದ ವಿದ್ಯುತ್ ಕಂಬಗಳು, ಅಟೋಸ್ಟಾಂಡ್ ಗೆ ಹಾನಿ ಮೂಡುಬಿದಿರೆ , ಜು.22: ಸೋಮವಾರವೂ ಮೂಡುಬಿದಿರೆ ಪರಿಸರದಲ್ಲಿ ಬಿರುಗಾಳಿ ಸಹಿತ ಆಗಾಗ ಜೋರಾಗಿ ಮಳೆ ಸುರಿದು ವ್ಯಾಪಕ ಹಾನಿಯುಂಟಾಗಿದೆ. ಅಲಂಗಾರು, ಚಂದ್ರಾಪುರ, ಪಳಕಳ, ಆಶ್ರಯ ಕಾಲೋನಿ ಪರಿಸರದಲ್ಲಿ ಸೋಮವಾರ ಸಂಜೆ ಗಾಳಿಮಳೆಗೆ ೬ಮನೆಗಳು ಹಾನಿಗೀಡಾಗಿವೆ. ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತ ವಾಗಿದೆ ಅಲಂಗಾರ್ ಚರ್ಚ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಮುರಿದು […]
ಮೂಡುಬಿದಿರೆ: ಮಹಿಳೆಯರಲ್ಲಿ ವಿಶೇಷವಾಗಿ ಕೊರತೆಯಾಗುವ ಕ್ಯಾಲ್ಸಿಯಂ ಪ್ರಮಾಣದ ಸರಿದೂಗಿಸುವಿಕೆಗೆ ಪೂರಕವಾದ ಆಹಾರ ಪದಾರ್ಥಗಳು ಅವಶ್ಯಕ. ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಿದರೆ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎಂದು ಮಿಜಾರ್ ಪ್ರೌಢ ಶಾಲೆಯ ಶಿಕ್ಷಕಿ ಅನಿತಾ ಶೆಟ್ಟಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಕೋಡಂಗಲ್ಲುವಿನ ಮೈತ್ರಿ ಜ್ಞಾನ ವಿಕಾಸ ಕೇಂದ್ರದಲ್ಲಿ ನಡೆದ ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ […]
ವಿದ್ಯಾರ್ಥಿಗಳು ಸದಾ ಮಾತೃಭೂಮಿಯನ್ನು ಗೌರವಿಸಬೇಕು.ಪ್ರಜಾಪ್ರಭುತ್ವ ಹಾಗೂ ರಾಜಕೀಯದ ಅರಿವು ನಿಮಗಿರಬೇಕು.ಚುನಾವಣೆ ಮತ್ತು ಅದರ ನಿಯಮಗಳನ್ನುತಿಳಿಯುವುದರೊಂದಿಗೆ ಮತದಾನದ ಮಹತ್ವವನ್ನುಪ್ರತಿಯೊಬ್ಬ ಪ್ರಜೆಯು ಅರಿಯುವಂತಾಗಬೇಕು.ಎAದಿಗೂಮತವನ್ನು ಹಣಕ್ಕಾಗಿ ಮಾರಿಕೊಳ್ಳಬಾರದು ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಸರ್ವರೂ ಸಮಾನರು ಎಲ್ಲರಿಗೂ ತಮಗಿಷ್ಟವಾದಅಭ್ಯರ್ಥಿಗೆ ಮತ ನೀಡುವ ಹಕ್ಕಿದೆ. ಅದನ್ನು ಪ್ರತಿಯೊಬ್ಬರುಸರಿಯಾಗಿ ಬಳಸಿಕೊಳ್ಳಬೇಕು. ನಮ್ಮನ್ನು ಆಳುವ ನಾಯಕರುನಮ್ಮ ಸಮಸ್ಯೆಗಳಿಗೆ ಅಗತ್ಯತೆಗಳಿಗೆ ಸ್ಪಂದಿಸುವAತಿರಬೇಕು.ಇಲ್ಲವಾದರೇ ಪ್ರಶ್ನಿಸುವ ಅಧಿಕಾರ ನಮಗಿದೆ ಅದನ್ನು ನಾವುಮಾಡಬೇಕು.. ನಾಯಕರನ್ನ ಆಯ್ಕೆ ಮಾಡಿದ ನಂತರ ಸುಮ್ಮನೆಕುಳಿತುಕೊಳ್ಳಬೇಡಿ. ನಾಯಕನಾದವನು ನಿಯಮಗಳನ್ನುಮಾನವೀಯ ಮೌಲ್ಯಗಳನ್ನು ಗೌರವಿಸುವಂತವನಾಗಬೇಕು.ಅವರು ಮಾಡುವ ತಪ್ಪುಗಳನ್ನು ನೇರವಾಗಿ ಅವರಿಗೆತಿಳಿಸುವುದು ಪ್ರಜೆಗಳಾದ ನಿಮ್ಮ ಕರ್ತವ್ಯವಾಗಿದೆ. […]
ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ದೇಗುಲದ ಪ್ರಾಂಗಣದಲ್ಲಿ ನಡೆಯಲಿದೆ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಈ ಸಂದೇಶವನ್ನು ನಿಮ್ಮ ಇಷ್ಟ ಪಾತ್ರರಿಗೆ ಕಳುಹಿಸಿ, ಫ್ಯಾಮಿಲಿ ಗ್ರೂಪ್ ಗಳಲ್ಲಿ ಶೇರ್ ಮಾಡಿ
ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದಲ್ಲಿದ್ದು ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್ ವಿಎಸ್ ದೇವಳ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ್ ಆಳ್ವ ಬಿಡುಗಡೆಗೊಳಿಸಿದರು. ಬಳಿಕ ಮಾತಾಡಿದ ಅವರು, “ನಮ್ಮ ಸಂಸ್ಥೆಯ ವಿದ್ಯಾರ್ಥಿ ಆಗಿದ್ದಾಗಲೇ ಸಾಹಿತ್ಯ ಅಭಿರುಚಿ ಬೆಳೆಸಿಕೊಂಡಿದ್ದ ಮಾಲತಿ ಶೆಟ್ಟಿ ಅವರು ಜಾಗತೀಕರಣದ ಈ ವೇಳೆಯಲ್ಲೂ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯ. ಶಾಲೆ ಕಾಲೇಜುಗಳಲ್ಲಿ ಕನ್ನಡ […]
ಮೂಡುಬಿದಿರೆ: ನಿನ್ನೆ ಬೀಸಿದ ಗಾಳಿ ಮಳೆಗೆ ಮಾಸ್ತಿಕಟ್ಟೆ ಪ್ರದೇಶದಲ್ಲಿ ರಸ್ತೆಗೆ ಅಡ್ಡವಾಗಿ ಮರವೊಂದು ಬಿದ್ದಿದ್ದು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ನಿನ್ನೆ ಮೂಡುಬಿದಿರೆಯ ಮಾಸ್ತಿಕಟ್ಟೆ ಪ್ರದೇಶದಲ್ಲಿ ತೀವ್ರ ಗಾಳಿ ಮಳೆಯಿಂದಾಗಿ ದೊಡ್ಡ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯುಂಟಾಯಿತು. ಸ್ಥಳೀಯರು ಈ ವಿಷಯವನ್ನು ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಅವರಿಗೆ ತಿಳಿಸಿದ್ದು, ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಬಂದರು. ಪ್ರಸಾದ್ ಕುಮಾರ್ ಅವರು ಸ್ಥಳೀಯರ ಸಹಕಾರದೊಂದಿಗೆ, ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಇದರಿಂದಾಗಿ ವಾಹನ ಸಂಚಾರ […]
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಪಡು ಕೊಣಾಜೆಯ ಬಾಂದವ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ ಹಾಗೂ ಮಾಹಿತಿ ಕಾರ್ಯಕ್ರಮವು ಭಾನುವಾರ ನಡೆಯಿತು.ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಸುನೀತಾ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು.ಆರೋಗ್ಯ ಸಹಾಯಕಿ ಚಂದ್ರಿಕಾ ಅವರು ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿ ಪೌಷ್ಟಿಕ ಆಹಾರ ಎಂದರೇನು […]
ಮೂಡುಬಿದಿರೆ : ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಭಾನುವಾರ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ಹಲವಾರು ಮನೆಗಳಿಗೆ ಹಾನಿಯಾಗಿದೆ. ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಪುತ್ತಿಗೆಮನೆಯ ಧನಂಜಯ ಮೂಡುಬಿದಿರೆಯವರ ಮನೆಗೆ ಮರ ಉರುಳಿ ಬಿದ್ದಿದ್ದು ಅಪಾರ ಹಾನಿಯಾಗಿದೆ. ಇದೇ ಪರಿಸರದಲ್ಲಿರುವ ಪ್ರಶಾಂತ್, ತೇಜಸ್, ಮಹೇಶ್ ಎಂಬವರ ಮನೆಗೂ ತೀವ್ರ ಹಾನಿಯಾಗಿದೆ. ಈ ಪರಿಸರದಲ್ಲಿ ಹಲವು ವಿದ್ಯುತ್ ಕಂಬಗಳು ಉರುಳಿ […]