
ಮೂಡುಬಿದಿರೆ : ಆಳ್ವಾಸ್ ಪಿಯು ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ರ‍್ಯಾಂಕ್‌ಗಳಲ್ಲಿ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಬಿಂದು ನವಲೆ, ರಾಜ ಯದು ವಂಶಿ ಯಾದವ್ ಹಾಗೂ ವಿಜೇತ್ ಜಿ ಗೌಡ 598 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ […]
ಮೂಡುಬಿದಿರೆ: ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಇಟಲ ದರೆಗುಡ್ಡೆ ಇದರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂತ೯ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾಯ೯ಕ್ರಮವು ಸೋಮವಾರ ನಡೆಯಿತು.ಉದ್ಯಮಿ ರಮಾನಂದ ಸಾಲ್ಯಾನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕೆ. ನರಸಿಂಹ ತಂತ್ರಿ ಹಾಗೂ ರಾಘವೇಂದ್ರ ತಂತ್ರಿ ಮತ್ತು ಅಸ್ರಣ್ಣರಾದ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿತು. ಕಾತಿ೯ಕ್ ಶಿತಾ೯ಡಿ ಅವರು ಕ್ಷೇತ್ರದ ಬಗ್ಗೆ ರಚಿಸಿರುವ ಹಾಡಿನ ಪೋಸ್ಟರ್ ನ್ನು ಇದೇ ಸಂದಭ೯ದಲ್ಲಿ […]
ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಶೇ 25 ಅನುದಾನದಲ್ಲಿ ಸುಮಾರು 25 ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ನ್ನು ವಿತರಿಸಲಾಯಿತು.ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ರಾಜು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೂಡಬಿದಿರೆ: ತಾಲೂಕಿನ ಹಿಂದು ಮುಖಂಡನ ಮನೆಯಿಂದಲೇ ದನ ಕಳ್ಳತನ ವಾರದೊಳಗೆ ಆರೋಪಿಗಳನ್ನ ಬಂಧಿಸದಿದ್ದರೆ ಹಿಂಜಾವೇ ಯಿಂದ ಪ್ರತಿಭಟನೆ ನಡೆಸುವುದಾಗಿ ಹಿಂ.ಜಾ. ವೇದಿಕೆಯ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ ಎಚ್ಚರಿಸಿದ್ದಾರೆಮೂಡಬಿದಿರೆಯ ಬೆಳುವಾಯಿ ಹಿಂದು ಮುಖಂಡರಾದ ಸೋಮನಾಥ್ ಕೋಟ್ಯಾನ್ ರವರ ಮನೆಯ ಹಟ್ಟಿಯಿಂದಲೇ ದನ ಕಳ್ಳತನ ಮಾಡಿದ ಪ್ರಕರಣ ನಡೆದಿದ್ದು ಇದೊಂದು ಗಂಭೀರ ಪ್ರಕರಣವಾಗಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕು ತೀವ್ರವಾಗಿ ಖಂಡಿಸುತ್ತದೆ ಕಳೆದ ಕೆಲವು ತಿಂಗಳುಗಳಿಂದ ದನ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದು ಈ […]
ಮೂಡುಬಿದಿರೆ: ದರೆಗುಡ್ಡೆ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಲೋಗೊವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ತಿಮ್ಮಯ್ಯ ಶೆಟ್ಟಿ ಮತ್ತು ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ ಬುಧವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಸುಕೇಶ್ ಶೆಟ್ಟಿ ಎದಮೇರು ಮಾತನಾಡಿ, ಇಟಲ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಪಣಪಿಲ ಅರಮನೆಯ ಪಟ್ಟದ ದೇವರಾಗಿದ್ದು 9 ಮಾಗಣೆಗಳ ಗ್ರಾಮವನ್ನು ಹೊಂದಿರುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಊರವರ ಸಹಕಾರದೊಂದಿಗೆ ದೇವಸ್ಥಾನವನ್ನು ಶಿಲಾಮಯವಾಗಿ […]
ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ದೊಡ್ಡ ನೆಟ್‌ವರ್ಕ್ ಹೊಂದಿರುವ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ 10ನೇ ಸುಸಜ್ಜಿತ ಚಿಕಿತ್ಸಾ ಕೇಂದ್ರ ಆಸ್ಪತ್ರೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹಾಗೂ ಸಭಾ ಕಾರ್ಯಕ್ರಮವನ್ನು ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಭಾನುವಾರ ಮೂಡುಬಿದಿರೆಯ ಬಡಗ ಬಸದಿ ಎದುರಿನ ಫಾರ್ಚೂನ್-2 ಕಟ್ಟಡದಲ್ಲಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾಚಿಸಿ ಮಾತನಾಡಿದ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ಆಧ್ಯಾತ್ಮಿಕ ಕೇಂದ್ರವಾದ ಮೂಡುಬಿದಿರೆಯಲ್ಲಿ […]
ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ಪೈಕಿ ಅತೀ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿರುವ ಮತ್ತು ನೆರೆ ರಾಜ್ಯಗಳಾದ ಕೇರಳ, ಗೋವಾದಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮಾ. ೧೬ ರಂದು ಬೆಳಿಗ್ಗೆ ಮೂಡುಬಿದಿರೆಯ ಜೈನಪೇಟೆ ಬಡಗ ಬಸದಿ ಎದುರು ಇರುವ ಫಾರ್ಚೂನ್ -೨ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. […]
ಮೂಡುಬಿದಿರೆ: ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ಸ್ಪಂದಿಸುತಿದ್ದ ಯುವಕ, ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದಿರೆ ಕಡೆಪಲ್ಲ ನಿವಾಸಿ ವಿಜೇಶ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಬ್ರಹ್ಮಕಲಶ, ಕಂಬಳ ಹಾಗೂ ಜಾತ್ರೆಗಳ ಸಂದಭ೯ಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅನಾರೋಗ್ಯ ಪೀಡಿತರಿಗೆ ಮಿಡಿಯುತ್ತಿದ್ದ ಹೃದಯ ಇನ್ನಿಲ್ಲ. ವಿಜೇಶ್ ಅವರಿಗೆ ಕಳೆದ 10 ದಿನಗಳ ಹಿಂದೆ ಎದೆನೋವು ಕಾಣಿಸಿಕೊಂಡಿದ್ದು ಸ್ಟ್ರೋಕ್ ಆಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇದೇ ಸಂದಭ೯ದಲ್ಲಿ ಬಿಪಿ ಮತ್ತು ಕಿಡ್ನಿಯ ಸಮಸ್ಯೆಯು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆರಾತ್ರಿ ನಿಧನರಾಗಿದ್ದಾರೆ.ವಿಜೇಶ್ ಅವರ ತಂದೆ […]
ಮೂಡುಬಿದಿರೆ : ಎರಡು ಪ್ರಕರಣಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರೀವ೯ರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ ಮತ್ತು ಮಧ್ಯ ವಯಸ್ಸಿನ ವ್ಯಕ್ತಿ ಸಹಿತ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿ ಪೊಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪ್ರಾಂತ್ಯ ಗ್ರಾಮದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಹಾಗೂ ಆಲಂಗಾರು ಉಮಿಯದ ಪವನ್ (19) ಎಂಬವರು ಬಂಧಿತ ಆರೋಪಿಗಳು. ಪ್ರಾಂತ್ಯ ಅಜಂಕಲ್ಲುವಿನ ಪ್ರಕಾಶ್ ಎಂಬಾತ ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವಷ೯ದಿಂದ […]
ಮೂಡುಬಿದಿರೆ: ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಮಹಾ ರಥೋತ್ಸವವು ಮಾರ್ಚ್ 11ರ ಮಂಗಳವಾರ ಮೊದಲ್ಗೊಂಡು 19 ರ ಬುಧವಾರದವರೆಗೆ ನಡೆಯಲಿದೆ.11ರ ಮಂಗಳವಾರ ಬೆಳಿಗ್ಗೆ 9ಗಂಟೆಗೆ ಕುಂಟ ಮುಹೂರ್ತ.13ರ ಗುರುವಾರ ಬೆಳಿಗ್ಗೆ ನಾಗದೇವರ ಸಾನಿಧ್ಯದಲ್ಲಿ ತಂಬಿಲ ಸೇವೆ, ಮಹಾಪೂಜೆ, ಸಂಜೆ 6 ಗಂಟೆಗೆ ಅಂಕುರಾರೋಪಣ, ಉತ್ಸವ ಬಲಿ.14ರ ಶುಕ್ರವಾರ ಬೆಳಿಗ್ಗೆ 8ರಿಂದ ಕಲಶ ಪ್ರಧಾನ ಹೋಮ,12-05ಕ್ಕೆ ಧ್ವಜಾರೋಹಣ, ಮಧ್ಯಾಹ್ನ ಅನ್ನ ಸಂತರ್ಪಣೆ,ಉತ್ಸವ ಬಲಿ, ಕಂಚಿಲಾಲೆ. ರಾತ್ರಿ 9:30 ರಿಂದ ಇರುವೈಲು ದುರ್ಗಾಪರಮೇಶ್ವರಿ ಯಕ್ಷಗಾನ […]