Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಯಾವುದೇ ಸ್ಪರ್ಧೆಗಳಲ್ಲಿ ಸೋಲು- ಗೆಲುವು ಇರುತ್ತದೆ. ಇದನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿಯಿಂದ ಆಟವಾಡಿ ಯಶಸ್ವಿಯಾಗಿ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹೇಳಿದರು.ಅವರು ದ.ಕ.ಜಿ.ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು.ರೋಟರಿ […]

ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 61ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ನಾಳೆ ನಡೆಯಲಿರುವ ಶೋಭಾಯಾತ್ರೆ ವೇಳೆ ವಾಹನ ಸಂಚಾರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಯ ನಂತರ ಸಾರ್ವಜನಿಕರು ತಮ್ಮ ವಾಹನಗಳನ್ನು ನಗರಕ್ಕೆ ತರದೆ, ಮೂಡುಬಿದಿರೆಯ ಹೊರವರ್ತುಲ (ಬೈಪಾಸ್ ರಸ್ತೆ) ಹಾಗೂ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಇನ್ನು ಬೆಳಿಗ್ಗೆಯಿಂದ ಕಾರ್ಯಕ್ರಮ ಮುಗಿಯುವವರೆಗೂ ವಾಹನಗಳನ್ನು ರಸ್ತೆ ಬದಿಯಲ್ಲಿ ಪಾರ್ಕ್ ಮಾಡುವುದನ್ನು ತಪ್ಪಿಸಲು ಸಹಕರಿಸುವಂತೆ […]

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಹಳೆ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 14 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತ ಆರೋಪಿ ಮಂಗಳೂರು ತಾಲೂಕು ಕೊಳವೂರಿನ ಅಯ್ಯನ ಮನೆ ನಿವಾಸಿ ರಮೇಶ (38) ಎಂದು ಗುರುತಿಸಲಾಗಿದೆ. 2010ರಲ್ಲಿ ಮೂಡುಬಿದಿರೆಯ ಗಾಂಧಿನಗರದ ನ್ಯೂ ಕಿರಣ್ ಫ್ಯಾಕ್ಟರಿಗೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ, ಬ್ಯಾಂಕ್ ನವರು ಫ್ಯಾಕ್ಟರಿಯ ಸ್ಥಿರಾಸ್ತಿ ಹಾಗೂ ಸೊತ್ತುಗಳನ್ನು 2010 ಸೆಪ್ಟೆಂಬರ್ […]

ಮೂಡುಬಿದಿರೆ: ಕಳೆದ 29 ವರ್ಷಗಳ ಹಿಂದೆಗಳ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಅವರ ತಂಡವು ಬಂಧಿಸಿದೆ. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಒಂಟಿಕಟ್ಟೆ ಹರೀಶ್ ಪೂಜಾರಿ (57ವ) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಒಂಟಿಕಟ್ಟೆ ನಿವಾಸಿ ಮಹಾಬಲ ಪೂಜಾರಿ, ಸತೀಶ್ ಪೂಜಾರಿ ಎಂಬವರು 29ವರ್ಷಗಳ ಹಿಂದೆ ಮನೆಯಲ್ಲಿ ರಾತ್ರಿ ಗಾರೆ ಕೆಲಸ ಮಾಡುತ್ತಿದ್ದಾಗ ಹರೀಶ್ ಪೂಜಾರಿ ಹಲ್ಲೆ ನಡೆಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ.ಆರೋಪಿಯು ಕೋಟೆಬಾಗಿಲು ಬಳಿ ಕೆಲಸ ಮಾಡುತ್ತಿರುವ ಬಗ್ಗೆ […]

ಮೂಡುಬಿದಿರೆ: ತಂದೆಯೋರ್ವ ತನ್ನ ಅಪ್ರಾಪ್ತ ಮಗಳನ್ನೇ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆಯನ್ನು ಮೂಡುಬಿದಿರೆ ಪೊಲೀಸರು ಫೊಕ್ಸೊ ಪ್ರಕರಣದಲ್ಲಿ ಗುರುವಾರ ಬಂಧಿಸಿದ್ದಾರೆ.ಬಂಧಿತ ಆರೋಪಿ ಅಳಿಯೂರಿನ ಉಮೇಶ್ ಶೆಟ್ಟಿ (55) ಎಂದು ತಿಳಿದುಬಂದಿದೆ. ಈತ ವೃತ್ತಿಯಲ್ಲಿ ಕೂಲಿ ಕಾರ್ಮಿಕ. ಆರು ತಿಂಗಳ ಹಿಂದೆ ಮನೆಯಲ್ಲೆ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಮಗಳು ಪ್ರೌಢ ಶಾಲೆಯಲ್ಲಿ ಓದುತ್ತಿದ್ದಾಳೆ. ಇತ್ತೀಚೆಗೆ ಮಗಳ ಆರೋಗ್ಯದಲ್ಲಿ ಏರು ಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ […]

ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ. ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ಅದರಲ್ಲಿ ಸಂದೇಶ್ ಪಿ.ಜಿ.ಅವರೂ ಇದ್ದಾರೆ. ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಸಂದೇಶ್ ಅವರು ತಮ್ಮ ಡೇರಿಂಗ್ ಮೂಲಕ ನಿಷ್ಠಾವಂತ ಅಧಿಕಾರಿಯಾಗಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದ್ದಾರೆ. ಪ್ರಸ್ತುತ ಅವರು […]

ಇರುವೈಲು ಕೋರೆಬಳಿ ಉಲಾಯಿ ಪಿದಾಯಿ ಆಟವಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡವು ಮೂವರನ್ನು ಬಂಧಿಸಿದ್ದಾರೆ. ಇತರ ಕೆಲವು ಮಂದಿ ಪರಾರಿಯಾಗಿದ್ದಾರೆ.ಅಕ್ಬರ್ ,ಗಣೇಶ್ ಹಾಗೂ ಅರುಣ್ ಎಂಬವರು ಬಂಧಿತರಾಗಿದ್ದು ಇತರ ಕೆಲವರು ಪರಾರಿಯಾಗಿದ್ದಾರೆ.ಆರೋಪಿಗಳಿಂದ ಮೂರು ಸಾವಿರ ನಗದು,ಏಳು ಮೊಬೈಲ್ ಹಾಗೂ ಒಂದು ಬೈಕನ್ನು ವಶಪಡಿಸಿಕೊಳ್ಳಲಾಗಿದೆ.ಪ್ರಕರಣ ದಾಖಲಾಗಿದೆ.

ಮೂಡಬಿದರೆ : ಪೊಲೀಸ್ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದ್ರೆ ಎಂತಹಾ ಗೌರವ ಸಿಗುತ್ತೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್ ಅಧಿಕಾರಿಯೇ ಸಾಕ್ಷಿ. ಪೊಲೀಸ್ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ ದಿವಾಕರ್ ರೈ ಅವರಿಗೆ ಸಹೋದ್ಯೋಗಿಗಳು ಪುಷ್ಪಾರ್ಚನೆಯ ಗೌರವ ಸಲ್ಲಿಸಿದ್ದಾರೆ. ದಿವಾಕರ ರೈ ಅವರು ಸೇವೆಯಿಂದ ಇಂದು ನಿವೃತ್ತರಾಗಿದ್ದರು. ಮೂಡಬಿದಿರೆಯ ಪೊಲೀಸ್ ಠಾಣೆಯಿಂದ ಅವರು ಸೇವೆಯನ್ನು ಮುಗಿಸಿ ಮನೆಗೆ ತೆರಳುವ ವೇಳೆಯಲ್ಲಿ ಅವರು ಠಾಣೆಯಿಂದ ಪೊಲೀಸ್ ಜೀಪ್ ಏರುವ ವರೆಗೂ ಮೂಡಬಿದಿರೆಯ […]

ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ. ಪುತ್ತೂರು, ಮೂಡುಬಿದಿರೆ, ಬಜ್ಪೆ, ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ್ ಅವರು ಮತ್ತೆ ಮೂಡುಬಿದಿರೆ ಠಾಣೆಗೆ ಹೆಡ್ ಕಾನ್ಸ್ಟೆಬಲ್ ಆಗಿ ಬಂದು, ಇದೀಗ ಮೂಡುಬಿದಿರೆ ಠಾಣೆಯಲ್ಲೇ ಎ.ಎಸ್.ಐ. ಆಗಿ ಪದೋನ್ನತಿ ಹೊಂದಿದ್ದಾರೆ. ಸುಮಾರು 28 ವರ್ಷಗಳ ಸೇವಾವಧಿಯಲ್ಲಿ, ತಮ್ಮ ನಿಷ್ಠೆಯ ಸೇವೆಯಿಂದಾಗಿ ಪ್ರಶಾಂತ್ ಅವರು ಸಾರ್ವಜನಿಕ ವಲಯದಿಂದ ಮೆಚ್ಚುಗೆ ಗಳಿಸಿದ್ದಾರೆ. […]