
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -೪೫ ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಮೂಡುಬಿದಿರೆ: ಮಂಗಳೂರು ವಿವಿಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ದೇಶೀಯ ಮಟ್ಟದಲ್ಲಿ ಸಾರ್ವಕಾಲಿಕ ಸಾಧನೆ ಮೆರೆದಿದ್ದಾರಲ್ಲದೆ ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಸತತ 22ನೇ ಬಾರಿ ಸಮಗ್ರತಂಡ ಪ್ರಶಸ್ತಿಯನ್ನು ದ್ವಿತೀಯ ಸ್ಥಾನ ಪಡೆದ ತಂಡದಿಂದ 460 ಅಂಕಗಳ ಅಂತರದಲ್ಲಿ ಪಡೆಯುವುದರ ಜೊತೆಗೆ 11 ನೂತನ ಕೂಟದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿಗಳು ನಿರ್ಮಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಕ್ರೀಡಾ ಪ್ರೋತ್ಸಾಹಕ ಡಾ.ಎಂ. ಮೋಹನ ಆಳ್ವ ತಿಳಿಸಿದರು.ಅವರು ಸೋಮವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ […]
ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್ ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಪುರುಷರ ತಂಡವು ನಾಲ್ಕನೇ ಭಾರಿ ಸಮಗ್ರ ತಂಡ ಪ್ರಶಸ್ತಿ ಪಡೆಯುತ್ತಿದ್ದರೆ, ಮಹಿಳೆಯರ ತಂಡವು ಮೂರನೇ ಬಾರಿ ಪ್ರಶಸ್ತಿ ಪಡೆದಿದೆ. ಮಂಗಳೂರು ವಿವಿ ಪ್ರತಿನಿಧಿಸಿದ ಪುರುಷರ ಹಾಗೂ ಮಹಿಳೆಯರ ತಂಡದಲ್ಲಿದ್ದ […]
ಮೂಡುಬಿದಿರೆ: ಯಾವುದೇ ಸ್ಪರ್ಧೆಗಳಲ್ಲಿ ಸೋಲು- ಗೆಲುವು ಇರುತ್ತದೆ. ಇದನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿಯಿಂದ ಆಟವಾಡಿ ಯಶಸ್ವಿಯಾಗಿ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹೇಳಿದರು.ಅವರು ದ.ಕ.ಜಿ.ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು.ರೋಟರಿ […]
ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಟ್ ಲಿಫ್ರ‍್ಸ್ ಸಂಸ್ಥೆ (ರಿ.) ಹಾಗೂ ಮೈಸೂರು ಜಿಲ್ಲಾ ವೇಟ್ ಲಿಫ್ರ‍್ಸ್ ಸಂಸ್ಥೆ (ರಿ.) ಇವರ ಜಂಟಿ ಆಶ್ರಯದಲ್ಲಿ ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ- ಯೂತ್, ಜೂನಿಯರ್, ಸೀನಿಯರ್ ಸೇರಿದಂತೆ ಇರುವ ಒಟ್ಟು ಆರು ವಿಭಾಗಳಲ್ಲೂ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಪುರುಷರ ವಿಭಾಗದಲ್ಲಿ ಒಟ್ಟು 9 ಚಿನ್ನ, 10 […]
ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ ೨೬ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು ೧೧ ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ ಹಿರಿಮೆಗೆ ಆಳ್ವಾಸ್ ಪಾತ್ರವಾಗುತ್ತಿದೆ. ಈ ಬಾರಿಯ ಒಲಿಂಪಿಕ್ಸ್ ಗೇಮ್‌ನಲ್ಲಿ ೪೪೦೦ ರಿಲೇಯ […]
ಮೂಡುಬಿದಿರೆ: ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಅವರು ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು. ಸುಮಂತ್ ಅವರು ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿ ಅವರ ಪುತ್ರರಾಗಿದ್ದಾರೆ. ಸುಮಂತ್ […]
ಬ್ರಿಡ್ಜ್ ಟೌನ್ : ಇಲ್ಲಿನ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಸೋಲಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆ ಮುತ್ತಿಟ್ಟಿದೆ. ಆ ಮೂಲಕ ದಕ್ಷಿಣ ಆಫ್ರಿಕಾ ಗೆ ಮತ್ತೆ ಚೋಕರ್ಸ್ ಪಟ್ಟ ಖಾಯಂ ಆಗಿದೆ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚೊಚ್ಚಲ ವಿಶ್ವಕಪ್ ಗೆದ್ದಿದ್ದ ಭಾರತ, ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋಲಿಸಿ ಚಾಂಪಿಯನ್ ಪಟ್ಟ ಪಡೆಯಿತು. 2007ರಲ್ಲಿ […]
ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ನಡೆದ ದಕ್ಷಿಣ ಭಾರತ ವಲಯ ಮಟ್ಟದ ಚಾಂಪಿಯನ್ಶಿಪ್ -2024 ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಮ್ಮ ಮೂಲ್ಕಿ – ಮೂಡುಬಿದಿರೆ ಕ್ಷೇತ್ರದ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರುವಿನ ಖೋ-ಖೋ ತಂಡ ದ್ವಿತೀಯ ಸ್ಥಾನ ಪಡೆದು ಮಹತ್ವದ ಸಾಧನೆ ಮಾಡಿದಾರೆ ಅವರ ಈ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳು. ಕರ್ನಾಟಕವನ್ನು ಗೌರವದಿಂದ ಪ್ರತಿನಿಧಿಸಿದ ಈ ಯುವ ಕ್ರೀಡಾಪಟುಗಳು ತಮ್ಮ ಶ್ರಮ, ಸಮರ್ಪಣೆ ಮತ್ತು ಕ್ರೀಡಾ ಮನೋಭಾವದಿಂದ ಮಾತ್ರವಲ್ಲದೆ, ರಾಜ್ಯದ ಕ್ರೀಡಾ ಸಾಮರ್ಥ್ಯವನ್ನು ಮೆರೆಯುವಲ್ಲಿ ಸಫಲರಾಗಿದ್ದಾರೆ.