Category: Uncategorized

  • ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಗೆ ನಾಳೆ ಸನ್ಮಾನ

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಗೆ ನಾಳೆ ಸನ್ಮಾನ

    ಮೂಡುಬಿದಿರೆ: 25 ವರ್ಷಗಳ ಕಂಬಳ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರಿಗೆ ಇರುವೈಲು ಪಾಣಿಲ ಅಭಿಮಾನಿ ಬಳಗದ ವತಿಯಿಂದ ನಾಳೆ ಸಂಜೆ 7 ಗಂಟೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ಸನ್ಮಾನ ನಡೆಯಲಿದೆ.    ಸನ್ಮಾನದ ಬಳಿಕ ‘ ಶಿವದೂತೆ ಗುಳಿಗೆ’ ನಾಟಕ ಪ್ರದರ್ಶನಗೊಳ್ಳಲಿದೆ.

    Continue Reading

  • ವಿರಾಸತ್ ಸಾಂಸ್ಕೃತಿಕ ರಥ ಮರಳಿ ಸ್ವಸ್ಥಾನಕ್ಕೆ

    ವಿರಾಸತ್ ಸಾಂಸ್ಕೃತಿಕ ರಥ ಮರಳಿ ಸ್ವಸ್ಥಾನಕ್ಕೆ

    ಮೂಡುಬಿದಿರೆ: ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೩೦ನೇ ವಿರಾಸತ್’ನ ಸಾಂಸ್ಕೃತಿಕ ಕಾರ‍್ಯಕ್ರಮಗಳಿಗೆ ಶನಿವಾರ ರಾತ್ರಿ ತೆರೆ ಬಿತ್ತು.ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು.ಇದಕ್ಕೂ ಮೊದಲು ಸಣ್ಣ ರಥದಲ್ಲಿ ಗಣಪತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ […]

    Continue Reading

  • ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೇ ಮೂಡುಬಿದಿರೆಯನ್ನು ಅಭಿವೃದ್ಧಿಗೊಳಿಸಲು ಎಲ್ಲರೂ ಕೈಜೋಡಿಸಿ- ಉಮಾನಾಥ ಎ ಕೋಟ್ಯಾನ್

    ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೇ ಮೂಡುಬಿದಿರೆಯನ್ನು ಅಭಿವೃದ್ಧಿಗೊಳಿಸಲು ಎಲ್ಲರೂ ಕೈಜೋಡಿಸಿ- ಉಮಾನಾಥ ಎ ಕೋಟ್ಯಾನ್

    ಮೂಡುಬಿದಿರೆ : ೨೦೨೩-೨೪ ಹಾಗೂ ೨೪-೨೫ ನೇ ಸಾಲಿನ ೧೫ನೇ ಹಣಕಾಸು ಯೋಜನೆಯ ಅನುದಾನ, ನಗರೋತ್ಥಾನ ಹಂತ-೪ ಎಸ್.ಎಫ್ .ಸಿ ಮುಕ್ತ ನಿಧಿ ಅನುದಾನ ಹಾಗೂ ಪುರಸಭಾ ನಿಧಿಯ ಅನುದಾನದಡಿ ಸಹಿತ ಒಟ್ಟು ರೂ ೫.೧೨ ಕೋ.ವೆಚ್ಚದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಶನಿವಾರ ಪುರಸಭೆಯಲ್ಲಿ ಶಿಲಾನ್ಯಾಸಗೈದರು.ಶಿಲಾನ್ಯಾಸಗೈದು ಮಾತನಾಡಿದ ಕೋಟ್ಯಾನ್ ಅವರು ಪುರಸಭೆಯ ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಒಂದು ಕೋ.ವೆಚ್ಚದಲ್ಲಿ ಮೂಡುಬಿದಿರೆಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ. ಜ್ಯೋತಿನಗರದ ಬಳಿ ಎಂ.ಆರ್.ಘಟಕವನ್ನು […]

    Continue Reading

  • ಮೂಡುಬಿದಿರೆಯ ಬಾಬು ರಾಜೇಂದ್ರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ‌ ಸೌಲಭ್ಯ ಲಭ್ಯ- ಮಾಜಿ ಸಚಿವ ಅಭಯಚಂದ್ರ ಜೈನ್

    ಮೂಡುಬಿದಿರೆಯ ಬಾಬು ರಾಜೇಂದ್ರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ‌ ಸೌಲಭ್ಯ ಲಭ್ಯ- ಮಾಜಿ ಸಚಿವ ಅಭಯಚಂದ್ರ ಜೈನ್

    ಮೂಡುಬಿದಿರೆ: 1966 ರಲ್ಲಿ ಮೂಡುಬಿದಿರೆಯಲ್ಲಿ ಪ್ರಾರಂಭಗೊಂಡ ಎರಡನೇ ಪ್ರೌಢಶಾಲೆ ಬಾಬು ರಾಜೇಂದ್ರ ಪ್ರೌಢಶಾಲೆ. ಮಹಾವೀರ ಕಾಲೇಜಿನ ಆಡಳಿತ ಮಂಡಳಿಯಿಂದ ಪ್ರಾರಂಭಗೊಂಡ ಶಾಲೆಯಲ್ಲಿ ದೊಡ್ಡ ಕ್ರೀಡಾಂಗಣ, ಫುಟ್ಬಾಲ್ ಕೋರ್ಟ್, ಕೋಚಿಂಗ್ ಅವಕಾಶ, ಉಚಿತ ಶಾಲಾ ಸಮವಸ್ತ್ರ, ದೂರದ ವಿದ್ಯಾರ್ಥಿಗಳಿಗೆ ಉಚಿತ ರಿಕ್ಷಾ ಸೌಲಭ್ಯ ಅದೇ ರೀತಿ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡಲಾಗುತ್ತಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.ಅವರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.ಮಾಜಿ ಶಾಸಕರು, ಧರ್ಮಸ್ಥಳ ಯೋಜನೆ, ಹಳೆ ವಿದ್ಯಾರ್ಥಿಗಳು […]

    Continue Reading

  • ಎಂ.ಆರ್.ಜಿ.ಗ್ರೂಪ್ ಮತ್ತು ಮ್ಯಾರಿಯೆಟ್ ಹೊಟೇಲ್ಸ್ ಸಹಯೋಗದಲ್ಲಿ ನವಮಂಬಯಿಯಲ್ಲಿ ಹೊಸ ಹೋಟೆಲ್ ‘ಮ್ಯಾರಿಯಟ್ ನವಿ ಮುಂಬಯಿ

    ಎಂ.ಆರ್.ಜಿ.ಗ್ರೂಪ್ ಮತ್ತು ಮ್ಯಾರಿಯೆಟ್ ಹೊಟೇಲ್ಸ್ ಸಹಯೋಗದಲ್ಲಿ ನವಮಂಬಯಿಯಲ್ಲಿ ಹೊಸ ಹೋಟೆಲ್ ‘ಮ್ಯಾರಿಯಟ್ ನವಿ ಮುಂಬಯಿ

    ಬೆಂಗಳೂರು: ಆತಿಥ್ಯ ಕ್ಷೇತ್ರದಲ್ಲಿ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೆಸರಾಗಿರುವ ಎಂ.ಆರ್.ಜಿ.ಗ್ರೂಪ್ ಮತ್ತು ಮ್ಯಾರಿಯೆಟ್ ಹೊಟೇಲ್ಸ್ ಗಳು ನವ ಮುಂಬಯಿಯಲ್ಲಿ ಜಂಟಿಯಾಗಿ ಆತಿಥ್ಯೋದ್ಯಮಕ್ಕೆ ಶುಭಾರಂಭ ಮಾಡಿವೆ. ಛತ್ರಪತಿ‌ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 26 ಕಿ.ಮೀ. ದೂರದಲ್ಲಿರುವ ನವ ಮುಂಬಯಿ ಮ್ಯಾರಿಯೆಟ್ ಹೊಟೇಲ್ ವ್ಯಾಪಾರೋದ್ಯಮಿ ಪ್ರವಾಸಿಗರು ಮತ್ತು ರಜೆ ಸಮಯ ಕಳೆಯುವ ಪ್ರವಾಸಿಗರಿಗೆ ಅನುಕೂಲಕರ ತಾಣವಾಗಿದೆ. ದೇಶೀಯ ಮತ್ತು ಅಂತಾರಾಷ್ಟ್ರೀಯ ಅತಿಥಿಗಳಿಗೂ ಇದು ಅಡೆ ತಡೆ ರಹಿತ ಪ್ರಯಾಣಕ್ಕೆ ಅನುಕೂಲಕರವಾದಂತಹ ಸ್ಥಳದಲ್ಲಿದೆ.ಮಹಾರಾಷ್ಟ್ರದ ಕಡಲ ಕಿನಾರೆ ಇಲ್ಲಿ […]

    Continue Reading