ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್, ರೋರ‍್ಸ್ & ರೇಂರ‍್ಸ್, ಬನ್ನಿ,ಕಬ್ಸ್& ಬುಲ್ ಬುಲ್ ಘಟಕಗಳ ಉದ್ಘಾಟನೆ.

ವಿದ್ಯಾರ್ಥಿಗಳನ್ನು ಒಳ್ಳೆಯ ನಾಗರಿಕನನ್ನಾಗಿ ಮಾಡುವುದೇ ಸ್ಕೌಟ್ಸ್ ಮತ್ತು ಗೈಡ್ಸ್ನ ಧೈಯೋದ್ಧೇಶ. ಪ್ರತಿಯೊಬ್ಬರು ಇದರ ನಿಯಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ಗೆ ಸೇರಲು ತುಂಬಾ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ನಿಮಗೆ ವಿದ್ಯೆ ನೀಡುತ್ತಿರುವ ಪ್ರತಿ ಶಿಕ್ಷಕರನ್ನು ಪ್ರತಿದಿನ ಸ್ಮರಿಸಬೇಕು. ಬದುಕಿನಲ್ಲಿ ಶಿಸ್ತು ಮುಖ್ಯ. ಆ ಶಿಸ್ತಿನ ಪಾಠವನ್ನು ಶಿಕ್ಷಕರು ನಿಮಗೆ ಕಲಿಸುತ್ತಾರೆ. ಆ ಮೂಲಕ ನೀವು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು. ಒಬ್ಬ ನಾಗರಿಕನಾಗಿ ನನ್ನ ಜವಬ್ದಾರಿಗಳೇನು ಎಂದು ಅರಿತುಕೊಳ್ಳಬೇಕು. ನಾವೆಲ್ಲಾ ಪರಿಸರದ ಕೂಸುಗಳು ಪರಿಸರದೊಂದಿಗೆ ನಮ್ಮ ಜೀವನ ಸಾಗಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧಿಯಾ ಅಭಿಪ್ರಾಯ ಪಟ್ಟರು.
ಮೂಡುಬಿದ್ರಿ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರೋರ‍್ಸ್, ರೇಂರ‍್ಸ್, ಬನ್ನಿ, ಕಬ್ಸ್ ಮತ್ತು ಬುಲ್ ಬುಲ್ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಪರಿಸರದಲ್ಲಿ ಜೀವಿಸುತ್ತಿರುವ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಎಲ್ಲಾ ಪ್ರಾಣಿ ಪಕ್ಷಿಗಳನ್ನು, ಮನುಷ್ಯರನ್ನು ಪ್ರೀತಿಯಿಂದ ಕಾಣಬೇಕು. ಇದನ್ನು ಸ್ಕೌಟ್ಸ್ ಗೈಡ್ಸ್ ಕಲಿಸುತ್ತದೆ. ದೇವರಲ್ಲಿ ನಂಬಿಕೆ, ಮಾನಸಿಕ ಹಾಗೂ ದೈಹಿಕವಾಗಿ ಸದೃಢನನ್ನಾಗಿಸುವುದು, ಹಾಗೂ ಸೇವಾ ಮನೋಭಾವನೆಯನ್ನು ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸ್ಕೌಟ್ಸ್ ಸಮವಸ್ತç ಧರಿಸಿದಾಗ ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಬರುತ್ತದೆ. ಈ ಮೂಲಕ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯಾರೇ ಕಷ್ಟದಲ್ಲಿದ್ದರೂ ಅವರ ಸಹಾಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸದಾ ತಯಾರಾಗಿರುತ್ತದೆ. ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ಗೆ ಶಾಲೆಯಲ್ಲಿ ಹೆಚ್ಚೆಚ್ಚು ವಿದ್ಯಾರ್ಥಿಗಳು ಸೇರಬೇಕು. ಆ ಮೂಲಕ ಕ್ರೀಯಾಶೀಲ ವ್ಯಕ್ತಿತ್ವ ರೂಪಿಸಿಕೊಂಡು ಪರಿಸರವನ್ನು ಪ್ರೀತಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಯಾರು ಬೇರೆಯವರಿಗೋಸ್ಕರ ಬದುಕುತ್ತಾರೊ ಅವರ ಹೆಸರು ಅಜರಾಮರವಾಗಿರುತ್ತದೆ. ಬದುಕು ಹೇಗಿದೆ ಅದನ್ನು ನಾವು ಹೇಗೆ ನಡೆಸಿಕೊಂಡು ಹೋಗಬೇಕು ಎಂಬುದನ್ನು ಇಂತಹ ಘಟಕಗಳ ಮೂಲಕ ಕಲಿಯಬೇಕು. ದೇಶಕ್ಕೆ ನಿಮ್ಮಿಂದ ಎಷ್ಟು ಸಾಧವೊ ಅಷ್ಟು ಕೊಡುಗೆಗಳನ್ನು ನೀಡಿ. ಸಮಾಜ ಸೇವೆ ಬದುಕಿನ ಮೂಲ ಮಂತ್ರವಾಗಲಿ ಎಂದರು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಸಂಘಟಕರಾದ ಪ್ರಭಾಕರ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಸಂಘಟಿಕರಾದ ಭರತ್‌ಕುಮಾರ್, ಮೂಡಬಿದಿರೆ ತಾಲೂಕಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯದರ್ಶಿಗಳಾದ ಭಾರತಿ ನಾಯಕ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸಿಬಿಎಸ್‌ಸಿ ಶಾಲೆಯ ಸಂಯೋಜಕರಾದ ಶ್ರೀ ಪ್ರಸಾದ್, ಸ್ಕೌಟ್ಸ್ ಮತ್ತು ಗೈಡ್ಸ್ ಮಾಸ್ರ‍್ಸ್, ರೋರ‍್ಸ್ & ರೇಂರ‍್ಸ್ ಲೀರ‍್ಸ್, ಬನ್ನಿ, ಕಬ್ಸ್ ಮತ್ತು ಬುಲ್ ಬುಲ್ ಮಾಸ್ರ‍್ಸ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೂತನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸ್ಕಾರ್ಫ್ಗಳನ್ನು ವಿತರಿಸಲಾಯಿತು. ಉಪ ಮುಖ್ಯೋಪಧ್ಯಾಯರು ಜಯಶೀಲ ಕಾರ್ಯಕ್ರಮವನ್ನು ನಿರೂಪಿಸಿದರು, ವದ್ಯಾರ್ಥಿನಿ ಮಾನಿತ ಸ್ವಾಗತಿಸಿದರು, ಮಾನ್ಯ ವಂದಿಸಿದರು, ರೋರ‍್ಸ್ ಲೀಡರ್ ಪ್ರದೀಪ್ ಅಥಿತಿಗಳನ್ನು ಪರಿಚಯಿಸಿರು.

ADVRTISEMENT

Leave a Reply

Your email address will not be published. Required fields are marked *