ಕರಾವಳಿ ಭಾಗಕ್ಕೆ ಮತ್ತೆ ರೆಡ್‌ ಅಲರ್ಟ್: ಭಾರೀ ಮಳೆಯ ಎಚ್ಚರಿಕೆ

ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಭಾಗಕ್ಕೆ ಮತ್ತೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ

ಮಳೆಯ ತೀವ್ರತೆಯಿಂದಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈಗಾಗಲೇ ನದಿಗಳು ತುಂಬಿ ಹರಿಯುತ್ತಿದ್ದು, ಕಡಲ ತೀರ ಪ್ರದೇಶಗಳಲ್ಲಿ ಪ್ರಬಲ ಅಲೆಗಳು ಸಂಚಲನ ಮೂಡಿಸುತ್ತಿವೆ. ಈ ಪರಸ್ಥಿತಿಯಲ್ಲಿ, ಭಾರೀ ಮಳೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ರೆಡ್‌ ಅಲರ್ಟ್‌ ಹಿನ್ನೆಲೆಯಲ್ಲಿ, ಈ ದಿನ ಮತ್ತು ನಾಳೆ, ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ (12ನೇ ತರಗತಿವರೆಗೆ) ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಜುಲೈ 8 ರಿಂದ 10 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹೊರಡಿಸಲಾಗಿದೆ.

ಅಧಿಕಾರಿಗಳು ಮತ್ತು ಸಾರ್ವಜನಿಕರು ಮಳೆಗಾಲದ ಮುನ್ನೆಚ್ಚರಿಕೆಗಳನ್ನು ಪಾಲಿಸಿ ಸುರಕ್ಷಿತವಾಗಿರಲು ಸಲಹೆ ನೀಡಲಾಗಿದೆ.

ADVRTISEMENT