ಚಾಂಪಿಯನ್ ಸ್ಪರ್ಧೆಯಲ್ಲಿ ಮೂಡುಮಾರ್ನಾಡು ವಿದ್ಯಾರ್ಥಿ ಸುಮಂತ್ ಎಸ್. ಯಶಸ್ಸು

ಮೂಡುಬಿದಿರೆ: ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಅವರು ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು.

ಸುಮಂತ್ ಅವರು ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿ ಅವರ ಪುತ್ರರಾಗಿದ್ದಾರೆ.

ಸುಮಂತ್ ಅವರ ಈ ಯಶಸ್ಸಿಗೆ ಮೂಡುಮಾರ್ನಾಡು ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್, ಸಮಿತಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ಡಾ. ರಾಜಶ್ರೀ ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ADVRTISEMENT