ದಕ್ಷಿಣ ಕನ್ನಡದಲ್ಲಿ ಪದ್ಮರಾಜ್‌ ವಿರುದ್ಧ ಬ್ರಿಜೇಶ್‌ ಚೌಟ ಗೆಲುವು

ಮಂಗಳೂರು: ಕಳೆದ ಕೆಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಕಮಾಲ್ ಮಾಡಿದೆ. ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯೂ ಈ ಬಾರಿಯೂ ಗೆಲುವಿನ ನಗೆ ಬೀರಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಸೋಲಿಸಿದ್ದಾರೆ. .



ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಈ ಬಾರಿಯಾದರೂ ಈ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಪಣತೊಟ್ಟಿತ್ತು. ಹೀಗಾಗಿ ಈ ಬಾರಿ ಬಿಜೆಪಿಯೂ ಕಾಂಗ್ರೆಸ್‌ನಿಂದ ಪ್ರಬಲ ಸ್ಪರ್ಧೆಯನ್ನು ಎದುರಿಸಿತ್ತು. ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ರೋ ವರ್ಕೌಟ್ ಆಗಿದ್ದು ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ.

ADVRTISEMENT

Leave a Reply

Your email address will not be published. Required fields are marked *