ನೆಲ್ಲಿಕಾರು ಗ್ರಾ.ಪಂನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡುಬಿದಿರೆ : ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮತ್ತು ಪೌಷ್ಟಿಕ ಆಹಾರ ಕಿಟ್ ವಿತರಣಾ ಸಮಾರಂಭವು ನೆಲ್ಲಿಕಾರು ಗ್ರಾಮ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಶಿಬಿರವನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ ಉದ್ಘಾಟಿಸಿ ಮಾತನಾಡಿ ವರ್ಷವಿಡೀ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರಿಗೆ ಆರೋಗ್ಯ ಭದ್ರತೆಯ ಜತೆಗೆ ಪೌಷ್ಟಿಕಾಂಶ ಉಳ್ಳ ಆಹಾರ ಧಾನ್ಯ ನೀಡುತ್ತಿರುವ ಸರಕಾರದ ಈ ಯೋಜನೆ ಉತ್ತಮವಾಗಿದೆ ಎಂದರು.
ಉಪಾಧ್ಯಕ್ಷೆ ಸುಶೀಲಾ ಸದಸ್ಯರಾದ ಜಯಂತ ಹೆಗ್ಡೆ , ಆಶಾಲತ , ಮೋಹಿನಿ , ಪ್ರತಿಮ ಸುನಂದ ,ಲಲಿತ ಹಾಗೂ ಶಶಿಧರ ಎಂ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಮಿಕ ಇಲಾಖೆಯ ಸಾಗರ್ ಯೋಜನೆಯ ವಿವರ ನೀಡಿದರು.
ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಕುಮಾರ್ ಜೈನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಸಿಬ್ಬಂದಿ ಗಳಾದ ರೇಣುಕ & ಲಕ್ಷ್ಮಣ ಸಹಕರಿಸಿದರು.

ADVRTISEMENT

Leave a Reply

Your email address will not be published. Required fields are marked *