ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ –ನಳಿನ್ ಕುಮಾರ್ ಕಟೀಲು

ಶ್ರೀ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು,

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪ್ರಮುಖರುಗಳು ಭೇಟಿಯಾಗಿ ಧೈರ್ಯ ತುಂಬಿ,ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ADVRTISEMENT