ನವದೆಹಲಿ, ಜು. 23: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ಮಹಿಳೆಯರು ಮತ್ತು ಹೆಣ್ಣುಮಕ್ಕಳ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು, ಈ ಬಾರಿಯ ಬಜೆಟ್ನಲ್ಲಿ 3 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಘೋಷಿಸಲಾಗಿದೆ. ಮಹಿಳೆಯರು ಉದ್ಯೋಗದಲ್ಲಿ ಹೆಚ್ಚು ಭಾಗವಹಿಸಲೆಂದು, ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ.
ಬಜೆಟ್ನಲ್ಲಿ ಹೆಣ್ಣುಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ತಂದು, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ಮಹಿಳೆಯರು ಮತ್ತು ಬಾಲಕಿಯರಿಗೆ 3 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಒದಗಿಸಲಾಗುವುದು. ಜೊತೆಗೆ, ಉದ್ಯೋಗದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು, ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ಗಳನ್ನು ನಿರ್ಮಿಸುವ ಯೋಜನೆ ಬಜೆಟ್ನಲ್ಲಿ ಘೋಷಿಸಲಾಗಿದೆ.
ಈ ಬಾರಿಯ ಬಜೆಟ್ ಉದ್ಯೋಗ, ಕೌಶಲ್ಯ, ಎಂಎಸ್ಎಂಇಗಳು ಮತ್ತು ಮಧ್ಯಮ ವರ್ಗದ ಮೇಲೆ ಕೇಂದ್ರೀಕರಿಸಿದೆ. ಬಡವರು, ಮಹಿಳೆಯರು, ಯುವಕರು ಮತ್ತು ರೈತರಿಗೆ ಆದ್ಯತೆ ನೀಡಲು, ಮಧ್ಯಂತರ ಬಜೆಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.














