ಮುಂದಿನ 7 ದಿನಗಳಿಗೆ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್‌ ಕೂಡ ಜಾರಿಗೆ ಇರುತ್ತದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಹಾಸನ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಾರಿಯಾಗಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVRTISEMENT