Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ. ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮೂಡುಬಿದಿರೆ ಎ.ಸಿ.ಎಫ್ ಆಗಿದ್ದ ಸತೀಶ್ ಎನ್. ಅವರು ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಶ್ರೀಧರ್ ಅವರು ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು, ಅಲ್ಲಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಈ ಹಿಂದೆ ಮೂಡುಬಿದಿರೆ ವಲಯಾರಣ್ಯಾಧಿಕಾರಿಯಾಗಿ ಮೂಡುಬಿದಿರೆಯಲ್ಲಿ ಸೇವೆ ಸಲ್ಲಿಸಿದ್ದ ಶ್ರೀಧರ್ ಅವರು ದಕ್ಷ ಅಧಿಕಾರಿಯಾಗಿ ಗಮನ ಸೆಳೆದಿದ್ದರು.
ADVRTISEMENT


