ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ, ಮೂಡಬಿದ್ರೆಯ ಶ್ರೀ ಮಹಾವೀರ ಕಾಲೇಜಿನ NCC ಘಟಕವು ಮಾನವೀಯತೆಗೆ ಪೂರಕವಾದ ಜಾತಾವನ್ನು ಹಮ್ಮಿಕೊಂಡಿತ್ತು.
ಈ ಜಾತೆಗೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಚಾಲನೆ ನೀಡಿದರು. ಅವರು ತಮ್ಮ ಉದ್ಬೋಧನೆಯಲ್ಲಿ, ಸ್ವಸ್ಥ ಸಮಾಜವನ್ನು ನಿರ್ಮಿಸುವಲ್ಲಿ NCC ಕೆಡೆಟ್‌ಗಳ ಪಾತ್ರ ಮಹತ್ವದ್ದಾಗಿದ್ದು, ದೇಶವನ್ನು ಕಾಯುವ ಕರ್ತವ್ಯವನ್ನು ನಿಭಾಯಿಸುವಂತಾಗಬೇಕು ಮತ್ತು ಮಾದಕ ವಸ್ತುಗಳ ಸೇವನೆಯ ಪರಿಣಾಮವನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿಯು ನಮ್ಮದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಪ್ರೊ. ರಮೇಶ್ ಭಟ್ ಉಪಸ್ಥಿತರಿದ್ದರು.
ಈ ಜಾತಾದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು, ಮತ್ತು ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿದರು. ಅವರೋರ್ವರು, “ವ್ಯಸನ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ನಾವು ಸಕ್ರೀಯ ಪಾತ್ರ ವಹಿಸಬೇಕು” ಎಂಬ ಸಂದೇಶವನ್ನು ಹರಡಿದರು.
ಈ ಅಭಿಯಾನವು, ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾದಕ ವಸ್ತುಗಳ ಅಪಾಯದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಆಗಿದೆ.
















