ಶ್ರೀಮತಿ ವನಜಾಕ್ಷಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಬರಹ ಪುಸ್ತಕಗಳ ವಿತರಣೆ

ಮೂಡುಬಿದಿರೆ ಜ್ಯೋತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ 125 ವಿದ್ಯಾರ್ಥಿಗಳಿಗೆ ಶ್ರೀಮತಿ ವನಜಾಕ್ಷಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಬರಹ ಪುಸ್ತಕಗಳನ್ನು ವಿತರಿಸಲಾಯಿತು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪುಸ್ತಕಗಳನ್ನು ವಿತರಿಸಿ ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನೀಡುತ್ತಿರುವ ಕನ್ನಡ ಮಾಧ್ಯಮ, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಪ್ರಯತ್ನ ಅಗತ್ಯ ಎಂದರು.

ಟ್ರಸ್ಟ್‌ನ ಪ್ರವರ್ತಕ, ಉದ್ಯಮಿ ಶ್ರೀಪತಿ ಭಟ್, ಲಯನ್ಸ್ ಕ್ಲಬ್ ಅಧ್ಯಕ್ಷ ಜೊಸ್ಸಿ ಮಿನೇಜಸ್, ವಲಯಾಧ್ಯಕ್ಷ ಎಂ.ಕೆ. ದಿನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.

ADVRTISEMENT