ವಾಸ್ತು ತಜ್ಞ, ಚಂದ್ರಶೇಖರ ಸ್ವಾಮೀಜಿಯವರಿಗೆ ರಾಜ್ಯಮಟ್ಟದ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಶನಿವಾರ ನಡೆದ ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಆಧ್ಯಾತ್ಮಿಕ ಗುರು ಅಂತರಾಷ್ಟ್ರೀಯ ವಾಸ್ತು ತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ, ಅವರಿಗೆ ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್,ಕಂಬಳ ಸಮಿತಿಯ ಪ್ರ. ಕಾರ್ಯದರ್ಶಿ ಗುಣಪಾಲ ಕಡಂಬ, ಕಾಯ೯ದಶಿ೯ ರಂಜಿತ್ ಪೂಜಾರಿ, ಕೋಶಾಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್, ಬಿಜೆಪಿ ಮುಲ್ಕಿ- ಮೂಡುಬಿದಿರೆ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸುದರ್ಶನ್ ಎಂ, ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಸ್ವಾಮೀಜಿಯವರಿಗೆ ಸನ್ಮಾನ ಪತ್ರ, ಫಲಕ ಹಾಗೂ ಹಾರವನ್ನಾರ್ಪಿಸಿ ರಾಜ್ಯಮಟ್ಟದ ವೀರರಾಣಿ ಅಬ್ಬಕ್ಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ, ಅಬ್ಬಕ್ಕ ತುಳುನಾಡಿನ ವೀರ ವನಿತೆ ಆಕೆಯ ಹೆಸರಲ್ಲಿ ನೀಡುತ್ತಿರುವ ಪ್ರಶಸ್ತಿಯನ್ನು ಮೊದಲಿಗನಾಗಿ ನನ್ನ ಪಾಲಿಗೆ ದೊರೆತಿರುವುದು ನನ್ನ ಭಾಗ್ಯ . ಹಲವು ಪ್ರಶಸ್ತಿ ಸನ್ಮಾನಗಳನ್ನು ಸ್ವೀಕರಿಸಿದ್ದರು. ತಾಯಿ ನೆಲದಲ್ಲಿ ಮಾಡಿದ ಸನ್ಮಾನ ಧನ್ಯತಾ ಭಾವ ಮೂಡಿದೆ ಎಂದರು.
ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಮಾತನಾಡಿ ಜಗತ್ತಿನಲ್ಲಿ ಅಸಂತುಷ್ಠಿ ಹೆಚ್ಚುತ್ತಿದ್ದು ತಮ್ಮ ಆಧ್ಯಾತ್ಮಿಕ ಚಿಂತನೆ ಬೋದನೆಗಳಿಂದ ಜನರನ್ನು ಸಂತುಷ್ಠಿಗೊಳಿಸುವ ಕೆಲಸವನ್ನು ಚಂದ್ರಶೇಖರ ಸ್ವಾಮೀಜಿ ಮಾಡುತ್ತಿದ್ದಾರೆ. ಆಧ್ಯಾತ್ಮಿಕ ಸಾಧನೆ ಯ ಮೂಲಕ ಜಗತ್ತಿನಲ್ಲಿ ಗೌರವಿಸಲ್ಪಡುವ ಸ್ವಾಮೀಜಿಯವರು ಜೆಲ್ಲೆಗೆ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದರು.
ಅಭಿನಂದನಾ ಭಾಷಣ ಮಾಡಿದ ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಚಂದ್ರಶೇಖರ ಸ್ವಾಮೀಜಿ ಯವರು ಭಾರತೀಯ ಸಂಸ್ಕೃತಿ ತತ್ವಶಾಸ್ತ್ರ ಶಿಲ್ಯ ತಂತ್ರವನ್ನು ಅಧ್ಯಯನ ಮಾಡಿ ಆ ಜ್ಞಾನಧಾರೆಯನ್ನು ಸಮಾಜಕ್ಕೆ ಎರೆದವರು. ವೈಜ್ಞಾನಿಕ ದೃಷ್ಟಿಕೋನ ದ ಮೂಲಕ ಜನರ ಸಂಕಷ್ಟ ಗಳಿಗೆ ಪರಿಹಾರ ಸೂಚಿಸಿದವರು ಎಂದರು. ಇದೇ ಸಂದರ್ಭದಲ್ಲಿ ಚಂದ್ರಶೇಖರ ಸ್ವಾಮೀಜಿ ಯವರು ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ವೈಯುಕ್ತಿಕ ನೆಲೆಯಲ್ಲಿ ಗೌರವಿಸಿದರು.
ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು.
ಇದಕ್ಕೂ ಮೊದಲು ಕಂಬಳ ಕರೆಗೆ ಅಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ|ಮೂ|ಈಶ್ವರ ಭಟ್, ಅಲಂಗಾರು ಚರ್ಚ್ನ ಧರ್ಮಗುರು ಮೆಲ್ವಿನ್ ನೊರೆನ್ಹಾ, ಪುತ್ತಿಗೆ ನೂರನಿ ಮಸ್ಜೀದ್‌ನ ಮೌಲಾನ ಝಿಯಾವುಲ್ಲ್ ಹಕ್, ಕುಂಟಾಡಿ ಸುಧೀರ್ ಹೆಗ್ಡೆ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ್ ಎ ಕೋಟ್ಯಾನ್ ಹಾಗೂ ಇತರ ಕಂಬಳ ಸಮಿತಿಯ ಪದಾಧಿಕಾರಿಗಳು ಸದಸ್ಯರು ಗಣ್ಯರೊಡಗೂಡಿ ಕರೆಗೆ ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದವನ್ನು ಸಂಪ್ರೋಕ್ಷಿಸಿ ಕಂಬಳಕ್ಕೆ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.
ನಂತರ ಆಧ್ಯಾತ್ಮಿಕ ಗುರು ಅಂತರಾಷ್ಟ್ರೀಯ ವಾಸ್ತು ತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ, ವೀರರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಗೈದು, ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಶಾಸಕರು, ಗಣ್ಯರು ಪ್ರತಿಮೆಗೆ ಪುರ್ಷ್ಪಾಚನೆ ಮಾಡಿ, ತುಳುನಾಡಿನ ಧ್ವಜವನ್ನು ಹಾರಿಸಿದರು.
ಸಭಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಉದ್ಘಾಟಿಸಿದರು.
ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ದೀಪ ಬೆಳಗಿಸಿ ಸಭಾ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜನಪದ ಕ್ರೀಡೆ ಕಂಬಳವು ಸಾಂಸ್ಕೃತಿಕ ಪರಂಪರೆ, ಭಕ್ತಿಯಿಂದ ಆಚೆ ಆಚರಿಸಲ್ಪಡುವ ಕ್ರೀಡೆಯಾಗಿದ್ದು ಹಲವು ತಲೆಮಾರುಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ. ಮೂಲತಃ ಬೇರನ್ನು ಉಳಿಸಿಕೊಂಡು ಕಾಲಕಾಲಕ್ಕೆ ಪರಿವರ್ತನೆಗೊಂಡು ಬಂದಿರುವ ಈ ಕ್ರೀಡೆಯು ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತದೆ ಎಂದರು.
ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಕೆಎಂಎಫ್ ಅಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ , ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ , ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಮೂಡಾ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ ,
ಪುರಸಭೆ ಮುಖ್ಯಾಧಿಕಾರಿ ಇಂದು ಎಂ, ಉದ್ಯಮಿಗಳಾದ ಕೆ ಶ್ರೀಪತಿ ಭಟ್, ತಿಮ್ಮಯ್ಯ ಶೆಟ್ಟಿ, ನಂದಕುಮಾರ್ ಕುಡ್ವ, ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ,
ಹಿಂ. ಜಾ. ವೇ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ, ವೆಂಕಟರಮಣ ಮತ್ತು ಹನುಮಂತ ದೇವಸ್ಥಾನದ ಆಡಳಿತ ಮೊಕ್ತೇಸರ ಉಮೇಶ್ ಜಿ ಪೈ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಉಳಿಯ ಬಾಲಕೃಷ್ಣ ಆಚಾರ್ಯ ರೋಟರಿ ಕ್ಲಬ್ ಅಧ್ಯಕ್ಷ ರವಿಪ್ರಸಾದ್ ಉಪಾಧ್ಯಾಯ ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಪೂರ್ಣಚಂದ್ರ ಜೈನ್ ಲಯನ್ಸ್ ಕ್ಲಬ್ ಅಧ್ಯಕ್ಷ ಬೊನವೆಂಚರ್ ಮಿನೇಜಸ್ ಜೇಸಿ ಅಧ್ಯಕ್ಷೆ ವರ್ಷಾಕಾಮತ್, ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಶರತ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.
ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಕೋಶಾಧಿಕಾರಿ ಭಾಸ್ಕರ ಕೋಟ್ಯಾನ್ ಉಪಾಧ್ಯಕ್ಷ ಸುರೇಶ್ ಕೆ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಸಮಿತಿ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್ ಸ್ವಾಗತಿಸಿದರು ಕಾರ್ಯದರ್ಶಿ ಗುಣಪಾಲ ಕಡಂಬ ಕಾರ್ಯಕ್ರಮ ನಿರೂಪಿಸಿದರು.
ಕಂಬಳ ಆರಂಭಕ್ಕೂ ಮುನ್ನ ಸ್ಥಳೀಯ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ನಡೆಸಿ ಕಂಬಳದ ಕೋಣಗಳನ್ನು ಮೆರವಣಿಗೆ ಮೂಲಕ ಕಂಬಳ ಕರೆಗೆ ಬರಮಾಡಿಕೊಳ್ಳಲಾಯಿತು.
Leave a Reply