ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಆಗಸ್ಟ್ 2ರಂದು ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಕಟಿಸಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಗಳಂತೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಿದೆ. ತಗ್ಗು ಪ್ರದೇಶಗಳು, ನೆರೆನೀರು ತುಂಬುವ ತಗ್ಗು ಪ್ರದೇಶಗಳು, ನದಿ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರಿಕೆಗೆ ತೆರಳುವುದಿಲ್ಲ, ವಿದ್ಯುತ್ ಕಂಬಗಳ ಬಳಿ ಹೋಗುವುದಿಲ್ಲ, ಮತ್ತು ಪ್ರಾಕೃತಿಕ ವಿಕೋಪದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಸೂಚಿಸಲಾಗಿದೆ.

ADVRTISEMENT

Leave a Reply

Your email address will not be published. Required fields are marked *