ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ವ್ಯಾಪ್ತಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಉಪ ವಲಯ ಅರಣ್ಯಾಧಿಕಾರಿ ಬಸಪ್ಪ ಹಲಗೇರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಹೆರಾಲ್ಡ್ ಡಿಸಿಲ್ವ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿನ್ ಡಿಸೋಜಾ, ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ತದನಂತರ ಶಾಲೆಯಿಂದ ಶಿರ್ತಾಡಿ ಪಟ್ಟಣದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳಿಂದ ನಡೆದ ಅಣಕು ಆಡುಗಬ್ಬ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು. ವಿದ್ಯಾರ್ಥಿಗಳು ಪ್ಲಾಸ್ಟಿಕ್ಕನ್ನು ಬಳಸಬೇಡಿ ಎಂದು ಘೋಷಣೆ ಕೂಗುತ್ತಾ ಜಾಥಾ ಕಾರ್ಯಕ್ರಮದಲ್ಲಿ ಮುನ್ನಡೆದರು.















Leave a Reply