ಮೂಡುಬಿದಿರೆ: ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಉತ್ಸವವು ವೈಶಿಷ್ಟ್ಯಪೂರ್ಣ ಮೇಳಗಳ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಾಳೆ
ಸಂಜೆ ೫.೩೦ರಿಂದ ೬.೩೦ರ ವರೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಭಾರತ್ ಸೈಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧಿಯಾ, ಬಿಎಲ್ ಶಂಕರ್ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್, ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಕಾಯರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎನಲ್.ಎನ್. ಎಂಜಿನಿಯರಿಂಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ, ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಟೋರ್ಟ್ನ ಎಂ.ರವೀಂದ್ರನಾಥ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಜಯಶ್ರೀ ಅಮರನಾಥ ಶೆಟ್ಟಿ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶೂಸ್ ನ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ., ಮಂಗಳೂರು ಭಾರತ್ ಇನ್‌ಫ್ರಾಟೆಕ್‌ನ ಮುಸ್ತಾಫ ಎಸ್.ಎಂ, ಮೂಡುಬಿದಿರೆ ಬಿಮಲ್ ಕನ್‌ಸ್ಟ್ರಕ್ಷನ್ ನ ಪ್ರವೀಣ್ ಕುಮಾರ್ ಉಪಸ್ಥಿತರಿರಲಿದ್ದಾರೆ.
