ಇಟಲ ಮಹತೋಭಾರ ಸೋಮನಾಥೇಶ್ವರ ಬ್ರಹ್ಮಕಲಶ : ವೈಭವದ ಹೊರೆಕಾಣಿಕೆ ಮೆರವಣಿಗೆ

ಮೂಡುಬಿದಿರೆ : ಮಹತೋಭಾರ  ಸೋಮನಾಥೇಶ್ವರ ದೇವಸ್ಥಾನ ಇಟಲ ದರೆಗುಡ್ಡೆ, ಸೋಮನಾಥೇಶ್ವರ ದೇವರ ಕ್ಷೇತ್ರವು ಸಂಪೂರ್ಣ  ಶಿಲಾಮಯವಾಗಿ ಪುನರ್‌ ನಿರ್ಮಿಸಿ ಇದೀಗ  ಬ್ರಹ್ಮಕಲಶೋತ್ಸವವು ಮೆ.೨ರಂದು ನಡೆಯಲಿದ್ದು ಆ ಪ್ರಯುಕ್ತ ವೈಭವದ ಹೊರೆಕಾಣಿಕೆ ಮೆರವಣಿಗೆಯು ಭಾನುವಾರ ಸಂಜೆ ನಡೆಯಿತು.
ಅಳಿಯೂರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೈದಾನದಿಂದ ಹೊರಟ ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ  ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಸುಮಾರು ೨.ಕಿ.ಮೀ ದೂರದ ದರೆಗುಡ್ಡೆ ಇಟಲ ದೇವಸ್ಥಾನದವರೆಗೆ ನಡೆದ ಮೆರವಣಿಗೆಯಲ್ಲಿ ಹತ್ತಾರು ವಾಹನಗಳಲ್ಲಿ ಭಕ್ತರು ಅಕ್ಕಿ, ತೆಂಗಿನಕಾಯಿ, ತರಕಾರಿ, ಧವಸಧಾನ್ಯಗಳನ್ನು ಕೊಂಡೊಯ್ದು ಕ್ಷೇತ್ರಕ್ಕೆ ಸಮರ್ಪಿಸಿದರು.
ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ, ಪಣಪಿಲ ಅರಮನೆಯ ಬಿ. ವಿಮಲ್ ಕುಮಾರ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕಾರ್ಯಧ್ಯಕ್ಷ ಸಂತೋಷ್ ಕೆ. ಪೂಜಾರಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಕೇಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ಪ್ರಮೋದ್ ಆರಿಗ, ಪೂರನ್‌ವರ್ಮ, ಬಿಜೆಪಿ ಮುಖಂಡ ರಂಜಿತ್ ಪೂಜಾರಿ ತೋಡಾರ್,
ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಕೋಟ್ಯಾನ್, ಉಪಾಧ್ಯಕ್ಷ ವಿನೋದರ ಪೂಜಾರಿ ಮತ್ತಿತರರು ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಉಗ್ರಾಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ADVRTISEMENT

Leave a Reply

Your email address will not be published. Required fields are marked *