ಮೂಡುಬಿದಿರೆ: ಜಿಲ್ಲೆಯಲ್ಲಿ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಕೆಲವು ಭಾಗಗಳು ಜಲಾವೃತಗೊಂಡಿವೆ.
ಪುರಸಭಾ ವ್ಯಾಪ್ತಿಯ ಕೆಲವು ಮುಖ್ಯ ರಸ್ತೆಗಳು ನೀರಿನಿಂದ ತುಂಬಿಕೊಂಡಿದ್ದು, ಇದು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡಿದೆ.
ಕೋಟೆಬಾಗಿಲು ಮಾರಿಗುಡಿಯ ದ್ವಾರದ ಸಮೀಪದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದ ಕಾರಣದಿಂದ, ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.
ಸಂಬಂಧಿಸಿದ ಅಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ವಿನಂತಿಸಲಾಗಿದೆ.
Leave a Reply