ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ :ಕಲಂ163ರಂತೆ ನಿಷೇಧಾಜ್ಞೆ ಜಾರಿ

ಮೂಡುಬಿದಿರೆ: ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ನ ಬಗ್ಗೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ಸುಹಾನ್ ಶೆಟ್ಟಿ ಎಂಬಾತನ ಮೇಲೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅದುದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಶ್ ವ್ಯಾಪ್ತಿಯಲ್ಲಿ ಮೇ 2ರಂದು ರಂದು ಬೆಳಿಗ್ಗೆ 06-00 ಗಂಟೆಯಿಂದ ಮೇ 6ರ ಬೆಳಿಗ್ಗೆ 06-00 ಗಂಟೆಯ ವರೆಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಂತೆ ನಿಷೇಧಾಜ್ಞೆಯನ್ನು ಜಾರಿಗೋಳಿಸಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.
ಮೂಡುಬಿದಿರೆಯಲ್ಲಿ ಬಸ್ ಸಂಚಾರ ಬಂದ್ ಬಜ್ಪೆಯಲ್ಲಿ ನಡೆದ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಮಂಗಳೂರು ಮೂಡುಬಿದಿರೆಯಲ್ಲಿ ಕೂಡ ಬಸ್ ಸಂಚಾರ ಸ್ಥಗಿತಗೊಂಡಿದೆ.

ADVRTISEMENT